ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ

Randeep Surjewala: ಅಡುಗೆ ಸಿಲಿಂಡರ್ ದರ 770 ರೂಪಾಯಿ ಮೀರುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ. 2020-21ರಲ್ಲಿ 2 ಲಕ್ಷ ಕೋಟಿ ತೆರಿಗೆ ಸಂಗ್ರಹಕ್ಕೆ ಮೋದಿ ಸರ್ಕಾರ ನಿರ್ಧರಿಸಿದೆ. ಇದು ನಿಜಕ್ಕೂ ಜನಸಾಮಾನ್ಯರಿಗೆ ಕಷ್ಟವಾಗುತ್ತದೆ ಎಂದು ರಣದೀಪ್ ಸಿಂಗ್ ಅಭಿಪ್ರಾಯಪಟ್ಟರು.

  • TV9 Web Team
  • Published On - 16:50 PM, 17 Feb 2021
ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಬಿಜೆಪಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪೆಟ್ರೋಲ್ ಮತ್ತು ಡೀಸೆಲ್ ದರ 9 ದಿನದಿಂದ ಹೆಚ್ಚುತ್ತಲೇ ಇದೆ. ಕಳೆದ 6 ವರ್ಷದಲ್ಲಿ 20 ಲಕ್ಷ ಕೋಟಿ ರೂ. ಲೂಟಿಯಾಗಿದೆ. ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ. ಆದರೆ ಕರ್ನಾಟಕದಲ್ಲಿ ಏಕೆ ವ್ಯಾಟ್ ರೇಟ್ ಕಡಿಮೆ ಮಾಡಿಲ್ಲ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಡುಗೆ ಸಿಲಿಂಡರ್ ದರ 777 ರೂಪಾಯಿ ಆಗಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ. 2020-21ರಲ್ಲಿ 2 ಲಕ್ಷ ಕೋಟಿ ತೆರಿಗೆ ಸಂಗ್ರಹಕ್ಕೆ ಮೋದಿ ಸರ್ಕಾರ ನಿರ್ಧರಿಸಿದೆ. ಇದರಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ಇದನ್ನೂ ಓದಿ:  ಕನ್ಫರ್ಮ್​.. ಫೆಬ್ರವರಿ 22ರಂದು ಕಾಂಗ್ರೆಸ್​ಗೆ ಸೇರ್ಪಡೆಯಾಗಲಿರುವ ಶರತ್ ಬಚ್ಚೇಗೌಡ