ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಎಸ್​ಐಟಿ ರಚನೆಗೆ ಯುವತಿ ಪರ ವಕೀಲರ ಆಕ್ಷೇಪ

ನ್ಯಾಯಮೂರ್ತಿಗಳ ಸೂಚನೆಯ ಮೇರೆಗೆ ಸೌಮೇಂದು ಮುಖರ್ಜಿ ಅವರು ಎಸ್ಐಟಿ ತನಿಖೆ ಪರಿಶೀಲಿಸಿ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಎಸ್​ಐಟಿ ರಚನೆಗೆ ಯುವತಿ ಪರ ವಕೀಲರ ಆಕ್ಷೇಪ
ರಮೇಶ್ ಜಾರಕಿಹೊಳಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 30, 2021 | 4:31 PM

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (Special Investigative Team – SIT) ಸಲ್ಲಿಸಿರುವ ತನಿಖಾ ವರದಿಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಒಪ್ಪಿಗೆ ನೀಡಿದ್ದಾರೆ ಎಂದು ಹೈಕೋರ್ಟ್‌ಗೆ ಎಸ್ಐಟಿ ಪರ ವಕೀಲ ಪ್ರಸನ್ನಕುಮಾರ್ ಹೇಳಿದರು. ನ್ಯಾಯಮೂರ್ತಿಗಳ ಸೂಚನೆಯ ಮೇರೆಗೆ ಸೌಮೇಂದು ಮುಖರ್ಜಿ ಅವರು ಎಸ್ಐಟಿ ತನಿಖೆ ಪರಿಶೀಲಿಸಿ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರ ವರದಿಯನ್ನು ಹೈಕೋರ್ಟ್​ ಮಂಗಳವಾರ ಪರಿಶೀಲಿಸಿತು.

ಎಸ್​ಐಟಿ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದೇನೆ. ತನಿಖಾ ವರದಿ ಸಲ್ಲಿಕೆಗೆ ನನ್ನ ಸಮ್ಮತಿಯಿದೆ ಎಂದು ತಮ್ಮ ವರದಿಯಲ್ಲಿ ಸೌಮೇಂದು ಮುಖರ್ಜಿ ಉಲ್ಲೇಖಿಸಿದ್ದಾರೆ. ಹೀಗಾಗಿ ಅಂತಿಮ ವರದಿ ಸಲ್ಲಿಸಲು ತಕರಾರೇಕೆ? ಅಂತಿಮ ವರದಿಯಲ್ಲಿ ಸಮಸ್ಯೆ ಇದ್ದರೆ ಯುವತಿ ಪ್ರಶ್ನಿಸಲಿ. ಈಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (Public Interest Litigation – PIL) ಬಾಕಿ ಇಡುತ್ತೇವೆ. ಯುವತಿ ಎತ್ತಿರುವ ಪ್ರಶ್ನೆಗಳನ್ನು ನಂತರ ಪರಿಶೀಲಿಸಬಹುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಯುವತಿ ಪರ ವಾದ ಮಂಡಿಸಿದ ವಕೀಲೆ ಇಂದಿರಾ ಜೈಸಿಂಗ್, ಎಸ್ಐಟಿ ಅಂತಿಮ ವರದಿ ಸಲ್ಲಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಿದರು. ಸಚಿವರ ಮನವಿ ಮೇರೆಗೆ ಎಸ್ಐಟಿ ರಚಿಸಲಾಗಿದೆ. ಎಸ್​ಐಟಿ ರಚನೆಯೇ ದೋಷಪೂರಿತ ಎಂದು ವಾದಿಸಿದರು. ಸಚಿವರಾದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು. ನಾವು ಯಾರಿಗೂ ಕೇರ್ ಮಾಡುವುದಿಲ್ಲ ಎಂದು ಸಿಜೆ ರಿತುರಾಜ್ ಅವಸ್ತಿ ಪ್ರತಿಕ್ರಿಯಿಸಿದರು.

ಏನಿದು ಪ್ರಕರಣ? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವ ಎನಿಸಿದ್ದ ರಮೇಶ್ ಜಾರಕಿಹೊಳಿ ಉದ್ಯೋಗದ ಆಮಿಷವೊಡ್ಡಿ ಯುವತಿಯೊಬ್ಬರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂಬ ಆರೋಪ ಪ್ರಬಲವಾಗಿ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದ ಸಿಡಿಯೊಂದು ಬಹಿರಂಗಗೊಂಡು ಸದ್ದು ಮಾಡಿತ್ತು. ಆರಂಭದಲ್ಲಿ ತಮ್ಮ ಮೇಲಿನ ಆರೋಪ ತಳ್ಳಿಹಾಕಿದ್ದ ರಮೇಶ್ ಜಾರಕಿಹೊಳಿ ನಂತರದ ದಿನಗಳಲ್ಲಿ ಇದು ಸಹಮತದ ಲೈಂಗಿಕ ಸಂಪರ್ಕ ಎಂದು ಒಪ್ಪಿಕೊಂಡಿದ್ದರು. ಇದೇ ಪ್ರಕರಣದ ಕಾರಣದಿಂದ ಅವರು ತಮ್ಮ ಸಚಿವ ಸ್ಥಾನವನ್ನೂ ಕಳೆದುಕೊಳ್ಳಬೇಕಾಯಿತು. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದ್ದ ಕರ್ನಾಟಕ ಸರ್ಕಾರವು ಸಮಗ್ರ ತನಿಖೆಗೆ ಆದೇಶಿಸಿತ್ತು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಹೈಕೋರ್ಟ್​ನಿಂದ ಬೆಂಗಳೂರು ಪೊಲೀಸ್ ಕಮಿಷನರ್​ಗೆ ಬಿಗ್ ರಿಲೀಫ್ ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ