Dasara 2021 Guidelines: ದಸರಾ ಆಚರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ; ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ

ದಸರಾ ಮಾರ್ಗಸೂಚಿ: ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

Dasara 2021 Guidelines: ದಸರಾ ಆಚರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ; ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ
ಮೈಸೂರು ದಸರಾ

ಬೆಂಗಳೂರು; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಅಂತ ತಿಳಿಸಿದೆ.

ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ
ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ನಡೆಸಬೇಕು. ಜನರು ಮಾಸ್ಕ್, ಸ್ಯಾನಿಟೈಸ್​ನ ಕಡ್ಡಾಯವಾಗಿ ಬಳಸಬೇಕು. ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆ ಮಾಡಬೇಕು ಅಂತ ತಿಳಿಸಿದ ಸರ್ಕಾರ, ಅ.7ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಅನುಮತಿ ನೀಡಿದೆ.

8 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 500 ಜನರಿಗೆ ಅವಕಾಶ ನೀಡಲಾಗಿದೆ. ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ರಾಜ್ಯ ಸರ್ಕಾರ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಹಿನ್ನಲೆ ಸರಳ ಮತ್ತು ಭಕ್ತಿ ಪೂರ್ವಕ ದಸರಾ ಆಚರಣೆಗೆ ಆದ್ಯತೆ ನೀಡಿದ ಸರ್ಕಾರ, ಮೈಸೂರು ಹೊರತಾಗಿ ಬೇರೆ ದಸರಾಗೆ 400 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಉಲ್ಲಂಘನೆ ‌ಮಾಡಿದರೆ ಕಾರ್ಯಕ್ರಮ ರದ್ದುಗೊಳಿಸಲಾಗುತ್ತದೆ. ಅರಮನೆ ಆವರಣದಲ್ಲಿ ನಡೆಯವ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆಯೂ ಕೊರೊನಾ ನಿಯಮ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಜನರು ದಸರಾಗೆ ಬರಬೇಡಿ. ಅನ್​ಲೈನ್​ ಮೂಲಕ ವೀಕ್ಷಿಸಿ ಅಂತ ತಿಳಿಸಿದೆ.

Guidelines

ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ

Guidelines

Read Full Article

Click on your DTH Provider to Add TV9 Kannada