ಬೆಂಗಳೂರು: ಅಗಸ್ಟ್ ಹಾಗೂ ಸೆಪ್ಟಂಬರ್ 2021ರ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ಇಂದು(ಸೆಪ್ಟೆಂಬರ್ 20) ಪ್ರಕಟವಾಗಲಿದೆ. ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿ ಅಭ್ಯರ್ಥಿಗಳ ಫಲಿತಾಂಶ ಹೊರ ಬೀಳಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದು karresults.nic.in ಲಿಂಕ್ ಮೂಲಕ ಫಲಿತಾಂಶ ನೋಡ ಬಹುದಾಗಿದೆ.
ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ರು. ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು. ಇಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.
ಈ ಮುನ್ನ ಘೋಷಿಸಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು (2nd PU Exam Results) ತಿರಸ್ಕರಿಸಿ ಪರೀಕ್ಷೆ ಬರೆಯುವುದಾಗಿ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳಿಗೆ 19 ಆಗಸ್ಟ್ ಯಿಂದ ಸೆಪ್ಟೆಂಬರ್ 3 ರವರೆಗೆ ಪರೀಕ್ಷೆ ನಡೆಸಲಾಯಿತು. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು ಖಚಿತಪಟ್ಟಲ್ಲಿ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೊವಿಡ್ ಸೋಂಕಿದ್ದರೂ ಸಹ ಪರೀಕ್ಷೆ ಬರೆಯಲು ಅವಕಾಶ ಇರಲಿದೆ. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು. ಕೇರಳದ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಬಹುದು. ಪರೀಕ್ಷೆ ಕೇಂದ್ರದ ಆಚೆ ಎಲ್ಲರಿಗೂ ಆರೋಗ್ಯ ತಪಾಸಣೆ ಇರಲಿದೆ ಎಂದು ಪಿಯು ಬೋರ್ಡ್ ತಿಳಿಸಿತ್ತು. ಸದ್ಯ ಇಂದು ಇದರ ಫಲಿತಾಂಶ ಹೊರ ಬೀಳಲಿದೆ.
ಇದನ್ನೂ ಓದಿ: ಪಿಯುಸಿ ಫಲಿತಾಂಶ ಘೋಷಣೆಯಲ್ಲಿ ವಿಳಂಬ ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗಬಾರದು: ರಾಜ್ಯ ಸರ್ಕಾರ ಸೂಚನೆ
2nd PU Results: ಮೈಸೂರಿನ 11 ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಫಲಿತಾಂಶ ತಿರಸ್ಕಾರ; ಪೂರಕ ಪರೀಕ್ಷೆಗೆ ಮನವಿ