ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಮಾ.31 ರಂದು ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
ಬೆಂಗಳೂರಿನ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ರಂಜಾನ್ ಹಬ್ಬದ ಪ್ರಾರ್ಥನೆಗಾಗಿ ಸೋಮವಾರ ಬೆಳಿಗ್ಗೆ 5 ರಿಂದ ಮಧ್ಯಾಹ್ನ 1 ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಪಾರ್ಕಿಂಗ್ ನಿಷೇಧಿತ ಪ್ರದೇಶಗಳು ಮತ್ತು ಪರ್ಯಾಯ ಪಾರ್ಕಿಂಗ್ ಸ್ಥಳಗಳ ಮಾಹಿತಿಯನ್ನು ನೀಡಲಾಗಿದೆ. ಸುಗಮ ಸಂಚಾರಕ್ಕಾಗಿ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ.

ಬೆಂಗಳೂರು, ಮಾರ್ಚ್ 30: ಬೆಂಗಳೂರಿನ (Bengaluru) ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ರಂಜಾನ್ (Ramzan) ಹಬ್ಬದ ಪ್ರಾರ್ಥನೆ ಸಲ್ಲಿಸುವ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸೋಮವಾರ ಬೆಳಗ್ಗೆ 05.00 ಗಂಟೆಯಿಂದ ಮದ್ಯಾಹ್ನ 01.00 ಗಂಟೆಯವರೆಗೆ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಬೆಂಗಳೂರು ಸಂಚಾರಿ ಟ್ರಾಫಿಕ್ ಪೊಲೀಸರು (Benagaluru Traffic Police) ನಿಷೇಧಿಸಿದ್ದಾರೆ.
ಪರ್ಯಾಯ ಮಾರ್ಗ
ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರಕ್ಕೆ ಹೋಗುವ ವಾಹನ ಸವಾರರು: ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದುಕೊಂಡು, ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್‌ನಲ್ಲಿ ಎಡ ತಿರುವು ಲಿಂಗರಾಜಪುರಂ ಪ್ರೈ ಓವರ್ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದಾಗಿದೆ.
ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ನರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.
ಟ್ವಿಟರ್ ಪೋಸ್ಟ್
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/6nKc6u9I7Q
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) March 30, 2025
ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.
ನಿಲುಗಡೆ ನಿಷೇಧಿತ ಸ್ಥಳಗಳು:
ಪಾಟರಿ ಸರ್ಕಲ್‌ನಿಂದ ನಾಗವಾರ ಜಂಕ್ಷನ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ಅನ್ನು ನಿಷೇಧಿಸಲಾಗುತ್ತದೆ.
ಇದನ್ನೂ ಓದಿ: ರನ್ಯಾ ಪೊಲೀಸ್ ಪ್ರೋಟೋಕಾಲ್ ಬಳಸುತ್ತಿದ್ದು ಮಲತಂದೆ ಡಿಜಿಪಿ ರಾಮಚಂದ್ರಗೆ ಗೊತ್ತಿತ್ತಾ? ವರದಿಯಲ್ಲಿ ಸ್ಫೋಟಕ ಅಂಶ ಬಯಲು
ಪಾರ್ಕಿಂಗ್ ವ್ಯವಸ್ಥೆ
ಈದ್ಗಾ ಮೈದಾನ ಹಾಗೂ ಬಿಲಾಲ್ ಮಾಸ್ಕ್ ಹತ್ತಿರ ಪ್ರಾರ್ಥನೆ ಸಲ್ಲಿಸುವವರು ಅಲ್ಬನ್ಸ್ ಸ್ಕೂಲ್ ಕ್ರಾಸ್ ರಸ್ತೆಯಲ್ಲಿ ಹಾಗೂ ಪಿಲ್ಲಣ್ಣ ಗಾರ್ಡನ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದಾಗಿದೆ. ಉಮರ್ ಮಸೀದಿ ಹಾಗೂ ಅರೇಬಿಕ್ ಕಾಲೇಜ್ ಹತ್ತಿರ ಪ್ರಾರ್ಥನೆ ಮಾಡುವವರು ಉಮರ್ ಮಸೀದಿ 4ನೇ ಕ್ರಾಸ್ ರಸ್ತೆಯಲ್ಲಿ ಹಾಗೂ ಹೆಚ್.ಬಿ.ಆರ್ 9ನೇ ಕ್ರಾಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದಾಗಿದೆ. ಮಸೀದಿ ಇನ್ ಮುನಾವರ್ ಮಸೀದಿ ಬಳಿ ಪ್ರಾರ್ಥನೆ ಸಲ್ಲಿಸುವವರು ಹೆಚ್.ಬಿ.ಆರ್ 80 ಅಡಿ ರಸ್ತೆ 1ನೇ ಕ್ರಾಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:22 pm, Sun, 30 March 25