ಬೆಂಗಳೂರು: ಕೈಕೊಟ್ಟ ರಿಯಲ್ ಎಸ್ಟೇಟ್ ಬ್ಯುಸಿನೆಸ್, ಉದ್ಯಮಿ ನೇಣಿಗೆ ಶರಣು

ರಿಯಲ್ ಎಸ್ಟೇಟ್​ನಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರಿಂದ ಉದ್ಯಮಿ ಬ್ರಿಜೇಶ್ ರೆಡ್ಡಿ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್​ನಲ್ಲಿ ನಡೆದಿದೆ. ಮತ್ತೊಂದೆಡೆ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕನ ಸಹೋದರನ ಮೇಲೆ ಅನುಮಾನಗಳು ವ್ಯಕ್ತವಾಗಿವೆ.

ಬೆಂಗಳೂರು: ಕೈಕೊಟ್ಟ ರಿಯಲ್ ಎಸ್ಟೇಟ್ ಬ್ಯುಸಿನೆಸ್, ಉದ್ಯಮಿ ನೇಣಿಗೆ ಶರಣು
ಬ್ರಿಜೇಶ್ ರೆಡ್ಡಿ
Follow us
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ

Updated on: Aug 13, 2023 | 3:03 PM

ಬೆಂಗಳೂರು, (ಆಗಸ್ಟ್ 13):  ರಿಯಲ್ ಎಸ್ಟೇಟ್(Real estate )ಉದ್ಯಮಿ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆ(Suiicde) ಮಾಡಿಕೊಂಡಿರುವ ಘಟನೆ ಬೆಂಗಳೂರು(Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್ ನಡೆದಿದೆ. ಹೆಚ್​​ಎಸ್​​ಆರ್​​ ಲೇಔಟ್​ನಲ್ಲಿ ಮನೆ, ಆಫೀಸ್ ಮಾಡಿಕೊಂಡಿದ್ದ ಬ್ರಿಜೇಶ್ ರೆಡ್ಡಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟವಾಗಿದ್ದರಿಂದ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ರಿಯಲ್ ಎಸ್ಟೇಟ್​ನಲ್ಲಿ ಸಾಕಷ್ಟು ಲಾಸ್ ಆಗಿದ್ದರಿಂದ ಇತ್ತೀಚೆಗೆ ಹೆಚ್.ಎಸ್‌.ಆರ್ ಬಳಿಯ ಮನೆ ಮಾರಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿ ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಸೊಂಟಕ್ಕೆ ಮಗು ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ: ಗಂಡ ಸತ್ತ ದಿನವೇ ಘೋರ ದುರಂತ

ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ನಗರದ ಅಮೃತಹಳ್ಳಿಯ ಟೆಲಿಕಾಂ ಲೇಔಟ್‌ನ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುಭಾಷ್ ಕುಮಾರ್(30) ಎನ್ನುವ ಯುವಕನ ಶವ ಪತ್ತೆಯಾಗಿದೆ. ಆದ್ರೆ, ಪೊಲೀಸರು ಬರುವ ಮುನ್ನವೇ ಮೃತ ಸುಭಾಷ್ ಸಹೋದರ ಜಿತೇಂದ್ರ, ನೇಣುಬಿಗಿದುಕೊಂಡಿದ್ದ ಹಗ್ಗವನ್ನು ಕತ್ತರಿಸಿ ಶವವನ್ನು ಕೆಳಗಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿತೇಂದ್ರ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯಾಸತ್ಯತೆ ಬಯಲಿಗೆ ಬರಲಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು