Rapido Bike Taxi: ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ಧರಣಿ

ಒಂದೆಡೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಬೆಂಗಳೂರು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದ್ದಾರೆ.

Rapido Bike Taxi: ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ಧರಣಿ
ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ
Follow us
Rakesh Nayak Manchi
|

Updated on:Mar 27, 2023 | 9:53 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ಜೋರಾಗಿಯೇ ತಟ್ಟುತ್ತಿದೆ. ಮೀಸಲಾತಿ, ವೇತನ ಪರಿಷ್ಕರಣೆ ವಿಚಾರದಲ್ಲಿ ಪ್ರತಿಭಟನೆ ಬಿಸಿ ತಟ್ಟಿಸಿಕೊಂಡಿದ್ದ ಸರ್ಕಾರ ಒಂದು ಹಂತದಲ್ಲಿ ಬೇಡಿಕೆ ಈಡೇರಿಸಿ ಜನರನ್ನು, ನೌಕರರನ್ನು ಮನವೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಆಟೋ ಚಾಲಕರ (Bengaluru Auto Drivers) ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ (Rapido Bike Taxi Drivers) ನಡುವಿನ ಹಗ್ಗಜಗ್ಗಾಟ ಸರ್ಕಾರದ ತಲೆಬಿಸಿಯನ್ನು ಮತ್ತೆ ಹೆಚ್ಚಿಸಿದೆ. ಒಂದೆಡೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಬೆಂಗಳೂರು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುವ ಮೂಲಕ ಆಟೋ ಚಾಲಕರಿಗೆ ಕೌಂಟರ್ ಕೊಡಲು ಮುಂದಾಗಿದ್ದಾರೆ.

ನಗರದಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ಬೈಕ್ ಟ್ಯಾಕ್ಸಿ ಚಾಲಕರು ಮುಂದಾಗಿದ್ದಾರೆ. ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

ಬೈಕ್ ಟ್ಯಾಕ್ಸಿ ಚಾಲಕರ ಪ್ರತಿನಿಧಿಸುವ ನಗರದ ಏಕೈಕ ಸಂಸ್ಥೆಯಾಗಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ತಮ್ಮ ಸದಸ್ಯರ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯ ಪ್ರಶ್ನಿಸಿ ಇಂದು ಧರಣಿ ನಡೆಸಲು ಮುಂದಾಗಿದೆ. ಈ ಹಿಂದೆ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಬೈಕ್ ಚಾಲಕನ ಹೆಲ್ಮೆಟ್ ಅನ್ನು ಆಟೋ ಡ್ರೈವರ್ ಒಡೆದು ಹಾಕಿದ್ದ ಘಟನೆ ನಡೆದಿತ್ತು. ನಂತರ ಬೈಕ್​​ ಟ್ಯಾಕ್ಸಿ ರೈಡರ್ ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ವಾಹನವನ್ನು ಬಳಸಿದ್ದಕ್ಕಾಗಿ ಆತನನ್ನು ಅವಾಚ್ಯವಾಗಿ ನಿಂದಿಸಿದಲ್ಲದೇ, ಬೈಕ್​ ಸುಡುವುದಾಗಿ ಬೆದರಿಕೆ ಹಾಕಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು.

ಇದನ್ನೂ ಓದಿ: ಈ ಬಾರಿ ಎಲೆಕ್ಷಲ್​ನಲ್ಲಿ ವೋಟ್ ಹಾಕಲ್ಲ: ಆಟೋ ಚಾಲಕರ ವಿನೂತನ ಅಭಿಯಾನಕ್ಕೆ ಹೆಂಡ್ತಿ, ಮಕ್ಳ ಸಾಥ್

ಹೀಗೆ ನಗರದಲ್ಲಿ ಬೈಕ್​​ ಟ್ಯಾಕ್ಸಿ ರೈಡರ್​ಗಳ ಮೇಲೆ ಆಟೋ ಚಾಲಕರು ಪದೇ ಪದೇ ಕಿರುಕುಳ ನೀಡುತ್ತಿರುವುದು ವರದಿಯಾಗುತ್ತಲೇ ಇವೆ. ಇದನ್ನು ಪ್ರಶ್ನೆ ಮಾಡಿ ಸೂಕ್ತ ಸುರಕ್ಷತಾ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಜೀವನ ನಡೆಸಲು ಹೊಟ್ಟೆ ಪಾಡಿಗೆ ಎಷ್ಟೋ ಜನ ಬೈಕ್ ಟ್ಯಾಕ್ಸಿ ಓಡಿಸುತ್ತಾರೆ. ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ, ಆದರೆ ನಮ್ಮನ್ನ ಪ್ರಚೋದನೆ ಮಾಡುವ ಕೆಲಸ ಆಗುತ್ತಿದೆ. ಆಟೋ ಚಾಲಕರು ತಮ್ಮ ಸಮಸ್ಯೆಗೆ ಸಾರಿಗೆ ಇಲಾಖೆ ಜೊತೆ ಹಾಗೂ ಸರ್ಕಾರದ ಜೊತೆ ಮಾತಾಡಿ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ನಮ್ಮ ಮೇಲೆ ದೌರ್ಜನ್ಯ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸುತ್ತಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿರುವ ಒಂದಲ್ಲಾ ಒಂದು ಪ್ರತಿಭಟನೆಗಳು ಸರ್ಕಾರಕ್ಕಿರುವ ತಲೆನೋವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಆಟೋ ಚಾಲಕರು ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಘರ್ಷಣೆಯನ್ನು ಸರ್ಕಾರ ಹೇಗೆ ಶಮನಗೊಳಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 am, Mon, 27 March 23

ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು