AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ: ಫಿಡಿಲಿಟಸ್ ಸಂಸ್ಥಾಪಕ ಅಚ್ಚುತ್ ಗೌಡರಿಗೆ ಸಿಎಂ ಬೊಮ್ಮಾಯಿ ಸನ್ಮಾನ

“ಯುವ ಸಂಭಾಷಣೆ – ಚರ್ಚೆ ವಿತ್ ಕಾಮನ್ ಮ್ಯಾನ್“ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಾಧಕರನ್ನು ಸನ್ಮಾನಿಸಿದರು. ಈ ವೇಳೆ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ಅವರಿಗೂ ಸನ್ಮಾನ ಮಾಡಲಾಯಿತು.

ಉದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ: ಫಿಡಿಲಿಟಸ್ ಸಂಸ್ಥಾಪಕ ಅಚ್ಚುತ್ ಗೌಡರಿಗೆ ಸಿಎಂ ಬೊಮ್ಮಾಯಿ ಸನ್ಮಾನ
ಫಿಡಿಲಿಟಸ್ ಸಂಸ್ಥಾಪಕ ಅಚ್ಚುತ್ ಗೌಡರಿಗೆ ಸಿಎಂ ಬೊಮ್ಮಾಯಿ ಸನ್ಮಾನ
TV9 Web
| Edited By: |

Updated on: Jan 20, 2023 | 12:41 PM

Share

ಬೆಂಗಳೂರು: ಉದ್ಯಮ ಕ್ಷೇತ್ರದಲ್ಲಿನ ಗಮನಾರ್ಹ ಸಾಧನೆಗಾಗಿ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನ ಮಾಡಿದರು. ಜ.18ರಂದು ನಗರದ ಡಿ.ಎ ಪಾಂಡು ಮೆಮೋರಿಯಲ್ ಆರ್.ವಿ ದಂತ ಕಾಲೇಜಿನಲ್ಲಿ ನಡೆದ “ಯುವ ಸಂಭಾಷಣೆ – ಚರ್ಚೆ ವಿತ್ ಕಾಮನ್ ಮ್ಯಾನ್“ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಾಧಕರನ್ನು ಸನ್ಮಾನಿಸಿದರು.

ಇದಕ್ಕೂ ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೆರೆದಿದ್ದ ಹಾಗೂ ಆನ್ ಲೈನ್ ಮೂಲಕ ವಿಧ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ವಿದ್ಯಾರ್ಥಿ ಯುವ ಸಮೂಹ ರಾಜ್ಯದಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳೊಡನೆ ವಿದ್ಯಾರ್ಥಿಯಾಗಿ ಸುದೀರ್ಘ ಸಂವಾದ ನಡೆಸಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಭಾಜಪಾ ಯುವ ಮೋರ್ಚಾ ನೇತೃತ್ವದಲ್ಲಿ ನಡೆದ ಯುವ ಸಂಭಾಷಣೆ ಕಾರ್ಯಕ್ರಮದಲ್ಲಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪದ್ಮಭೂಷಣ ಪ್ರಶಸ್ತಿ ವಿಜೇತ ಪಂಕಜ್ ಅಡ್ವಾಣಿ, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಎಂ.ಪಿ ಶ್ಯಾಮ್, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್, ಕಾರ್ಯಕಾರಿಣಿ ಸದಸ್ಯ ಮಾಲತೇಶ್ ಸಿಗಸೆ, ಕೂ ಆಪ್ ಸಹ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ, ಫ್ರೀಡಂ ಆಪ್ ಸಂಸ್ಥಾಪಕ ಸಿ.ಎಸ್ ಸುಧೀರ್, ಚಿತ್ರ ನಟರಾದ ಸಂಜನಾ ಆನಂದ್, ಚಂದನ್ ಶೆಟ್ಟಿ, ಪ್ರಣಿತಾ ಸುಭಾಷ್ ಮುಂತಾದವರು ಉಪಸ್ಥಿತರಿದ್ದರು.

ಅಚ್ಚುತ್ ಗೌಡ ಪರಿಚಯ

2013ರಲ್ಲಿ ಫಿಡಿಲಿಟಸ್ ಕಾರ್ಪ್ ಪಾಪರ್ಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯನ್ನು ಹುಟ್ಟುಹಾಕಿದ ಅಚ್ಚುತ್ ಇಂದು ನೂರಾರು ಉದ್ಯೋಗಿಗಳನ್ನು ಹೊಂದಿ ಬಹುರಾಷ್ಟ್ರೀಯ ಸಂಸ್ಥೆಗಳ ಹಾಗೂ ಕಟ್ಟಡ ಮಾಲೀಕರ ನಡುವೆ ಪ್ರಾಪರ್ಟಿ ಸಲಹೆಗಾರರರಾಗಿ ಸಂಬಂಧ ಬೆಸೆಯುವ ಕ್ಷೇತ್ರದಲ್ಲಿ ಒಂದು ಪ್ರಮುಖ ಸಂಸ್ಥೆಯಾಗಿ ಹೊರಹೊಮ್ಮಿದೆ ಮತ್ತು ಫಿಡಿಲಿಟಸ್ ಕಾರ್ಪ್ ಸಂಸ್ಥೆಯನ್ನು 2022 ರಲ್ಲಿ ಬಹುರಾಷ್ಟ್ರೀಯ ಕಂಪನಿಯಾಗಿಸುವತ್ತ ದಾಪುಗಾಲು ಇರಿಸಿದ್ದಾರೆ.

ಇದನ್ನೂ ಓದಿ: Karnataka Assembly Elections: ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಸ್​ಗಳು ನಾಪತ್ತೆ; ಜನಜೀವನ ಹೈರಾಣ

ಸ್ವತಃ ಕಲಾಪ್ರೇಮಿಯಾಗಿರುವ ಅಚ್ಚುತ್ ಗೌಡ ಅವರು 2014 ರಲ್ಲಿ ಫಿಡಿಲಿಟಸ್ ಗ್ಯಾಲರಿ ಎಂಬ ಕಲಾ ಗ್ಯಾಲರಿಯನ್ನು ಸ್ಥಾಪಿಸಿ ರಾಜ್ಯ ಹಾಗೂ ದೇಶದ ಹಲವು ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಲು ಅನುವು ಮಾಡಿಕೊಟ್ಟಿದ್ದಾರೆ. ಇತರೆ ದೇಶಗಳಂತೆ ನಮ್ಮ ದೇಶದಲ್ಲೂ ಕಲೆಯನ್ನು ಒಂದು ಮೌಲ್ಯಯುತ ವಿಷಯವನ್ನಾಗಿಸಬೇಕು ಮತ್ತು ಜನಸಾಮಾನ್ಯರಲ್ಲಿ ಕಲೆಯ ಬಗ್ಗೆ ಎಚ್ಚರಿಕೆಯನ್ನುಂಟು ಮಾಡಿ ಅವರಲ್ಲಿ ಕಲಾಪ್ರೇಮವನ್ನು ಜಾಗೃತ ಗೊಳಿಸುವುದಕ್ಕಾಗಿ ಫಿಡಿಲಿಟಸ್ ಗ್ಯಾಲರಿಯು ಕಲಾವಿದರು, ಕಲಾ ಪ್ರೇಮಿಗಳು ಮತ್ತು ಕಲಾ ಪೋಷಕರ ನಡುವಣ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕೆನ್ನುವುದು ಈ ಗ್ಯಾಲರಿ ಸ್ಥಾಪನೆಯ ಹಿಂದಿನ ಉದ್ದೇಶ. ಜತೆಗೆ ಇಲ್ಲಿ ಕಲಾಕೃತಿಗಳ ಮಾರಾಟದಿಂದ ಬರುವ ಒಟ್ಟು ಆದಾಯದಲ್ಲಿ ಶೇ25 ರಷ್ಟನ್ನು ಅಚ್ಚುತ್ ಗೌಡ ಅವರೇ ಸ್ಥಾಪಿಸಿರುವ ಶಿಲ್ಪಾ ಫೌಂಡೇಷನ್ ಎಂಬ ಸ್ವಯಂ ಸೇವಾ ಸಂಸ್ಥೆಗೆ ದೇಣಿಗೆಯಾಗಿ ನೀಡಿ ಆ ಮೂಲಕ ಸಮಾಜ ಸೇವೆಗೆ ಉತ್ತೇಜನ ನೀಡುತ್ತಿದ್ದಾರೆ.

ಪ್ರಶಸ್ತಿಗಳು ಹಾಗೂ ಸನ್ಮಾನಗಳು

ಅಚ್ಚುತ್ ಗೌಡರು ಇದುವರೆಗೆ ಅಂತರಾಷ್ಟ್ರೀಯ ಮಟ್ಟದ RICS ಪದವಿ ಜತೆಗೆ ಹಲವಾರು ಸಂಘ ಸಂಸ್ಥೆಗಳ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಹಲವಾರು ಸಂಸ್ಥೆಗಳು ಇವರ ಸೇವೆಯನ್ನು ಗುರುತಿಸಿ ತಮ್ಮ ವೇದಿಕೆಗಳಲ್ಲಿ ಸನ್ಮಾನಿಸಿ ಗೌರವಿಸಿದ್ದಾರೆ. ಸರ್ಕಾರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕಂಪೇಗೌಡ ಪ್ರಶಸ್ತಿಗೂ ಇವರು ಭಾಜನರಾಗಿರುವುದು ಇವರ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ.

ಸಧ್ಯಕ್ಕೆ ಫಿಡಿಲಿಟಸ್ ಗ್ಯಾಲರಿ ಹಾಗೂ ಶಿಲ್ಪಾ ಫೌಂಡೇಷನ್ ನ ಸಂಸ್ಥಾಪಕರಾಗಿ, ಫಿಡಿಲಿಟಸ್ ಕಾರ್ಪ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಇವರ ದೂರದೃಷ್ಟಿ ಮತ್ತು ಸೇವಾ ಗುಣದಿಂದ ಇಂದು ಸುಮಾರು 300 ಕ್ಕೂ ಹೆಚ್ಚು ಜನರು ನೇರ ಉದ್ಯೋಗಿಗಳಾಗಿದ್ದರೆ, 3 ಸಾವಿರಕ್ಕೂ ಹೆಚ್ಚು ಮಂದಿ ಜೀವನ ಮಾಡಲು ಇವರ ಪರೋಕ್ಷವಾಗಿ ನೆರವಾಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್