AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಆರ್‌ಸಿಬಿ vs ಸಿಎಸ್‌ಕೆ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಿಂದ ವಿವಿಧ ಮಾರ್ಗಗಳಲ್ಲಿ ಬಿಎಂಟಿಸಿ ವಿಶೇಷ ಬಸ್​​ಗಳು ಸಂಚಾರ ನಡೆಸಲಿವೆ. ಅಭಿಮಾನಿಗಳ ಅನುಕೂಲಕ್ಕಾಗಿ 8 ಮಾರ್ಗಗಳಲ್ಲಿ ಬಸ್‌ಗಳು ಓಡಾಟ ನಡೆಸಲಿದ್ದು, ಮೆಟ್ರೋ ಸಮಯ ವಿಸ್ತರಣೆಯ ಜೊತೆಗೆ ಈ ಬಸ್ ಸೇವೆಗಳು ಜನಸಂದಣಿ ನಿಯಂತ್ರಣಕ್ಕೆ ಸಹಕಾರಿಯಾಗಲಿವೆ. ಜೊತೆಗೆ ಕ್ರೀಡಾಂಗಣದ ಸುರಕ್ಷತೆಗಾಗಿ ಕೆಲವು ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ
BMTC ಬಸ್​​ Image Credit source: Google
ಪ್ರದೀಪ್​ ಚಿಕ್ಕಾಟಿ
| Edited By: |

Updated on: Apr 04, 2026 | 7:58 PM

Share

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ.

ಬಸ್​​ ಸಂಚರಿಸಲಿರುವ ಮಾರ್ಗಗಳು

  • ಚಿನ್ನಸ್ವಾಮಿ ಸ್ಟೇಡಿಯಂ ಟು ಕಾಡುಗೋಡಿ ಬಸ್ ನಿಲ್ದಾಣ, HAL ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಸರ್ಜಾಪುರ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಎಲೆಕ್ಟ್ರಾನಿಕ್ ಸಿಟಿ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
  • ಚಿನ್ನಸ್ವಾಮಿ ಸ್ಟೇಡಿಯಂ ಟು ಜನಪ್ರಿಯ ಟೌನ್​ಶಿಪ್, ಮಾಗಡಿ ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಆರ್.ಕೆ.ಹೆಗಡೆ ನಗರ, ಯಲಹಂಕ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಹೊಸಕೋಟೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಬನಶಂಕರಿ

ಇದನ್ನೂ ಓದಿ: ನಾಳೆ ಬೆಂಗಳೂರಲ್ಲಿ RCB, CSK ಮ್ಯಾಚ್​​; ಅಭಿಮಾನಿಗಳಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

ಈ ವಿಶೇಷ ಬಿಎಂಟಿಸಿ ಬಸ್​​ಗಳು ಸಿ.ಟಿ.ಒ ಜಂಕ್ಷನ್​​ನಿಂದ ಬಿ.ಆರ್.ವಿ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ನಿಲುಗಡೆಯಾಗಲಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಸ್ಟೇಡಿಯಂಗೆ ಕೆಲ ವಸ್ತುಗಳನ್ನು ತರುವುದು ನಿಷೇಧ

ಸುರಕ್ಷತೆ ದೃಷ್ಟಿಯಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳು ಕೆಲ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ದಯವಿಟ್ಟು ನಿರ್ಬಂಧಿತ ವಸ್ತುಗಳನ್ನು ತರದೇ, ಸುರಕ್ಷತಾ ತಪಾಸಣೆಯ ಸಿಬ್ಬಂದಿಗಳೊಂದಿಗೆ ಸಹಕರಿಸಿ ಎಂದೂ ಪೊಲೀಸರು ಮನವಿ ಮಾಡಿದ್ದಾರೆ. ಸಂಶಯಾಸ್ಪದ ವಸ್ತುಗಳು ಕಂಡಿಬಂದಲ್ಲಿ ಅವನ್ನು ವಶಕ್ಕೆ ಪಡೆಯುವುದಾಗಿಯೂ ಮುನ್ನೆಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Pradeep Chikkati
Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!