Bengaluru Traffic Advisory: ಬೆಂಗಳೂರಿನಲ್ಲಿಂದು ಆರ್​​ಸಿಬಿ, ಎಸ್​ಆರ್​ಎಚ್ ಪಂದ್ಯ; ಎಲ್ಲೆಲ್ಲಿ ಪಾರ್ಕಿಂಗ್? ಇಲ್ಲಿದೆ ಮಾಹಿತಿ

|

Updated on: Apr 15, 2024 | 7:41 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ಇಂದು ನಡೆಯಲಿದ್ದು, ಟ್ರಾಫಿಕ್ ನಿರ್ವಹಣೆಗೆ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಗರದ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದ್ದು, ಇನ್ನು ಕೆಲವು ಕಡೆಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆ ಕುರಿತ ವಿವರ ಇಲ್ಲಿದೆ.

Bengaluru Traffic Advisory: ಬೆಂಗಳೂರಿನಲ್ಲಿಂದು ಆರ್​​ಸಿಬಿ, ಎಸ್​ಆರ್​ಎಚ್ ಪಂದ್ಯ; ಎಲ್ಲೆಲ್ಲಿ ಪಾರ್ಕಿಂಗ್? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಏಪ್ರಿಲ್ 15: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಇಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾಸ್ (SRH) ಸೆಣಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ? ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂಬುದನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ, ಪಾರ್ಕಿಂಗ್ ನಿರ್ಬಂಧ ಹಾಗೂ ಪರ್ಯಾಯ ಪಾರ್ಕಿಂಗ್ ಸ್ಥಳಗಳ ಕುರಿತಾದ ಮಾರ್ಗಸೂಚಿ ಇಂದು ಮಧ್ಯಾಹ್ನ 3:00 ರಿಂದ ರಾತ್ರಿ 11:00 ರವರೆಗೆ ಜಾರಿಯಲ್ಲಿರಲಿದೆ.

ಎಲ್ಲೆಲ್ಲಿ ಪಾರ್ಕಿಂಗ್​ ನಿಷೇಧ?

  • ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಮತ್ತು ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೇದಿಕೆ ರಸ್ತೆ, ಟ್ರಿನಿಟಿ ಜೆಎನ್, ಲಾವೆಲ್ ರಸ್ತೆ
  • ವಿಟ್ಟಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ, ನೃಪತುಂಗ ರಸ್ತೆ

ಎಲ್ಲೆಲ್ಲಿ ಪಾರ್ಕಿಂಗ್ ಮಾಡಬಹುದು?

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ದೃಷ್ಟಿಯಿಂದ ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸಂಚಾರ ನಿರ್ಬಂಧ, ಪಾರ್ಕಿಂಗ್ ವ್ಯವಸ್ಥೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಈ ಕೆಳಗಿನ ಸ್ಥಳಗಳಲ್ಲಿ ಪಾರ್ಕಿಂಗ್​ಗೆ ಅವಕಾಶ ಮಾಡಿಕೊಡಲಾಗಿದೆ.

  • ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಗ್ರೌಂಡ್, ಯುಬಿ ಸಿಟಿ ಪಾರ್ಕಿಂಗ್
  • ಬಿಎಂಟಿಸಿ ಟಿಟಿಎಂಸಿ ಶಿವಾಜಿನಗರ 1 ನೇ ಮಹಡಿ ಮತ್ತು ಹಳೆಯ ಕೆಜಿಐಡಿ ಕಟ್ಟಡ
  • ಕಿಂಗ್ಸ್ ರಸ್ತೆ (ಕಬ್ಬನ್ ರಸ್ತೆಯ ಒಳಗೆ)

ಇದನ್ನೂ ಓದಿ: ಮನೆಯಿಂದಲೇ ಮತದಾನದ ವೇಳೆ ಬಿಜೆಪಿ ಏಜೆಂಟ್ ಇದ್ದರೇ? ಕಾಂಗ್ರೆಸ್ ದೂರಿನ ಬಗ್ಗೆ ಆಯೋಗ ಹೇಳಿದ್ದಿಷ್ಟು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ