ಬೆಂಗಳೂರು: ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸುವ ಸಂಬಂಧ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಲಾಗಿದೆ. ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಅಂತಿಮ ವರದಿ ಸಲ್ಲಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಎಂ.ಆರ್. ಶ್ರೀನಿವಾಸ ಮೂರ್ತಿ ವರದಿ ಸಲ್ಲಿಸಿದ್ದಾರೆ.
ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟುವುದು, ಸಂಪನ್ಮೂಲ ಸೃಜನೆತೆಗೆ ಒತ್ತು ನೀಡುವುದು, ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವುದು. ನಾಲ್ಕೂ ಸಾರಿಗೆ ಸಂಸ್ಥೆಗಳ ಸುಸ್ಥಿರ ಕಾರ್ಯ ನಿರ್ವಹಣೆ ಕುರಿತು ವರದಿಯಲ್ಲಿ ಹಲವು ಶಿಫಾರಸುಗಳನ್ನು ಸಮಿತಿ ಮಾಡಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಾರ್ಯದರ್ಶಿ ಜಯರಾಂ ರಾಯಪುರ, ಸಾರಿಗೆ ಇಲಾಖೆ ಕಾರ್ಯದರ್ಶಿ ಪ್ರಸಾದ್, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿಯ ಕೆಲ ಅಂಶಗಳು