ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್: ಗಣ್ಯರಿಂದ ಅಭಿನಂದನೆಗಳ ಮಹಾಪೂರ!

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದು ಇತಿಹಾಸ ನಿರ್ಮಿಸಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಆಟಕ್ಕೆ ಇಡೀ ರಾಜ್ಯವೇ ಫಿದಾ ಆಗಿದ್ದು, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಹಂಗಾಮಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ರೆಡ್ ಆರ್ಮಿಗೆ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸಿದ್ದಾರೆ.

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್: ಗಣ್ಯರಿಂದ ಅಭಿನಂದನೆಗಳ ಮಹಾಪೂರ!
ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್

Updated on: Jun 01, 2026 | 8:50 AM

ಬೆಂಗಳೂರು, ಜೂನ್ 01: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗ ಸತತ ಎರಡನೇ ಬಾರಿಗೆ ಐಪಿಎಲ್  ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ‘ಈ ಸಲವೂ ಕಪ್ ನಮ್ಮದೇ’ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ.

ಮುಖ್ಯಾಂಶಗಳು

  • ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ಸತತ ಎರಡನೇ ಬಾರಿ ಚಾಂಪಿಯನ್.
  • ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಇಡೀ ಕ್ರಿಕೆಟ್ ಲೋಕ ಫಿದಾ.
  • ಆರ್‌ಸಿಬಿ ಐತಿಹಾಸಿಕ ಗೆಲುವಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸೇರಿ ಗಣ್ಯರ ಅಭಿನಂದನೆ.

ಗಲ್ಲಿ ಗಲ್ಲಿಯಲ್ಲೂ ಸಂಭ್ರಮ, ಕೊಹ್ಲಿ ವಿರಾಟ ರೂಪಕ್ಕೆ ಫ್ಯಾನ್ಸ್ ಫಿದಾ!

ಆರ್​​ಸಿಬಿ ಜಯಭೇರಿ ಬಾರಿಸುತ್ತಿದ್ದಂತೆ ರಾಜ್ಯದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಇಡೀ ಟೂರ್ನಿಯುದ್ದಕ್ಕೂ ಹಾಗೂ ಫೈನಲ್ ಪಂದ್ಯದಲ್ಲಿ ರನ್ ಬೆನ್ನಟ್ಟುವಾಗ ‘ಚೇಸ್ ಮಾಸ್ಟರ್’ ವಿರಾಟ್ ಕೊಹ್ಲಿ ಪ್ರದರ್ಶಿಸಿದ ವಿರಾಟ ರೂಪ ಹಾಗೂ ನಾಯಕ ರಜತ್ ಪಟಿದಾರ್ ಅವರ ತಾಳ್ಮೆಯ ಆಟಕ್ಕೆ ಕ್ರಿಕೆಟ್ ಲೋಕ ಫಿದಾ ಆಗಿದೆ. ಜಯಗಳಿಸುತ್ತಿದ್ದಂತೆ ಟ್ವೀಟ್ ಮಾಡಿದ ಆರ್‌ಸಿಬಿ ತಂಡ, “ಇದು ನಿಮ್ಮ ಗೆಲುವು, ಮನೆಯಲ್ಲಿಯೇ ಸುರಕ್ಷಿತವಾಗಿ ಸಂಭ್ರಮಿಸಿ” ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದೆ.

ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯಾತಿ ಗಣ್ಯರಿಂದ ಶುಭ ಹಾರೈಕೆ

ರೆಡ್ ಆರ್ಮಿಯ ಈ ಐತಿಹಾಸಿಕ ಸಾಧನೆಗೆ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್, ಇದು ನಮ್ಮ ಆರ್‌ಸಿಬಿಯ ಸುವರ್ಣ ಅಧ್ಯಾಯ. ಸತತ 2ನೇ ಬಾರಿ ಕಪ್ ಗೆಲ್ಲುವ ಮೂಲಕ ತಂಡ ಇತಿಹಾಸ ನಿರ್ಮಿಸಿದೆ. ಧೈರ್ಯ ಮತ್ತು ಸಂಯಮದಿಂದ ಆಟಗಾರರು ಬೆಂಗಳೂರಿಗೆ ಹೆಮ್ಮೆ ತಂದಿದ್ದಾರೆ ಎಂದು ಕೊಂಡಾಡಿದ್ದಾರೆ. ಆದರೆ, ಫೈನಲ್ ಪಂದ್ಯವನ್ನು ಬೆಂಗಳೂರಿನ ಬದಲು ಅಹ್ಮದಾಬಾದ್‌ನಲ್ಲಿ ಆಯೋಜಿಸಿದ್ದಕ್ಕೆ ಅವರು ಅಸಮಾಧಾನ ಹೊರಹಾಕಿದ್ದಾರೆ.

ಹಂಗಾಮಿ ಸಿಎಂ ಸಿದ್ದರಾಮಯ್ಯ, ಆರ್​ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯ ಉದ್ದಕ್ಕೂ ಆರ್‌ಸಿಬಿ ಹುಡುಗರು ಪ್ರದರ್ಶಿಸಿದ ನಿರ್ಭೀತ ಬ್ರಾಂಡ್ ಕ್ರಿಕೆಟ್ ಎದುರಾಳಿ ತಂಡ ಯಾವ ಉತ್ತರಗಳನ್ನ ನೀಡಲಿಲ್ಲ. ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದ ನಮ್ಮ ಆರ್‌ಸಿಬಿಗೆ ಅಭಿನಂದನೆಗಳು. ಒಗ್ಗಟ್ಟಿನ ತಂಡದ ಪ್ರಯತ್ನದ ಮೂಲಕ ಗಳಿಸಿದ ಗೆಲುವು ಎಲ್ಲೆಡೆ ಆರ್‌ಸಿಬಿ ಅಭಿಮಾನಿಗಳ ಮನೆಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಆರ್‌ಸಿಬಿಯ ವಿಜಯೋತ್ಸವದ ಆಚರಣೆಗಳ ಕುರಿತು ರಾಜ್ಯ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿ ಹೊರಡಿಸಿದೆ. ಇದು ನಿಮ್ಮ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ. ಆದ್ದರಿಂದ ದಯವಿಟ್ಟು ಅವುಗಳನ್ನು ಅನುಸರಿಸಲು ಮರೆಯದಿರಿ. ಈ ಸಲವೂ ಕಪ್ ನಮ್ಮದೇ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ Rajat Patidar: ಎಲ್ಲಾ ಹಣೆಬರಹ, ಹೀಗೆಲ್ಲಾ ಆಗುತ್ತೆ ಅಂತ ಅಂದ್ಕೊಂಡಿರಲಿಲ್ಲ!

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಹೆಮ್ಮೆಯ ಆರ್‌ಸಿಬಿ ಸುವರ್ಣ ಇತಿಹಾಸ ಬರೆದಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ತಂಡದ ಶಕ್ತಿಯಾಗಿದ್ದರೆ, ರಜತ್ ಪಟಿದಾರ್ ದೃಢ ನಿಶ್ಚಯದಿಂದ ತಂಡ ಮುನ್ನಡೆಸಿದರು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬ್ಯಾಕ್ ಟು ಬ್ಯಾಕ್ ಗೆಲ್ಲುವುದಷ್ಟೇ ಅಲ್ಲ, ಆರ್‌ಸಿಬಿ ಕ್ರಿಕೆಟ್ ಅಂಗಳದಲ್ಲಿ ತನ್ನ ಪ್ರಾಬಲ್ಯ ಮೆರೆದಿದೆ. ಚೇಸ್ ಮಾಸ್ಟರ್ ಕೊಹ್ಲಿ ಆಟ ಅದ್ಭುತ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us