ಬೆಂಗಳೂರು, (ಮಾರ್ಚ್ 06): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ (Bengaluru Rameswaram Cafe blast) ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್‌ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ. ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ, ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್‌ಐಎ ಬಿಡುಗಡೆ ಮಾಡಿದೆ.
ಇದನ್ನೂ ಓದಿ: Bomb Threat: ಬೆಂಗಳೂರಿನಲ್ಲಿ ಎಲ್ಲೆಡೆ ಕಟ್ಟೆಚ್ಚರ: ಹೇಗಿದೆ ಭದ್ರತಾ ತಪಾಸಣೆ? ಚಿತ್ರಗಳಲ್ಲಿ ನೋಡಿ
ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್ ಫೋಟೋ ಹಂಚಿಕೊಂಡಿರುವ ಎನ್‌ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.
NIA announces cash reward of 10 lakh rupees for information about bomber in Rameshwaram Cafe blast case of Bengaluru. Informants identity will be kept confidential. pic.twitter.com/F4kYophJFt
— NIA India (@NIA_India) March 6, 2024
ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆ(ಮಾರ್ಚ್ 05) ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದೆ. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ NIA ಅಧಿಕಾರಿಗಳಿಗೆ ನೀಡಿದ್ದಾರೆ.
ಇನ್ನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಎಲ್ಲೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆಯ ಮಾಹಿತಿ ಮೇರೆಗೆ ಎನ್ಎಐ ಅಧಿಕಾರಿಗಳ ಮತ್ತೊಂದಿಷ್ಟು ತಂಡ ದೇಶಾದ್ಯಂತ ಹಲವೆಡೆ ಭರ್ಜರಿ ಕಾರ್ಯಾಚರಣೆ ನಡೆಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:47 pm, Wed, 6 March 24