ಬೆಂಗಳೂರಿನಲ್ಲಿ ಈ ವರ್ಷ ದಾಖಲೆ ಸಂಖ್ಯೆ ರಸ್ತೆ ಅಪಘಾತ: ಅಂಕಿಅಂಶ ನೋಡಿದ್ರೆ ಬೆಚ್ಚಿಬೀಳ್ತೀರಿ!

Bengaluru Road Accidents: ರಸ್ತೆ ಅಪಘಾತಗಳ ಪೈಕಿ ರಾಜ್ಯದಲ್ಲಿ ಬೆಂಗಳೂರು ಈ ವರ್ಷ ಮುಂಚೂಣಿಯಲ್ಲಿದೆ. ಈ ವರ್ಷ ಮೇ ತಿಂಗಳ ವರೆಗೆ ನಗರದಲ್ಲಿ ಸಂಭವಿಸಿದ ಅಪಘಾತಗಳ ಸಂಖ್ಯೆ ಬೆಚ್ಚಿಬೀಳಿಸುವಂತಿದೆ. ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳೂ ಹೆಚ್ಚಾಗಿದ್ದು, ಪೊಲೀಸರ ನಿದ್ದೆಗೆಡಿಸಿದೆ. ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿಸಂಖ್ಯೆ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಈ ವರ್ಷ ದಾಖಲೆ ಸಂಖ್ಯೆ ರಸ್ತೆ ಅಪಘಾತ: ಅಂಕಿಅಂಶ ನೋಡಿದ್ರೆ ಬೆಚ್ಚಿಬೀಳ್ತೀರಿ!
ಬೆಂಗಳೂರಿನಲ್ಲಿ ಈ ವರ್ಷ ದಾಖಲೆ ಸಂಖ್ಯೆ ರಸ್ತೆ ಅಪಘಾತ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Jun 12, 2024 | 10:15 AM

ಬೆಂಗಳೂರು, ಜೂನ್ 12: ಬೆಂಗಳೂರು ನಗರದಲ್ಲಿ (Bengaluru) ಈ ವರ್ಷ ದಾಖಲೆ ಸಂಖ್ಯೆಯ ರಸ್ತೆ ಅಪಘಾತಗಳು (Accidents) ಸಂಭವಿಸಿರುವುದು ಬೆಂಗಳೂರು ಸಂಚಾರ ಪೊಲೀಸ್ (Bengaluru Traffic Police) ಅಂಕಿಅಂಶಗಳಿಂದ ತಿಳಿದುಬಂದಿದೆ. ಅದರಲ್ಲಿಯೂ ದ್ವಿಚಕ್ರ ವಾಹನ ಸವಾರರೇ ಸಂಚಾರ ನಿಯಮಗಳನ್ನು ಅತಿಹೆಚ್ಚು ಉಲ್ಲಂಘಿಸುತ್ತಿರುವುದು ತಿಳಿದುಬಂದಿದೆ. ಈ ವರ್ಷ ಮೇ ತಿಂಗಳ ವೇಳೆಗೆ 2000ಕ್ಕೂ ಹೆಚ್ಚಿನ ರಸ್ತೆ ಅಪಘಾತಗಳು ಬೆಂಗಳೂರಿನಲ್ಲಿ ಸಂಭವಿಸಿವೆ.

ಈ ಘಟನೆಗಳಲ್ಲಿ 368 ಮಾರಣಾಂತಿಕ ಮತ್ತು 1,672 ಮಾರಣಾಂತಿಕ ಅಲ್ಲದವುಗಳಾಗಿದ್ದು, 376 ಸಾವುಗಳು ಸಂಭವಿಸಿವೆ. 1,736 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಂಕಿಅಂಶಗಳು ತಿಳಿಸಿವೆ.

ಬೆಂಗಳೂರು ಟ್ರಾಫಿಕ್ ಪೋಲೀಸರ ಅಂಕಿಅಂಶ ಪ್ರಕಾರ, 2024ರಲ್ಲಿ 39,10,980 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಅಜಾಗರೂಕ ಚಾಲನೆ ಮತ್ತು ಅತಿ ವೇಗವು ಪ್ರಮುಖವಾಗಿವೆ. ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳೇ 5,433 ದಾಖಲಾಗಿವೆ. ಇದು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರ ವಿರುದ್ಧ ಕಟ್ಟು ನಿಟ್ಟಾದ ಜಾರಿ ಮತ್ತು ಜಾಗೃತಿ ಅಭಿಯಾನಗಳ ಶುರ್ತು ಅಗತ್ಯವನ್ನು ಒತ್ತಿಹೇಳುತ್ತದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ. ಉಳಿದಂತೆ ಪರವಾನಗಿ ಇಲ್ಲದೆ ಚಾಲನೆ (2,710 ಪ್ರಕರಣಗಳು), ದೋಷಯುಕ್ತ ನಂಬರ್​ ಪ್ಲೇಟ್ (87,277 ಪ್ರಕರಣಗಳು), ಮತ್ತು ಟ್ರಾಫಿಕ್ ಸಿಗ್ನಲ್‌ ಜಂಪ್ (2,46,284 ಪ್ರಕರಣಗಳು) ಕೂಡ ಸೇರಿವೆ.

ಹೆಲ್ಮಟ್ ರಹಿತ ಚಾಲನೆ ಬಹುದೊಡ್ಡ ಸಮಸ್ಯೆಯಾಗಿಯೇ ಉಳಿದಿದೆ. 16 ಲಕ್ಷಕ್ಕೂ ಹೆಚ್ಚು ಸವಾರರು ಮತ್ತು 10 ಲಕ್ಷ ಹಿಂಬದಿ ಸವಾರರು ಹೆಲೈಟ್ ಇಲ್ಲದ ಸಿಕ್ಕಿ ಬಿದ್ದಿದ್ದಾರೆ. ಸೀಟು ಬೆಲ್ಟ್ ಧರಿಸದೇ ಸಂಚಾರ ಮಾಡಿದ 1,83, 321 ಪ್ರಕರಣಗಳು ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ 48,947 ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ನಮ್ಮ ಮೆಟ್ರೋ ಚಾಲಕ ರಹಿತ ರೈಲು ಸಂಚಾರ ಸಿಗ್ನಲಿಂಗ್ ಟೆಸ್ಟ್ ಶೀಘ್ರ

ದ್ವಿಚಕ್ರ ವಾಹನಗಳು ನಿಯಮ ಉಲ್ಲಂಘನೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 33 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಟೆಂಪೋಗಳು, ಲಘು ಮೋಟಾರು ವಾಹನಗಳು, ಆಟೋರಿಕ್ಷಾಗಳು, ಸರಕು ವಾಹನಗಳು ಮತ್ತು ಬಸ್‌ಗಳು ನಿಯಮ ಉಲ್ಲಂಘನೆಯಲ್ಲಿ ನಂತರದ ಸ್ಥಾನದಲ್ಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ