Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ; ಮರು ಸಂಚಾರ ಪ್ರಾರಂಭ

ಇದೀಗ ಹಳಿಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಸ್ಥಳಾಂತರಿಸಲಾಗಿದೆ. ಈ ಹಿನ್ನಲೆ  ಮೆಟ್ರೋ ಮಾರ್ಗದ ಸುರಕ್ಷತೆಯನ್ನು ಪರಿಶೀಲಿಸಿ, ಇದೀಗ ಎಂದಿನಂತೆ ಪ್ರಾರಂಭವಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ; ಮರು ಸಂಚಾರ ಪ್ರಾರಂಭ
ಹಸಿರು ಮಾರ್ಗದ ಮೆಟ್ರೋ ಸಂಚಾರ ಆರಂಭ
Follow us
Kiran Surya
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 03, 2023 | 5:11 PM

ಬೆಂಗಳೂರು, ಅ.03: ಇಂದು(ಅ.03) ಬೆಳಿಗ್ಗೆ ನಮ್ಮ ಮೆಟ್ರೊ (Namma Metro) ಹಸಿರು ಮಾರ್ಗದಲ್ಲಿ ರೀ ರೈಲು ಹಳಿ ತಪ್ಪಿತ್ತು. ಹೌದು, ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆ ಉಂಟಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲು, ರಾಜಾಜಿನಗರ ನಿಲ್ದಾಣದ ಟ್ರ್ಯಾಕ್​ನಲ್ಲಿ ಹಳಿ ತಪ್ಪಿದ್ದು, ಇದೀಗ ಹಳಿಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಸ್ಥಳಾಂತರಿಸಲಾಗಿದೆ. ಈ ಹಿನ್ನಲೆ  ಮೆಟ್ರೋ ಮಾರ್ಗದ ಸುರಕ್ಷತೆಯನ್ನು ಪರಿಶೀಲಿಸಿ, ಇದೀಗ ಎಂದಿನಂತೆ ಸಂಚಾರ ಪ್ರಾರಂಭವಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಕ್ರೇನ್ ಮೂಲಕ ರೀ ರೈಲು ಲಿಫ್ಟಿಂಗ್ ಕಾರ್ಯ ಶುರು ಮಾಡಿದ್ದ ಬಿಎಂಆರ್​ಸಿಎಲ್​

ಹೌದು, ನಾಲ್ಕು‌ ಕಡೆಗೂ ಬೆಲ್ಟ್ ಹಾಕಿ ಬೃಹತ್ ಕ್ರೇನ್ ಮೂಲಕ ನಿಧಾನವಾಗಿ ಮೇಲೆತ್ತಿ, ನಂತರ ಯಶಸ್ವಿಯಾಗಿ ರೀ ರೈಲು ಕೆಳಗೆ ಇಳಿಸಲಾಗಿದೆ. ಆದ್ರೆ, ಈ ರೀತಿಯ ಸಮಸ್ಯೆ ಯಾವತ್ತೂ ಆಗಿರಲಿಲ್ಲ. ರೀ ರೈಲು ರಸ್ತೆ ಮತ್ತು ಟ್ರ್ಯಾಕ್ ಮೇಲೆ ಸಂಚರಿಸುತ್ತೆ. ನಿನ್ನೆ ಟ್ರ್ಯಾಕ್ ಮೇಲೆ ವೀಲ್ ಜಾಮ್ ಆಗಿತ್ತು. ಇದರಿಂದ ಸಮಸ್ಯೆಯಾಗಿತ್ತು. ಇನ್ನು ಘಟನೆ ಕುರಿತು ಮಾತನಾಡಿದ  ‘ಆಪರೇಷನ್ ಆಂಡ್ ಮೆಂಟೇನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶಂಕರ್ ಅವರು ‘ ಇನ್ನು ಅರ್ಧ ಗಂಟೆಯಲ್ಲಿ ಮತ್ತೆ ಎಂದಿನಂತೆ ಮೆಟ್ರೋ ಸಂಚರಿಸುತ್ತೆ. ಸದ್ಯ ಎಲ್ಲಾ ಕ್ಲಿಯರ್ ಆಗಿದ್ದು, ಟ್ರ್ಯಾಕ್ ನಲ್ಲಿ ಯಾವ ಸಮಸ್ಯೆ ಇಲ್ಲ. ರೀ ರೈಲಿನ ಚಕ್ರ ಸಿಲುಕಿದ್ದರಿಂದ ಸಮಸ್ಯೆಯಾಗಿತ್ತು ಎಂದಿದ್ದರು.

ಇದನ್ನೂ ಓದಿ:ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್, ಮೆಟ್ರೋ ಪ್ರಯಾಣಿಕರು ಪರದಾಟ, ನಿಲ್ದಾಣದಲ್ಲಿ ಜನವೋ ಜನ

ದೆಹಲಿ ಎಕ್ಸ್ ಪರ್ಟ್ ಗಳ ಜೊತೆ ವರ್ಚುವಲ್  ಸಭೆ ನಡೆಸಿದ್ದ ಇಂಜಿನಿಯರ್ಸ್

ಹೌದು, ಹಳಿ ತಪ್ಪಿದ ರೀ ರೈಲ್ ಸರಿಪಡಿಸಲು ಇಂಜಿನಿಯರ್​ಗಳು ಹರಸಾಹಸ ಪಟ್ಟಿದ್ದು, ಹಳಿ ತಪ್ಪಿರುವ ರೀ ರೈಲ್ ವೆಹಿಕಲ್ ಹಳಿಗೆ ತರುವ ಬಗ್ಗೆ ಹಿರಿಯ ಇಂಜಿನಿಯರ್ ಗಳಿಂದ ಮಾಹಿತಿ ಕೂಡ ಸಂಗ್ರಹಿಸಿದ್ದರು. ಹೇಗೆ ಟ್ರ್ಯಾಕ್ ಗೆ ತರುವುದು ಎನ್ನುವುದರ ಬಗ್ಗೆ ದೆಹಲಿ ಎಕ್ಸ್ ಪರ್ಟ್ ಗಳ ಜೊತೆ ವರ್ಚುವಲ್ ಸಭೆ ನಡೆಸಿ ಸಮಾಲೋಚನೆ ನಡೆಸಲಾಗುತ್ತು. ಇದೀಗ ಯಶಸ್ವಿಯಾಗಿದ್ದು, ಎಂದಿನಂತೆ ಸಂಚಾರ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Tue, 3 October 23

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ