ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ

ಶನಿವಾರ ಸಂಜೆ ನಮ್ಮ ಮೆಟ್ರೋದ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದ ಹಳಿಗೆ ಹಾರಿ 35 ವರ್ಷದ ನವೀನ್​ ಅರೋರ ಆತ್ಮಹತ್ಯೆ ಮಾಡಿಕೊಂಡಿದ್ದರು. ನವೀನ್​ ಅರೋರ ಆತ್ಮಹತ್ಯೆಗೆ ಕಾರಣವೇನು ಎಂಬುವುದು ಟಿವಿ9 ಡಿಜಿಟಲ್​ಗೆ ತಿಳಿದು ಬಂದಿದೆ.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ
ನಮ್ಮ ಮೆಟ್ರೋ, ನವೀಬ್​ ಅರೋರ
Follow us
| Updated By: ವಿವೇಕ ಬಿರಾದಾರ

Updated on: Aug 04, 2024 | 1:04 PM

ಬೆಂಗಳೂರು, ಆಗಸ್ಟ್​ 04: ನಮ್ಮ ಮೆಟ್ರೋದ (Namma Metro) ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ 35 ವರ್ಷದ ನವೀನ್ ಅರೋರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುವುದು ತಿಳಿದುಬಂದಿದೆ. ಮೃತ ನವೀನ್ ಅರೋರ ಮೂಲತಃ ಉತ್ತರ ಪ್ರದೇಶದವರು. ನವೀನ್ ಅರೋರಗೆ 26 ವರ್ಷದ ಪುತ್ರ 22 ವರ್ಷದ ಪುತ್ರಿ ಹಾಗೂ ಪತ್ನಿ ಇದ್ದಾರೆ. ಪುತ್ರ ಸ್ವಂತ ಬಟ್ಟೆ ಅಂಗಡಿ ಹೊಂದಿದ್ದಾನೆ. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾಳೆ. ಕುಟುಂಬಸ್ಥರು ಬಿಳೆಕಹಳ್ಳಿ ದಿವ್ಯಾ ಪಂಚಮಿ ಅಪಾರ್ಟ್ಮೆಂಟ್​​ನಲ್ಲಿ ವಾಸವಿದ್ದಾರೆ.

ಮೃತ ನವೀನ್ ಅರೋರ ಕಳೆದ 10 ವರ್ಷದ ಹಿಂದೆ ಕೆಆರ್​​ ಮಾರ್ಕೆರ್ಟ್​​ನಲ್ಲಿ ಹಾರ್ಡ್​ವೇರ್ ಅಂಗಡಿ ನಡೆಸುತ್ತಿದ್ದರು. ವ್ಯಾಪಾರ ವಹಿವಾಟು ಕೂಡ ಚನ್ನಾಗಿಯೇ ನಡಿತಿತ್ತು. ಬಳಿಕ ವ್ಯಾಪಾರ ನೆಲಕಚ್ಚಿ ನಷ್ಟ ಅನುಭವಿಸಿದ್ದರು. ಇದೇ ವಿಚಾರವಾಗಿ ಮನೆಯಲ್ಲಿ ಜಗಳವಾಗಿ ಮೃತ ನವೀನ್ ಅರೋರ ಬೇರಾಯಾಗಿದ್ದರು. ಮೃತ ನವೀನ್ ಅರೋರ ಕಳೆದ ಏಳು ವರ್ಷದಿಂದ ಕುಟುಂಬಸ್ಥರಿಂದ ದೂರವಿದ್ದು, ಜೆಪಿ ನಗರದ ಹೋಟೆಲ್​ವೊಂದರಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಜೊತೆಗೆ ಕೆಆರ್​ ಮಾರ್ಕೆಟ್​ನಲ್ಲಿರುವ ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ತಂಗಿದ್ದರು.

ಇದನ್ನೂ ಓದಿ: ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಒಂದೇ ದಿನ 8 ಲಕ್ಷ ಜನ ಸಂಚಾರ! ದಾಖಲೆ

ಮೃತ ನವೀನ್ ಅರೋರ ಸಂಬಂಧಿಕರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಇದೇ ಹಣದಲ್ಲಿ ರೂಮ್ ಬಾಡಿಗೆ, ಊಟ ತಿಂಡಿ ಅಂತ ಕಾಲ‌ ಕಳೆಯುತ್ತಿದ್ದರು. ಇನ್ನು ಉತ್ತರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಜನರ ಬಳಿ ಸಾಲ ಮಾಡಿದ್ದರು. ಮೃತ ನವೀನ್ ಅರೋರ ತಮ್ಮ ಅಣ್ಣನಿಗೆ ಆಗಾಗ ಕರೆ ಮಾಡಿ ಹಣ ಕೇಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆಯೂ ತನ್ನ ಅಣ್ಣನಿಗೆ ಕರೆ ಮಾಡಿ ಹಣ ಕೇಳಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ನವೀನ್ ಅರೋರದಿಂದ ಕುಟುಂಬಸ್ಥರು ಕೂಡ ದೂರವಾಗಿದ್ದರು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾದ ನವೀನ್ ಅರೋರ ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ