ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್ಐಎಗೆ ಸಿಕ್ಕಿತು ಚೆನ್ನೈ ಲಿಂಕ್
ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್ಐಎಗೆ ಇದನ್ನು ತಮಿಳುನಾಡಿನ ಮಾಲ್ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದೆ.
ಬೆಂಗಳೂರು, ಮಾ.23: ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಇನ್ನೂ ಸ್ಫೋಟಕ್ಕೂ ಮುನ್ನ 2 ತಿಂಗಳು ಇತ ತಮಿಳುನಾಡಿನಲ್ಲಿದ್ದ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್ಐಎಗೆ ಇದನ್ನು ತಮಿಳುನಾಡಿನ ಮಾಲ್ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದ್ದು, ಜೊತೆಗೆ ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಪತ್ತೆಯಾದ ಕ್ಯಾಪ್ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಎನ್ಐಎ ಅಧಿಕಾರಿಗಳು ಡಿಎನ್ಎ ಟೆಸ್ಟ್ಗೆ ನೀಡಿದ್ದಾರೆ.
ಹಾಗಾದರೇ ಶಂಕಿತರಿಗೂ ತಮಿಳುನಾಡಿಗೂ ಏನು ಲಿಂಕ್?
ಇನ್ನು ಎನ್ಐಎ ತನಿಖೆ ವೇಳೆ ಆ ಇಬ್ಬರು ಕರ್ನಾಟಕದವರೆಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಅವರು ಶಿವಮೊಗ್ಗೆ ಜಿಲ್ಲೆಯ ಮುಸಾವೀರ್ ಮತ್ತು ಹುಸೇನ್ ಶಬೀದ್ ಎಂಬ ಕುರಿತು ಸುಳಿವು ದೊರೆತಿದೆ. ಇವರು ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಉಳಿದುಕೊಂಡಿರುವುದು ಕೂಡ ಪತ್ತೆಯಾಗಿದೆ. ಹಾಗಾದರೆ ಶಂಕಿತರಿಗೂ ತಮಿಳುನಾಡಿಗೂ ಏನು ಸಂಬಂಧ ಎಂಬ ಬಗ್ಗೆ ತನಿಖೆ ಶುರುವಾಗಿದ್ದು, ಸದ್ಯ ಸಿಸಿಟಿವಿಗಳ ಆಧರಿಸಿ ಆರೋಪಿಗಳ ಜಾಲ ಪತ್ತೆ ಹಚ್ಚಲಾಗುತ್ತಿದೆ.
ಇದನ್ನೂ ಓದಿ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್: ಜೈಲಿನಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆದ ಎನ್ಐಎ
ಇನ್ನು ಮಾರ್ಚ್ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮಾ.13 ರಂದು ಎನ್ಐಎ ತಂಡ ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದರು. ಶಬ್ಬೀರ್ ಎಂಬಾತನನ್ನು ಎನ್ಐಎ ಆಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದರು. ಜೊತೆಗೆ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಎನ್ಐಎಗೆ ಇದೀಗ ಮಹತ್ವದ ಸುಳಿವು ಸಿಕ್ಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ