ಬೆಂಗಳೂರಿನಲ್ಲಿ ರ‍್ಯಾಪಿಡೋ ರೈಡ್ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಯುವತಿ ಕುಡಿದ ನಶೆಯಲ್ಲಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಬಿಡುವ ಬದಲು ರೂಮ್​ಗೆ ಕರೆದೊಯ್ದಿದ್ದಿದ್ದಾನೆ.

ಬೆಂಗಳೂರಿನಲ್ಲಿ ರ‍್ಯಾಪಿಡೋ ರೈಡ್ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಅಖ್ತರ್​ ಮತ್ತು ಶಹಾಬುದ್ದೀನ್ ​
Follow us
TV9 Web
| Updated By: ಆಯೇಷಾ ಬಾನು

Updated on:Nov 29, 2022 | 3:06 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ನ.28) ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ರ‍್ಯಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹೇಯ ಕೃತ್ಯ ಎಸಗಿದ್ದಾರೆ. ಎಲೆಕ್ಟ್ರಾನಿಕ್​ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ ಮುಸ್ಲಿಂ ಯುವತಿ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಯುವತಿಯನ್ನು ಬಿಟಿಎಂ ಲೇಔಟ್​ನಿಂದ ಪಿಕ್​ ಮಾಡಿ ಎಲೆಕ್ಟ್ರಾನಿಕ್​ಸಿಟಿಯಲ್ಲಿರುವ ಆಕೆಯ ಮನೆಗೆ ಡ್ರಾಪ್​ ಮಾಡಬೇಕಿತ್ತು. ಆದ್ರೆ ಯುವತಿ ಕುಡಿದ ನಶೆಯಲ್ಲಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಬಿಡುವ ಬದಲು ರೂಮ್​ಗೆ ಕರೆದೊಯ್ದಿದ್ದಿದ್ದಾನೆ. ಯುವತಿಯನ್ನು ತನ್ನ ರೂಮ್​ಗೆ ಕರೆದೊಯ್ದು ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ. ಘಟನೆ ಬಗ್ಗೆ ಎಲೆಕ್ಟ್ರಾನಿಕ್​ಸಿಟಿ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು ರ‍್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್​ ಹಾಗೂ ಅತ್ಯಾಚಾರ ನಡೆದರೂ ಏನೂ ಮಾಡದೆ ರೂಮಿನಲ್ಲಿದ್ದ ಯುವತಿಯನ್ನು ಪೊಲೀಸರು​ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Bengaluru: ಕನ್ನಡ ಗೊತ್ತಿಲ್ಲ ಎಂದು ಪಂಜಾಬ್ ಮೂಲದ ಮಹಿಳೆಗೆ ಥಳಿಸಿದ ಗುಂಪು

ಯುವತಿಯ ಅಂಗಾಂಗ ಘಾಸಿಗೊಳಿಸಿದ್ದ ಕೀಚಕರು

ರ‍್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಯುವತಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿ ತನ್ನ ಸ್ನೇಹಿತನ ಜೊತೆ ಸೇರಿ ಹೇಯ ಕೃತ್ಯ ಎಸಗಿದ್ದಾನೆ. ಅಲ್ಲದೆ ಈ ಕೀಚಕರು ಯುವತಿಯ ಖಾಸಗಿ ಅಂಗಾಂಗವನ್ನು ಘಾಸಿಗೊಳಿಸಿದ್ದು ರಕ್ತಸ್ರಾವವಾಗಿದೆ. ಗುದದ್ವಾರದಿಂದ ರಕ್ತಸ್ರಾವ ಹಿನ್ನೆಲೆ ಅತ್ಯಾಚಾರ ನಡೆದ ಬಳಿಕ ಯುವತಿ ಖಾಸಗೀ ಆಸ್ಪತ್ರೆಗೆ ತೆರಳಿದ್ದಾಳೆ. ವೈದ್ಯರ ಬಳಿ ನಡೆದ ಘಟನೆ ವಿವರಿಸಿದ್ದಾಳೆ. ಯುವತಿ ಹೇಳಿಕೆ ಆಧರಿಸಿ ಮೆಮೊ ಖಾಸಗಿ ಆಸ್ಪತ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದು ಆ ಮಾಹಿತಿ ಆಧರಿಸಿ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶ: ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿರುವ ವ್ಯಕ್ತಿಯ ಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದು ಸೇಡು ತೀರಿಸಿದ ಯುವಕ, ಆರೋಪಿ ಬಂಧನ

ಗುರುವಾರ ರಾತ್ರಿ ಬೆಳಗಿನ ಜಾವದ ವರೆಗೂ ಅತ್ಯಾಚಾರ ನಡೆದಿದೆ. ಪ್ರಕರಣದಲ್ಲಿ ಒಟ್ಟು ಮೂರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪುರುಷರು ಸೇರಿ ಮತ್ತಿಬ್ಬ ಯುವತಿ ಅರೆಸ್ಟ್ ಆಗಿದ್ದಾಳೆ. ಬೆಂಗಳೂರು ದಕ್ಚಿಣ ತಾಲೂಕಿನ ಎಲೆಕ್ಟ್ರಾನಿಕ್ ಸೀಟಿಯ ನೀಲಾದ್ರಿ ನಗರ ಸಮೀಪ ಕೃತ್ಯ ನಡೆದಿದೆ.

ಪ್ರಕರಣ ಸಂಬಂಧ ಕಮಿಷನರ್ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದು, ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಪ್ಪತ್ತೆರಡು ವರ್ಷ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಆಗಿದೆ. ಗೆಳೆಯನ ಮನೆಯಿಂದ ಮತ್ತೊಬ್ಬ ಗೆಳೆಯನ ಮನೆಗೆ ಹೋಗಲು ಯುವತಿ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಾಳೆ. ದಾರಿ ಮಧ್ಯೆ ರ‍್ಯಾಪಿಡೋ ಚಾಲಕ ತನ್ನ ಗೆಳೆಯನನ್ನು ಕರೆಸಿಕೊಂಡಿದ್ದಾನೆ. ನಂತ್ರ ಎಲೆಕ್ಟ್ರಾನಿಕ್ ಸಿಟಿಯ ಒಂದು ಜಾಗಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಇದಕ್ಕೆ ಓರ್ವ ಮಹಿಳೆ ವಿಚಾರ ಗೊತ್ತಿದ್ದೂ ಸಹಕಾರ ನೀಡಿದ್ದಾಳೆ. ಮರುದಿನ ಯುವತಿ ಆಗಮಿಸಿ ದೂರು ನೀಡಿದ್ದಾರೆ. ದೂರಿನ ಅನ್ವಯ ಕೇಸ್ ದಾಖಲು ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಓರ್ವ ಆರೋಪಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ. ಇನ್ನೊಬ್ಬ ಆರೋಪಿ ರ‍್ಯಾಪಿಡೋ ಬೈಕ್ ಸವಾರನಾಗಿ ಕೆಲಸ ಮಾಡ್ತಿದ್ದ. ಮಹಿಳೆ ಆರೋಪಿತನ ಗೆಳೆತಿ. ಈಕೆ ರೂಮ್ ನಲ್ಲಿ ಇದ್ದು ಅತ್ಯಾಚಾರ ಮಾಡಿದ್ದ ಸಮಯದಲ್ಲಿ ಹಾಜರಿದ್ದಳು ಎಂದು ಕಮಿಷನರ್ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಅತ್ಯಾಚಾರಿಗಳಿಗೆ ಪಾಠ ಕಲಿಸಲು ಹೊಸ ಮಾದರಿಯ ಪಾದರಕ್ಷೆ

ಕಲಬುರಗಿ: ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅತ್ಯಾಚಾರ ಪ್ರಕರಣಕ್ಕೆ ಕಡಿವಾಣ ಹಾಕಲು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಹೊಸ ಮಾದರಿಯ ಪಾದರಕ್ಷೆ ಇನೋವೇಟ್ ಮಾಡಿದ್ದಾರೆ. ಮಹಿಳೆಯರ ರಕ್ಷಣೆಗೆ ಆ್ಯಂಟಿ ರೇಪ್ ಪುಟವೇರ್ ಮಾದರಿಯನ್ನು ಸಿದ್ಧಪಡಿಸಿದ್ದಾರೆ. ಕಲಬುರಗಿ ನಗರದ ಎಸ್​ಆರ್​ಎನ್ ಮೆಹತಾ, ಖಾಸಗಿ ಶಾಲೆ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಬಿರಾದಾರ, ಪುಟೇವರ್ ನಲ್ಲಿ ಲಘು ವಿದ್ಯುತ್ ಶಾಕ್ ಹೊಡೆಯುವ ವ್ಯವಸ್ಥೆ ರೂಪಿಸಿದ್ದಾರೆ. ಅತ್ಯಾಚಾರಿಗಳು, ದುಷ್ಕರ್ಮಿಗಳಿಂದ ಸುಲಭವಾಗಿ ತಪ್ಪಿಸಿಕೊಳ್ಳಲು ಆ್ಯಂಟಿ ರೇಪ್ ಪುಟವೇರ್ ಸಹಾಯಕವಾಗಿದೆ.

Published On - 1:21 pm, Tue, 29 November 22

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ