AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈಹಿಕ ಸಂಪರ್ಕ ನಿರಾಕರಿಸುವುದು ದೌರ್ಜನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ವ್ಯಕ್ತಿಯೊಬ್ಬರು ದೈಹಿಕ ಪ್ರೀತಿ ಬಿಟ್ಟು ಆಧ್ಯಾತ್ಮಕ ಸಾಧನೆಯತ್ತ ಮುಖಮಾಡಿದ್ದರು. ಇದರಿಂದ ಮನನೊಂದಿದ್ದ ಪತ್ನಿ ಪತಿ ವಿರುದ್ಧ ಐಪಿಸಿ 498 ಎ ಅಡಿ ದೂರು ದಾಖಲಿಸಿದ್ದರು. ಅಲ್ಲದೆ, ಕ್ರೌರ್ಯದ ಕಾರಣಕ್ಕೆ ವಿಚ್ಚೇದನವನ್ನೂ ಪಡೆದುಕೊಂಡಿದ್ದರು.

ದೈಹಿಕ ಸಂಪರ್ಕ ನಿರಾಕರಿಸುವುದು ದೌರ್ಜನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕ ಹೈಕೋರ್ಟ್
Rakesh Nayak Manchi
|

Updated on: Jun 19, 2023 | 8:43 PM

Share

ಬೆಂಗಳೂರು: ದೈಹಿಕ ಸಂಪರ್ಕ ನಿರಾಕರಿಸುವುದು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಆಧ್ಯಾತ್ಮಿಕ ಸಾಧನೆಯತ್ತ ಮುಖಮಾಡಿದ್ದ ಪತಿ ವಿರುದ್ಧ ಪತ್ನಿ ಐಪಿಸಿ 498 ಎ ಅಡಿ ದೂರು ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕದಸದಸ್ಯ ಪೀಠ, ಈ ಆದೇಶ ಹೊರಡಿಸಿದೆ.

ಮಹಿಳೆಯೊಬ್ಬರು 2019 ರ ಡಿ.18 ರಂದು ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದರು. ವಿವಾಹವಾಗಿ 28 ದಿನ ಜೊತೆಯಲ್ಲಿದ್ದರು. ಇದಾದ ನಂತರ ಪತಿ ಆಧ್ಯಾತ್ಮಿಕ ಸಾಧನೆಯ ಕಡೆ ಮುಖ ಮಾಡಿದ್ದಾರೆ. ಅಲ್ಲದೆ, ದೈಹಿಕ ಪ್ರೀತಿಗಿಂತ, ಆತ್ಮಗಳ ಪ್ರೀತಿ ಮುಖ್ಯವೆನ್ನುತ್ತಿದ್ದ ಪತಿ, ಅಧ್ಯಾತ್ಮಿಕ ಸಾಧಕಿಯೊಬ್ಬರ ಉಪನ್ಯಾಸ ವೀಕ್ಷಿಸುವಂತೆ ತನ್ನ ಪತ್ನಿಗೆ ಹೇಳುತ್ತಿದ್ದರು.

ಇದನ್ನೂ ಓದಿ: ಕೈ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆ: ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಪತಿಯ ನಡೆಯಿಂದ ಮನನೊಂದ ಪತ್ನಿ ದೈಹಿಕ ಸಂಬಂಧ ಬಯಸದ ಪತಿ ವಿರುದ್ಧ ಪತ್ನಿ ಐಪಿಸಿ 498 ಎ ಅಡಿ ದೂರು ದಾಖಲಿಸಿದ್ದರು. ಅಲ್ಲದೆ, ಕ್ರೌರ್ಯದ ಕಾರಣಕ್ಕೆ ವಿಚ್ಚೇದನವನ್ನೂ ಪಡೆದುಕೊಂಡಿದ್ದರು. ಈ ಬಗ್ಗೆ ಆದೇಶ ಹೊರಡಿಸುವ ವೇಳೆ ಏಕಸದಸ್ಯ ಪೀಠವು, “ದೈಹಿಕ ಸಂಬಂಧ ನಿರಾಕರಿಸುವ ಕಾರಣಕ್ಕೆ ವಿಚ್ಚೇದನ ಪಡೆಯಬಹುದು. ಆದರೆ ಐಪಿಸಿ ಸೆ.498 ಎ ಅಡಿ ಇದು ಅಪರಾಧವಾಗುವುದಿಲ್ಲ” ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ