ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ-ಸಚಿವ ಆರ್​​.ಬಿ.ತಿಮ್ಮಾಪುರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 02, 2024 | 2:47 PM

ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ(Liquor Price) ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ(RB Thimmapur) ಸ್ಪಷ್ಟನೆ ನೀಡಿದ್ದಾರೆ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್​​ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದರು.

ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ-ಸಚಿವ ಆರ್​​.ಬಿ.ತಿಮ್ಮಾಪುರ
ಆರ್​ಬಿ ತಿಮ್ಮಾಪುರ
Follow us on

ಬೆಂಗಳೂರು, ಜ.02: ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ(Liquor Price) ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ(RB Thimmapur) ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್​​ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎನ್ನುವ ಮೂಲಕ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.

ಮಧ್ಯದ ಮೇಲೆ ದರ ಏರಿಕೆ – ಸ್ಪಷ್ಟನೆ ನೀಡಿದ ಸಚಿವರು

ಈ ಹಿಂದೆ 17% ರಷ್ಟು ಎಲ್ಲಾ ಮಾದರಿಯ ಮಧ್ಯದ ಮೇಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ರಾಜ್ಯಾದ್ಯಂತ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಜೊತೆಗೆ ಮದ್ಯ ಉತ್ವಾದಕ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ ಎನ್ನಲಾಗಿತ್ತು. ಇದಕ್ಕೆ ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ:ಮದ್ಯ ಪ್ರಿಯರಿಗೆ ಶಾಕ್; ಬಡವರ ಫೇವರಿಟ್ ಬ್ರ್ಯಾಂಡ್​ಗಳ ದರ ಹೆಚ್ಚಳ

ಇನ್ನು ಇದೇ ವೇಳೆ ಜನವರಿ 22ರಂದು ರಾಮಲಲ್ಲಾ ಪ್ರತಿಷ್ಠಾಪನೆ ವಿಚಾರ ‘ರಾಮನ ಗುಡಿ ಕಟ್ಟಿದರೆ ಸಾಲದು, ರಾಮ ರಾಜ್ಯ ಆಗಬೇಕು. ಧರ್ಮ, ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು, ಧರ್ಮ, ದೇವರು ವಿಚಾರದಲ್ಲಿ ನಮಗೆ ನಂಬಿಕೆ ಇರಬೇಕು. ಆದರೆ, ನನ್ನದೇ ಧರ್ಮ, ನಾನೇ ಸ್ಥಾಪನೆ ಮಾಡುತ್ತೇನೆ ಎನ್ನುವುದು ನಾನೇ ದೇವಸ್ಥಾನ ಕಟ್ಟುಬಿಡುತ್ತೇನೆ ಎನ್ನುವುದು ಸರಿಯಲ್ಲ, ಇಂತಹ ವಿಚಾರಗಳಿಂದ ದೇಶ ದಿವಾಳಿಯಾಗಲಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Tue, 2 January 24