ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಶಿಫಾರಸ್ಸು; ಅಸ್ತು ಎಂದ ಸಂಪುಟ; ಇಲ್ಲಿದೆ ವಿವರ

ಹಿಂದುಳಿದ ವರ್ಗಗಳಿಗೆ (Backward Class) ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು.

ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಶಿಫಾರಸ್ಸು; ಅಸ್ತು ಎಂದ ಸಂಪುಟ; ಇಲ್ಲಿದೆ ವಿವರ
ಕಾಂಗ್ರೆಸ್​ ಸಚಿವ ಸಂಪುಟ ಸಭೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 8:53 PM

ಬೆಂಗಳೂರು,ಅ.05: ಹಿಂದುಳಿದ ವರ್ಗಗಳಿಗೆ (Backward Class) ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಜೊತೆಗೆ ‘ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದು ಸಚಿವ ಹೆಚ್‌.ಕೆ ಪಾಟೀಲ್ (HK Patil) ಹೇಳಿದರು.

ಮೂರು ಶಿಫಾರಸ್ಸಿಗೆ ಅಸ್ತು

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು ‘ ಮೊದಲನೆದಾಗಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರದಂತೆ ನೋಡಿಕೊಂಡು ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ. ಎರಡನೇದಾಗಿ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನ ಒಬಿಸಿಗೆ ಮೀಸಲಿರಿಸುವ ಜೊತೆಗೆ ಮೂರನೇಯದಾಗಿ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಶಾಖೆಗಳನ್ನು ಆಡಳಿತ ಸುಧಾರಣಾ ಇಲಾಖಾ ಹತೋಟಿಗೆ ನೀಡಲು ನ್ಯಾ. ಡಾ.ಕೆ.ಭಕ್ತವತ್ಸಲ ಸಮಿತಿ ನೀಡಿದ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಿದೆ.

ಇದನ್ನೂ ಓದಿ:Women’s Reservation Bill: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಇದರ ಜೊತೆಗೆ ಇಂದು ಅನೀಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ  ಸಂಪುಟದಲ್ಲಿ ದೊರೆತಿದೆ.  5 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರಲ್ಲದ ಮಹಿಳೆಯರು ಸೇರಿದಂತೆ  15 ವರ್ಷ ಮೇಲ್ಪಟ್ಟ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆಯಬಹುದು. ಮತ್ತು ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನ್ಶಿಯೇಟಿವ್‌ ಪ್ರೋಗ್ರಾಂಗೆ 25 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇದನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us