ಅತ್ಯಾಚಾರಕ್ಕೊಳಗಾದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ
ಗರ್ಭಪಾತಕ್ಕೆ ನಿರ್ದೇಶನ ಕೋರಿ 13 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. 13 ವರ್ಷದ ಸಂತ್ರಸ್ತ ಬಾಲಕಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ 25 ವಾರಗಳ ಭ್ರೂಣದ ಗರ್ಭಪಾತಕ್ಕೆ ಮನವಿ ಮಾಡಿದ್ದರು. ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ಶಾಲಾ ಪ್ರಮಾಣಪತ್ರ ಮತ್ತು ರೇಡಿಯಾಲಜಿಸ್ಟ್ ನೀಡಿದ ಸ್ಕ್ಯಾನ್ ವರದಿಯ ಪ್ರಕಾರ ಆಕೆ 25 ವಾರಗಳ ಗರ್ಭಿಣಿ ಎಂದು ಸಂತ್ರಸ್ತೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಬಳಿಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಬಾಲಕಿಯ ಗರ್ಭಪಾತಕ್ಕೆ ವಾಣಿವಿಲಾಸ್ ಆಸ್ಪತ್ರೆಗೆ ಸೂಚನೆ ನೀಡಿದರು.
ವೈದ್ಯರು ಸಂತ್ರಸ್ತ ಬಾಲಕಿಯನ್ನು ತಪಾಸಣೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದರೆ, ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಭ್ರೂಣ ತೆಗೆಸಿದ ನಂತರ ಪ್ರಕರಣದ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣವನ್ನು ಡಿಎನ್ಎ ಪರೀಕ್ಷೆಗಾಗಿ ಕಾಯ್ದಿರಿಸಬೇಕು.
ಇನ್ನೂ ಬಾಲಕಿಯನ್ನು ಆಸ್ಪತ್ರೆಗೆ ಹೋಗುವುದ ಮತ್ತು ಬರುವುದಕ್ಕಾಗಿ ಪೊಲೀಸರು ವ್ಯವಸ್ಥೆ ಮಾಡಬೇಕುವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಎಂದು ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:12 pm, Sat, 12 November 22