AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Match In Bengaluru: ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ-ಲಕ್ನೋ IPL ಮ್ಯಾಚ್; ಸಂಚಾರ ಮಾರ್ಗದಲ್ಲಿ ಬದಲಾವಣೆ

ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಮಾವಣೆ ಮಾಡಲಾಗಿದೆ.

RCB Match In Bengaluru: ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ-ಲಕ್ನೋ IPL ಮ್ಯಾಚ್; ಸಂಚಾರ ಮಾರ್ಗದಲ್ಲಿ ಬದಲಾವಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ-ಲಕ್ನೋ IPL ಮ್ಯಾಚ್ ಹಿನ್ನೆಲೆ ಏಪ್ರಿಲ್ 10ರಂದು ಸಂಚಾರ ಮಾರ್ಗದಲ್ಲಿ ಬದಲಾವಣೆ
Rakesh Nayak Manchi
Rakesh Nayak Manchi|

Updated on:Apr 09, 2023 | 9:50 PM

Share

ಮುಖ್ಯಾಂಶಗಳು

  • ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ
  • ಆರ್​ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಂದ್ಯ
  • ಐಪಿಎಲ್ ಪಂದ್ಯ ಹಿನ್ನೆಲೆ ಬೆಂಗಳೂರಿನ ಕೆಲವೆಡೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಾಳೆ (ಏಪ್ರಿಲ್ 10) ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ರಾಜ್ಯದಲ್ಲಿ ಆರ್​ಸಿಬಿ ಅಭಿಮಾನಿಗಳ ಸಂಖ್ಯೆ ಅತ್ಯಧಿಕವಾಗಿರುವುದರಿಂದ ನಾಳಿನ ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುತ್ತಾರೆ. ಹೀಗಾಗಿ ವಾಹನ ಸವಾರರ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸ್ ಇಲಾಖೆ ಸಂಚಾರ ಮಾರ್ಗದಲ್ಲಿ ಬದಮಾವಣೆ ಮಾಡಿದೆ. ಮಾರ್ಗ ಬದಲಾವಣೆಯು ಪಂದ್ಯ ನಡೆಯುವ ದಿನ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಇರಲಿದೆ. ನಂತರ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಈ ಮಾರ್ಗದಲ್ಲಿ ಸಂಚಾರಕ್ಕೆ ನಿರ್ಬಂಧ

ಎಂಜಿ ರೋಡ್, ಕ್ವೀನ್ಸ್ ರೋಡ್, ಎಂಜಿ ರೋಡ್​ನಿಂದ ಕಬ್ಬನ್ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರೋಡ್, ಕಬ್ಬನ್ ರೋಡ್, ಸೆಂಟ್ ಮಾರ್ಕ್ಸ್ ರೋಡ್, ಮ್ಯೂಸಿಯಂ ರೋಡ್, ಕಸ್ತುರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರೋಡ್, ವಿಠಲ್ ಮಲ್ಯ ರೋಡ್, ನೃತತುಂಗ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಾಹನ ಸವಾರರು ಸಂಜೆ 4 ಗಂಟೆಯಿಂದ 10 ಗಂಟೆ ವರೆಗೆ ಈ ರಸ್ತೆ ಮಾರ್ಗಗಳನ್ನು ಬಳಸದೆ ಬೇರೆ ಮಾರ್ಗಗಳಲ್ಲಿ ಸಂಚರಿಸಬೇಕಾಗಿದೆ.

ಇದನ್ನೂ ಓದಿ: IPL 2023: RCB ತಂಡದಲ್ಲಿ 2 ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11

ಪಾರ್ಕಿಂಗ್ ವ್ಯವಸ್ಥೆ: ಕಿಂಗ್ಸ್ ರಸ್ತೆ, ಬಿಆರ್​ಬಿ ಮೈದಾನ, ಕಂಠೀರವ ಕ್ರೀಡಾಂಗಣ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಓಲ್ಡ್​ ಕೆಜಿಯಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿದ್ದ ಆರ್​ಸಿಬಿ (RCB) ತಂಡವು 2ನೇ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ಕೆಲವು ಆಟಗಾರರನ್ನು ಕೈಬಿಟ್ಟು ಅವರ ಜಾಗಕ್ಕೆ ಬೇರೆ ಆಟಗಾರರನ್ನು ಕಣಕ್ಕಿಳಿಸಲು ಮುಂದಾಗಿದೆ. ಆ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಆರ್​ಸಿಬಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Sun, 9 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ