ಉದಯಪುರದಲ್ಲಿ ಪಾಟೀಲ್ – ಡಿಕೆಶಿ ಹೆಗಲ ಮೇಲೆ ಕೈ ಹಾಕಿ ಭಾಯ್ ಭಾಯ್! ಇತ್ತ ನಟಿ ರಮ್ಯಾ ಕೂಲ್ ಕೂಲ್ ಟ್ವೀಟ್! ಏನದು?

ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿ ಎಂ.ಬಿ.ಪಾಟೀಲ್ ನಗುತ್ತಾ ಮಾತನಾಡುತ್ತಿರುವ ಫೋಟೋ ವಿಚಾರಕ್ಕೆ ಸಂಬಂಧಿಸಿ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಒಳ್ಳೆಯ ಕೆಲಸ ಎಂದು ಟ್ವೀಟ್ ಮಾಡಿ ರಾಜ್ಯ ಕಾಂಗ್ರೆಸ್ ಘಟಕದ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೆ ರಮ್ಯಾ ಟ್ವೀಟ್ ಕಾಮೆಂಟ್ ಟ್ಯಾಗ್ ಮಾಡಿದ್ದಾರೆ.

ಉದಯಪುರದಲ್ಲಿ ಪಾಟೀಲ್ - ಡಿಕೆಶಿ ಹೆಗಲ ಮೇಲೆ ಕೈ ಹಾಕಿ ಭಾಯ್ ಭಾಯ್! ಇತ್ತ ನಟಿ ರಮ್ಯಾ ಕೂಲ್ ಕೂಲ್ ಟ್ವೀಟ್! ಏನದು?
ನಟಿ ರಮ್ಯಾ
Follow us
TV9 Web
| Updated By: ಆಯೇಷಾ ಬಾನು

Updated on:May 13, 2022 | 5:33 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಮತ್ತು ಮಾಜಿ ಸಂಸದೆ ರಮ್ಯಾ(Ramya) ನಡುವಿನ ಟ್ವೀಟ್‌ ವಾರ್ ಸದ್ಯ ಶಮನವಾಗುವಂತೆ ಕಾಣುತ್ತಿದೆ. ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿ ಎಂ.ಬಿ.ಪಾಟೀಲ್ ನಗುತ್ತಾ ಮಾತನಾಡುತ್ತಿರುವ ಫೋಟೋ ವಿಚಾರಕ್ಕೆ ಸಂಬಂಧಿಸಿ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಒಳ್ಳೆಯ ಕೆಲಸ ಎಂದು ಟ್ವೀಟ್ ಮಾಡಿ ರಾಜ್ಯ ಕಾಂಗ್ರೆಸ್ ಘಟಕದ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೆ ರಮ್ಯಾ ಟ್ವೀಟ್ ಕಾಮೆಂಟ್ ಟ್ಯಾಗ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರು ಏನೇ ಮಾಡಲಿ ನಾವು ತಲೆ ಕೆಡಿಸಿಕೊಳ್ಳುವುದು ಬೇಡ ಡಿಕೆಶಿ-ಎಂ.ಬಿ.ಪಾಟೀಲ್ ನಡುವೆ ಶೀತಲಸಮರ ವಿಚಾರಕ್ಕೆ ಸಂಬಂಧಿಸಿ ಉದಯಪುರದಲ್ಲಿ ಭೋಜನದ ವೇಳೆ ರಾಜ್ಯ ಕಾಂಗ್ರೆಸ್ ನಾಯಕರ ಅನೌಪಚಾರಿಕ ಮಾತುಕತೆ ನಡೆದಿದೆ. ಘಟನೆ ಬಗ್ಗೆ ಸಿದ್ದರಾಮಯ್ಯಗೆ ಎಂ.ಬಿ.ಪಾಟೀಲ್ ವಿವರಿಸಿದ್ದಾರೆ. ಇದನ್ನ ಮುಂದುವರಿಸುವುದು ಬೇಡ ಎಂದು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಎಂ.ಬಿ.ಪಾಟೀಲ್​ಗೆ ಸಲಹೆ ನೀಡಿದ್ದಾರೆ. ಹಿರಿಯ ನಾಯಕರ ಸಲಹೆ ಬೆನ್ನಲ್ಲೇ ನಿನ್ನೆ ರಾತ್ರಿ ಎಂಬಿಪಿ ಟ್ವೀಟ್ ಮಾಡಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆಯೂ ಭೋಜನದ ವೇಳೆ ಚರ್ಚೆ ನಡೆದಿದೆ.

ಸಿದ್ದರಾಮಯ್ಯ ಜೊತೆ ಇದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್, ಚುನಾವಣೆ ವೇಳೆಗೆ ತಮ್ಮ ಬೆಂಬಲಿಗರ ಗೆಲ್ಲುವ ಅಭ್ಯರ್ಥಿಗಳ ಬೆಂಬಲಕ್ಕೆ ನಿಲ್ಲುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷ ಗಟ್ಟಿಯಾಗಿರುವ ಕ್ಷೇತ್ರಗಳಲ್ಲಿ ಗೊಂದಲ ಸೃಷ್ಠಿಸಲಾಗಿದೆ. ಇದನ್ನ ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಅಂತಿಮಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೆಲ ನಾಯಕರಿಂದ ಸಲಹೆ ಸಿಕ್ಕಿದೆ. ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ ಬಗ್ಗೆ ಚರ್ಚೆ ನಡೆಸಲು ಸಲಹೆ ನೀಡಿದ್ದಾರೆ. ಮುಂದೆ ನೋಡೋಣ ಸದ್ಯಕ್ಕೆ ಬೇಡ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಯಾರು ಏನೇ ಮಾಡಲಿ ನಾವು ತಲೆ ಕೆಡಿಸಿಕೊಳ್ಳುವುದು ಬೇಡ. ನಮ್ಮ ಶಕ್ತಿ ನಮಗೆ ಅವರ ಶಕ್ತಿ ಅವರಿಗೆ ಏನು ಆಗುವುದಿಲ್ಲ. ಎಲ್ಲರಿಗೂ ಒಳ್ಳೆಯದಾಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Published On - 5:21 pm, Fri, 13 May 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ