AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ
ವಕೀಲ ಕೆ.ಎನ್.ಜಗದೀಶ್ ಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 29, 2021 | 12:43 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಯುವತಿಯನ್ನು ಕರೆತರುವುದಕ್ಕೆ ಅನುಮತಿ ನೀಡಿ ಎಂದು ಡೆಪ್ಯುಟಿ ರಿಜಿಸ್ಟ್ರಾರ್‌ಗೆ ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಡೆಪ್ಯುಟಿ ರಿಜಿಸ್ಟ್ರಾರ್ ಬಳಿ ಅನುಮತಿ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಇಂದು ಬೆಳಗ್ಗೆ ಸಿಡಿಯಲ್ಲಿದ್ದ ಯುವತಿಯಿಂದ ಹೈಕೋರ್ಟ್ ಸಿಜೆಗೆ ಇ ಮೇಲ್ ಮೂಲಕ ಪತ್ರ ಬಂದಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು. ಇದೇ ಬೆನ್ನಲ್ಲೆ ದೂರುದಾರೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುತ್ತೇವೆ ಎಂದು ವಕೀಲ ಕೆ.ಎನ್.ಜಗದೀಶ್ ಕುಮಾರ್ ತಿಳಿಸಿದ್ದರು. ಅದರಂತೆಯೆ ಈಗ ಯುವತಿಯನ್ನು ಕರೆತರುವುದಕ್ಕೆ ಅನುಮತಿ ಕೇಳಿದ್ದಾರೆ. ಈ ವೇಳೆ ಅವರು ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸ್ತೇವೆ. ಜಡ್ಜ್ ಮುಂದೆಯೇ ಯುವತಿ ಹೇಳಿಕೆಯನ್ನು ನೀಡುತ್ತಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮೇಲೆ ಚಪ್ಪಲಿ ಎಸೆಯುತ್ತಾರೆ. ಹೀಗಾದಾಗ ಯುವತಿಗೆ ಹೇಗೆ ರಕ್ಷಣೆ ಸಿಗುತ್ತೆ ಎಂದು ಪ್ರಶ್ನೆ ಮಾಡಿದ್ದರು. ಆರೋಪಿ ಅರೆಸ್ಟ್ ಆಗದೇ ಒಳ್ಳೆ ವಾತಾವರಣ ನಿರ್ಮಾಣ ಇಲ್ಲ. ಸುಪ್ರೀಂಕೋರ್ಟ್‌ಗೂ ಒಂದು ಅರ್ಜಿಯನ್ನು ಹಾಕುತ್ತೇವೆ ಎಂದು ಟಿವಿ9ಗೆ ಜಗದೀಶ್ ಕುಮಾರ್ ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹೆಚ್ಚುವರಿ ಭದ್ರತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 5 ಜನ ಇನ್ಸ್ ಪೆಕ್ಟರ್, 10 ಜನ ಸಬ್ ಇನ್ಸ್ ಪೆಕ್ಟರ್, 100 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 3 ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್