ರೇವ್ ಪಾರ್ಟಿ ಪ್ರಕರಣ ಸಿಸಿಬಿಗೆ ವರ್ಗಾವಣೆ; ಇಲ್ಲಿ ಡ್ರಗ್ಸ್ ಒಂದೇ ಅಲ್ಲ ಬೇರೆ ದಂಧೆಯೂ ನಡೀತಿತ್ತು

ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣವನ್ನು ಅಧಿಕೃತವಾಗಿ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಮತ್ತೊಂದೆಡೆ ಈ ಪ್ರಕರಣ ಸಂಬಂಧ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಬರ್ತಡೆ ಪಾರ್ಟಿ ನೆಪದಲ್ಲಿ ನಡೆದ ಈ ಪಾರ್ಟಿಯಲ್ಲಿ ಡ್ರಗ್ಸ್ ಅಷ್ಟೇ ಅಲ್ಲ ಸೆಕ್ಸ್ ದಂಧೆಯೂ ನಡೆಯುತ್ತಿತ್ತು.

ರೇವ್ ಪಾರ್ಟಿ ಪ್ರಕರಣ ಸಿಸಿಬಿಗೆ ವರ್ಗಾವಣೆ; ಇಲ್ಲಿ ಡ್ರಗ್ಸ್ ಒಂದೇ ಅಲ್ಲ ಬೇರೆ ದಂಧೆಯೂ ನಡೀತಿತ್ತು
ಸಿಸಿಬಿ
Follow us
Prajwal Kumar NY
| Updated By: ಆಯೇಷಾ ಬಾನು

Updated on:May 22, 2024 | 10:38 AM

ಬೆಂಗಳೂರು, ಮೇ.22: ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ಮೇ.19 ರಂದು ನಡೆದಿದ್ದ ರೇವ್ ಪಾರ್ಟಿ (Rave Party) ಪ್ರಕರಣವನ್ನು ಅಧಿಕೃತವಾಗಿ ಸಿಸಿಬಿಗೆ (CCB) ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಡಿಜಿ ಅಂಡ್ ಐಜಿಪಿ ಅಲೋಕ್ ಮೋಹನ್ (Alok Mohan) ಅಧಿಕೃತ ಆದೇಶ ಹೊರಡಿಸಿದ್ದಾರೆ. ಸದ್ಯ ಸಿಸಿಬಿ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಇನ್ಸ್ಪೆಕ್ಟರ್ ಲಕ್ಷ್ಮೀ ಪ್ರಸಾದ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

ರೇವ್ ಪಾರ್ಟಿ ಕೇಸ್​ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಮೇ.19ರ ಭಾನುವಾರ ಮಾತ್ರ ರೇವ್ ಪಾರ್ಟಿ ನಡೆದಿದೆ ಎನ್ನಲಾಗುತ್ತಿತ್ತು. ಆದರೆ ತನಿಖೆ ವೇಳೆ ಈ ಪಾರ್ಟಿ ಶನಿವಾರ ಸಂಜೆ ಐದು ಘಂಟೆಯಿಂದ ಶುರುವಾಗಿದ್ದು ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿ ಒಟ್ಟು 250ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು ಹಲವಾರು ಜನರು ಶನಿವಾರ ಪಾರ್ಟಿಗೆ ಬಂದು ವಾಪಸ್ಸು ಹೋಗಿದ್ದಾರೆ. ಇನ್ನೂ ಕೆಲವರು ಭಾನುವಾರ ಪಾರ್ಟಿಗೆ ಜಾಯಿನ್ ಆಗಿದ್ದಾರೆ. ಪೊಲೀಸ್ ದಾಳಿ ವೇಳೆ ಸಹ ಕೆಲವರು ಎಸ್ಕೇಪ್ ಆಗಿದ್ದಾರೆ. ಸದ್ಯ ಎಸ್ಕೇಪ್ ಆಗಿದ್ದವರನ್ನು ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ.

ಅದು ಬರ್ತಡೆ ಪಾರ್ಟಿ ಅಲ್ಲ; ಬದಲಿಗೆ ಡ್ರಗ್ಸ್, ಸೆಕ್ಸ್ ಪಾರ್ಟಿ

ಇನ್ನು ಮತ್ತೊಂದು ಅಚ್ಚರಿಯ ಮಾಹಿತಿ ಎಂದರೆ ಈ ರೇವ್ ಪಾರ್ಟಿಯನ್ನು ಬರ್ತಡೆ ಸೆಲೆಬ್ರೇಷನ್ ಹೆಸರಲ್ಲಿ ನಡೆಸಲಾಗುತ್ತಿತ್ತು. ಇಲ್ಲಿ ಡ್ರಗ್ಸ್ ಮಾತ್ರ ಅಲ್ಲ ಸೆಕ್ಸ್ ಸಹ ಇತ್ತು ಎಂಬ ಶಾಕಿಂಗ್ ಮಾಹಿತಿ ತಿಳಿದುಬಂದಿದೆ. ಡ್ರಗ್ಸ್ ಜಾಲದ ಜೊತೆಗೆ ಸೆಕ್ಸ್‌ ಜಾಲದ ಬಗ್ಗೆ ಸಿಸಿಬಿಗೆ ಕೆಲ ಮಾಹಿತಿಗಳು ಲಭ್ಯವಾಗಿವೆ. ಈ ಹಿನ್ನಲೆ ಪ್ರಕರಣದ ತೀವ್ರತೆ ಹೆಚ್ಚಿದೆ. ವಾಸು ಬರ್ತಡೆ ಪಾರ್ಟಿ ಎಂದು ನೆಪಕ್ಕೆ ಆಯೋಜನೆ ಮಾಡಿದ್ದು ಅಕ್ರಮ ನಡೆಸಲಾಗಿದೆ. ಓರ್ವರಿಗೆ ಇಂತಿಷ್ಟು ಎಂದು ಹಣ ಪಡೆದು ಪಾರ್ಟಿಗೆ ಕರೆಸಿದ್ದಾರೆ. ಸಿಕ್ಕ ಮಾಹಿತಿ ಪ್ರಕಾರ ಓರ್ವನ ಎಂಟ್ರಿಗೆ ಎರಡು ಲಕ್ಷ ಪಡೆಯಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ ಪೊಲೀಸರು ಬಂದು ಕೇಳಿದ್ರೆ ನಾವು ಬರ್ತಡೆಗೆ ಬಂದಿದ್ದೇವೆ. ನಾವೆಲ್ಲರೂ ವಾಸು ಗೆಳೆಯರು ಎಂದು ಹೇಳಬೇಕು ಎಂದು ಹೇಳಿಕೊಡಲಾಗಿತ್ತು. ಅದ್ರಂತೆ ಪೊಲೀಸರು ಪ್ರಶ್ನೆ ಮಾಡಿದಾಗ ವಾಸು ಬರ್ತಡೆಗೆ ಬಂದಿದ್ದೇವೆ ಎಂದು ಎಲ್ಲಿದ್ದವರು ಹೇಳಿಕೆ ನೀಡಿದ್ದರು. ತನಿಖೆ ವೇಳೆ ಬರ್ತಡೆ ಪಾರ್ಟಿ ಸುಳ್ಳು ಎಂಬುದು ಬಯಲಾಗಿದೆ.

ಇದನ್ನೂ ಓದಿ: ನಟಿ ಹೇಮಾ ರೇವ್ ಪಾರ್ಟಿಯಲ್ಲಿದ್ದಿದ್ದು ನಿಜ, ಖಚಿತಪಡಿಸಿದ ಪೊಲೀಸ್ ಆಯುಕ್ತ, ಹಾಗಿದ್ದರೆ ವಿಡಿಯೋ ಮಾಡಿದ್ದು ಹೇಗೆ?

ಪಾರ್ಟಿಗೆ ರಾಜ್ ಭಾವ ಪ್ರಮುಖ ಡ್ರಗ್ಸ್ ಪೆಡ್ಲರ್

ಈ ಪಾರ್ಟಿಯಲ್ಲಿ ರಾಜ್ ಭಾವ ಎಂಬಾತ ಎಲ್ಲರಿಗೂ ಡ್ರಗ್ಸ್ ತಂದು ನೀಡುತ್ತಿದ್ದ. ಹೊರಗಿನಿಂದ ನೋಡುವವರಿಗೆ ಇದೊಂದು ಮ್ಯೂಸಿಕ್, ಊಟ ಮತ್ತು ಮದ್ಯದ ಪಾರ್ಟಿ ಎನ್ನುವಂತೆ ತೋರುತ್ತಿತ್ತು. ಆದರೆ ಪಾರ್ಟಿಯೊಳಗೆ ವೆರೈಟಿ ವೆರೈಟಿ ಡ್ರಗ್ಸ್ ನೀಡಲಾಗುತ್ತಿತ್ತು. ಸದ್ಯ ವೈದ್ಯಕೀಯ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಒಂದು ಸಲ ವೈದ್ಯಕೀಯ ವರದಿ ಬಂದ ನಂತರ ಎಷ್ಟು ಜನರು ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಗಲಿದೆ.  ಸಿಸಿಬಿ ಪೊಲೀಸರು ಈಗ ಅಸಲಿ ತನಿಖೆ ಶುರು ಮಾಡಲಿದ್ದಾರೆ.

ಸಿಸಿಬಿ ಪೊಲೀಸರಿಗೆ ಕಮಿಷನರ್ ಬಿ ದಯಾನಂದ ಖಡಕ್ ಸೂಚನೆ ನೀಡಿದ್ದು ಪ್ರಕರಣ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಎಂದಿದ್ದಾರೆ. ನಗರದಲ್ಲಿ ಇಂತಹ ಡ್ರಗ್ಸ್ ಮತ್ತು ರೇವ್ ಪಾರ್ಟಿಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು. ಪಾರ್ಟಿ ಆಯೋಜನೆ, ಪಾರ್ಟಿಗೆ ಡ್ರಗ್ಸ್ ಸಪ್ಲೆ, ಪಾರ್ಟಿಗೆ ಸ್ಥಳದ ಅವಕಾಶ ನೀಡುವುದು ಹೀಗೆ ಎಲ್ಲಾ ಮಾದರಿಯಲಿಯೂ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:38 am, Wed, 22 May 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?