ರೇಖಾ ಕದಿರೇಶ್ ಕೊಲೆ ಪ್ರಕರಣ: ರೌಡಿಶೀಟರ್ ಮನೆಗಳಿಗೆ ಹೋಗಿ ಎಚ್ಚರಿಕೆ ಕೊಟ್ಟ ಡಿಸಿಪಿ
ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಹಲವು ರೌಡಿ ಶೀಟರ್ಗಳ ಮನೆಗಳಿಗೆ ಹೋಗಿದ್ದ ಪೊಲೀಸರು ಮೊಬೈಲ್ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು.
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಮಂಗಳವಾರ ರೌಡಿಶೀಟರ್ಗಳ ಮನೆಗಳ ಬಳಿಗೆ ತೆರಳಿ ಎಚ್ಚರಿಕೆ ನೀಡಿದರು. ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಹಲವು ರೌಡಿ ಶೀಟರ್ಗಳ ಮನೆಗಳಿಗೆ ಹೋಗಿದ್ದ ಪೊಲೀಸರು ಮೊಬೈಲ್ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದರು. ರೌಡಿಶೀಟರ್ಗಳ ಮನೆಗಳಲ್ಲಿ ಮಹಿಳಾ ಸಿಬ್ಬಂದಿ ಶೋಧ ನಡೆಸಿದರು.
ರೇಖಾ ಕೊಲೆ ಆರೋಪಿಗಳಿಗಿದೆ ಅಪರಾಧದ ಇತಿಹಾಸ ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಈ ಹಿಂದೆಯೂ ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಾಹಿತಿ ಪತ್ತೆಯಾಗಿದೆ. ಆರೋಪಿ ಪೀಟರ್ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ, ಮತ್ತೊಬ್ಬ ಆರೋಪಿ ಸೂರ್ಯ 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಪೀಟರ್ ವಿರುದ್ಧ ವಿರುದ್ಧ 3 ಕೊಲೆ ಪ್ರಕರಣ, 1 ಹಲ್ಲೆ ಪ್ರಕರಣ, 2 ಡಕಾಯಿತಿ ಪ್ರಕರಣಗಳು ದಾಖಲಾಗಿವೆ. 4 ಕೇಸ್‌ಗಳಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಸೂರ್ಯನ ವಿರುದ್ಧ 2 ಕೊಲೆ ಕೇಸ್, 2 ಕೊಲೆ ಯತ್ನ ಪ್ರಕರಣಗಳಿವೆ.
ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ತನಿಖೆಗೆಂದು ಪೊಲೀಸರು 6 ವಿಶೇಷ ತಂಡಗಳನ್ನು ರಚಿಸಿದ್ದರು. ಕಾಟನ್ಪೇಟೆ ಇನ್ಸ್ಪೆಕ್ಟರ್ ಚಿದಾನಂದ ಮೂರ್ತಿ, ಸಿಟಿಮಾರ್ಕೆಟ್ ಇನ್ಸ್ಪೆಕ್ಟರ್ ಕುಮಾರಸ್ವಾಮಿ, ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಪ್ರಶಾಂತ್, ಉಪ್ಪಾರಪೇಟೆ ಇನ್ಸ್ಪೆಕ್ಟರ್ ಶಿವಸ್ವಾಮಿ, ಕಲಾಸಿಪಾಳ್ಯ ಇನ್ಸ್ಪೆಕ್ಟರ್ ಚಂದ್ರಕಾಂತ್, ಚಾಮರಾಜಪೇಟೆ ಇನ್ಸ್ಪೆಕ್ಟರ್ ಲೋಕಾಪುರ ನೇತೃತ್ವದ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು.
ಮಾಗಡಿ ರಸ್ತೆ ಸುಂಕದಕಟ್ಟೆ ಬಳಿ ಮದ್ಯಪಾನ ಮಾಡುತ್ತಿದ್ದ ಆರೋಪಿಗಳು ಸಬ್ಇನ್ಸ್ಪೆಕ್ಟರ್ ಕರಿಯಣ್ಣ ಮತ್ತು ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಪೊಲೀಸರು, ಅರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡು ಲಕ್ಷ್ಮೀ ಅಸ್ಪತ್ರೆಗೆ ದಾಖಲು ಮಾಡಿದರು. ಮಾಗಡಿ ರಸ್ತೆ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡವು ತಾಂತ್ರಿಕ ಕೆಲಸಗಳನ್ನು ನಿರ್ವಹಿಸಿತು.
(Rekha Kadiresh Murder Case Police Visit Rowdy Sheeter Home Warned them not to indulge in Anti Social Activities)
ಇದನ್ನೂ ಓದಿ: ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇನ್ನಿಬ್ಬರ ಬಂಧನ; ಬಂಧಿತರ ಸಂಖ್ಯೆ 7ಕ್ಕೆ ಏರಿಕೆ
ಇದನ್ನೂ ಓದಿ: Rekha Kadiresh: ರೇಖಾ ಕದಿರೇಶ್ ಹಾಡಹಗಲು ಹತ್ಯೆಯಾಗಿದ್ದು ಹೇಗೆ? ಸಂಚಲನ ಮೂಡಿಸಿದೆ ವಿಡಿಯೋ
Published On - 10:55 pm, Tue, 29 June 21