AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು

Bengaluru RCB victory Celebration Stampede: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು
ಕಿಕ್ಕಿರಿದು ಸೇರಿರುವ ಆರ್​ಸಿಬಿ ಅಭಿಮಾನಿಗಳು
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jun 04, 2025 | 8:02 PM

Share

ಬೆಂಗಳೂರು, ಜೂನ್​ 04: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು (Bengaluru) ನಗರಕ್ಕೆ ಬಂದಿದ್ದಾರೆ.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿದೆ.  ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್​ಸಿಬಿ ಅಭಿಮಾನಿಗಳು ಸೇರಿದಂತೆ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ನೋಡಿ: ವಿಧಾನಸೌಧದ ಮುಂದೆ ಆರ್​ಸಿಬಿ ಅಭಿಮಾನಿಗಳ ದಂಡು, ಎತ್ತ ನೋಡಿದರೂ ರೆಡ್​ ಆರ್ಮಿ!

ಇದನ್ನೂ ಓದಿ
Image
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
Image
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದ ಆರ್​ಸಿಬಿ
Image
ಆರ್​​ಸಿಬಿ ಮಾಲೀಕರು ಯಾರು? ಐಪಿಎಲ್ ಗೆಲುವಿನಿಂದ ಸಿಕ್ಕ ಲಾಭವೆಷ್ಟು?
Image
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Wed, 4 June 25

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ