ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಆರೋಪ: ಬೀಟ್ನಲ್ಲಿದ್ದ ಪೊಲೀಸರಿಗೆ ಸಿಕ್ಕಬಿದ್ದ ಹುಡುಗ-ಹುಡುಗಿ
ಆರೋಪಿ ವೇಣುಗೋಪಾಲ್ ನ.15ರ ರಾತ್ರಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರು: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದಡಿ ನಗರದ ತಲಘಟ್ಟಪುರ ಪೊಲೀಸರು ವೇಣುಗೋಪಾಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿ ಮೇಲೆ ದೌರ್ಜನ್ಯವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದು ಆರೋಪಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಕ್ಸೋ ಪ್ರಕರಣ) ದಾಖಲಾಗಿದೆ.
ಬೆಂಗಳೂರಿನ ತಲಗಟ್ಟಾಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದ್ದು ಇವರು ಜೀವನಕ್ಕಾಗಿ ಕೂಲಿ ಕೆಲಸ ಮಾಡುತ್ತಾರೆ. ಸಂಬಂಧಿಕನಾಗಿದ್ದ ಆರೋಪಿ ವೇಣುಗೋಪಾಲ್ ನ.15ರ ರಾತ್ರಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಕುಟುಂಬಸ್ಥರು ಆರೋಪಿಸಿದ್ದಾರೆ. ತಲಗಟ್ಟಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ತಲಗಟ್ಟಾಪುರದಲ್ಲಿ ನಿನ್ನೆ ರಾತ್ರಿ ಹೊಯ್ಸಳ ಪೊಲೀಸರು ರಾತ್ರಿ ಗಸ್ತಿನಲ್ಲಿದ್ದರು. ಈ ವೇಳೆ ರಾತ್ರಿ ಮೂರು ನಾಲ್ಕರ ಸಮಯದಲ್ಲಿ ಹುಡುಗ ಹುಡುಗಿ ನಿರ್ಜನ ಪ್ರದೇಶದಲ್ಲಿ ಓಡಾಡುತ್ತಿದ್ದದ್ದು ಪೊಲೀಸರಿಗೆ ಅನುಮಾನ ಬಂದಿದೆ. ಆಗ ಇಬ್ಬರನ್ನೂ ಕರೆದು ಪೊಲೀಸರು ವಿಚಾರಿಸಿದ್ದಾರೆ. ಆಗ ಬಾಲಕಿ ಅಪ್ರಾಪ್ತ ವಯಸ್ಕಳಾಗಿರುವುದನ್ನು ನಮ್ಮ ಗಮನಕ್ಕೆ ಬಂದಿದೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ಹೀಗಾಗಿ ಅವರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು, ಬಾಲಕಿ ಆರೋಪಿಯ ಸಂಬಂಧಿ ಎಂದು ಹೇಳಲಾಗುತ್ತಿದೆ. ಅದರ ಬಗ್ಗೆ ಪರಿಶೀಲನೆ ನಡೆಸಲಾಗ್ತಿದೆ. ಈ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆ ದೂರು ಕೂಡ ದಾಖಲಾಗಿದೆ ಎಂದು ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇಂಗ್ಲಿಷ್ನಲ್ಲಿ ಓದಲು ಇದರ ಮೇಲೆ ಕ್ಲಿಕ್ ಮಾಡಿ