ಧರ್ಮ ರಾಜಕಾರಣಕ್ಕೆ ಕೈಹಾಕಿ ಮುಖಭಂಗ ಅನುಭವಿಸಿದ ಸಿದ್ದರಾಮಯ್ಯ ಸ್ಪಷ್ಟನೆ ಯಾರಿಗೆ ಬೇಕು: ವಿಜಯೇಂದ್ರ ವ್ಯಂಗ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 21, 2022 | 12:54 PM

ವಿಪಕ್ಷ ನಾಯಕ ಸಿದ್ದರಾಮಯ್ಯ ಒಂದುಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್​​ರಂಥ ಸ್ವಾತಂತ್ರ್ಯ ಸೇನಾನಿಗಳನ್ನ ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ.

ಧರ್ಮ ರಾಜಕಾರಣಕ್ಕೆ ಕೈಹಾಕಿ ಮುಖಭಂಗ ಅನುಭವಿಸಿದ ಸಿದ್ದರಾಮಯ್ಯ ಸ್ಪಷ್ಟನೆ ಯಾರಿಗೆ ಬೇಕು: ವಿಜಯೇಂದ್ರ ವ್ಯಂಗ್ಯ
ಬಿ.ವೈ.ವಿಜಯೇಂದ್ರ
Follow us on

ಬೆಂಗಳೂರು: ತಮ್ಮ ಅವಧಿಯ ಜನವಿರೋಧಿ ಆಡಳಿತ, ರಾಜಕಾರಣದ ವೈಫಲ್ಯ. ಅದನ್ನು ಮುಚ್ಚಿಕೊಳ್ಳಲು ಧರ್ಮ ರಾಜಕಾರಣಕ್ಕೆ ಕೈ ಹಾಕಿದ್ದರು. ಧರ್ಮ ರಾಜಕಾರಣಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪ ಎಂಬ ಹೇಳಿಕೆ ವಿಚಾರವಾಗಿ ಟ್ವಿಟರ್​​ನಲ್ಲಿ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ತಕ್ಕ ಬೆಲೆ ತೆತ್ತಿದ್ದಾರೆ. ಪಶ್ಚಾತ್ತಾಪದ ಮಾತು ನಿಮ್ಮಿಂದ ಯಾರೂ ನಿರೀಕ್ಷಿಸುವುದಿಲ್ಲ. ಆದರೆ, ಧರ್ಮಗುರುಗಳ ದರ್ಶನಕ್ಕೆ ತೆರಳಿ ಅಲ್ಲಿಯೂ ವಿತಂಡ. ಸಿದ್ದರಾಮಯ್ಯನವರು ವಿತಂಡ ವಿವಾದ ಸೃಷ್ಟಿಸುವುದು ಎಷ್ಟು ಸರಿ ಎಂದು ಬಿ.ವೈ.ವಿಜಯೇಂದ್ರ ಟ್ವಿಟರ್​​ನಲ್ಲಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; Siddaramiah: ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ಆರೋಪ: ವಿಡಿಯೊ ವೈರಲ್

ವಿಪಕ್ಷ ನಾಯಕ ಸಿದ್ದರಾಮಯ್ಯ ಒಂದುಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್​​ರಂಥ ಸ್ವಾತಂತ್ರ್ಯ ಸೇನಾನಿಗಳನ್ನ ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ಬಹುದೊಡ್ಡ ಕಂದಕ ಕಾಯುತ್ತಿದೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಟೀಕೆ ಮಾಡಿದ್ದಾರೆ.

ರಂಭಾಪುರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ: ಪಶ್ಚಾತಾಪ, ವಿಶಾದ

ಆಗಸ್ಟ್​ 19ರಂದು ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

ಈ ಸಂಬಂಧ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನು ಯಾಕೆ ಅವರ ಬಗ್ಗೆ ಟೀಕೆ ಮಾಡಲಿ? ಎಂದು ಹೇಳಿದರು. ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮೊಟ್ಟೆ ಎಸೆದವರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಹೇಳಿದರು. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಸುದೀರ್ಘವಾಗಿ ಶ್ರೀಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾವು ಏನೇನು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಅಂತ ತಿಳಿಸಿದ್ದೇನೆ. ಶ್ರೀಗಳಿಂದ ಅನೇಕ ಸಲಹೆಗಳನ್ನು ಪಡೆದುಕೊಂಡಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:48 pm, Sun, 21 August 22