ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ; 700ಕ್ಕೂ ಹೆಚ್ಚು ಮಕ್ಕಳಿಂದ ನೃತ್ಯ

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ರಂಗು ಜೋರಾಗಿದೆ. 700ಕ್ಕೂ ಹೆಚ್ಚು ಮಕ್ಕಳು ವಂದೇ ಮಾತರಂ ಗೀತೆಗೆ ನೃತ್ಯ ಮಾಡಿದರು. 38 ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸರು, ಗೃಹರಕ್ಷಕ ದಳ, ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, NCC ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪರೇಡ್ ನಡೆಸಿ ಗಮನಸೆಳೆದರು.

ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ; 700ಕ್ಕೂ ಹೆಚ್ಚು ಮಕ್ಕಳಿಂದ ನೃತ್ಯ
ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ
Follow us
| Updated By: ಆಯೇಷಾ ಬಾನು

Updated on: Jan 26, 2024 | 12:09 PM

ಬೆಂಗಳೂರು, ಜ.26: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಹಬ್ಬದ ಸಂಭ್ರಮ ಕಳೆಗಟ್ಟಿದೆ (Republic Day 2024). ಮಾಣಿಕ್​ ಷಾ ಪರೇಡ್​ ಮೈದಾನ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ (Thawar Chand Gehlot)​ ಅವರಿಂದ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಗಣ್ಯರು ಭಾಗಿಯಾಗಿದ್ರು. ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್​ಗೆ ನಮನ ಸಲ್ಲಿಸಲಾಯಿತು. ನಂತರ ತೆರೆದ ಜೀಪ್ ನಲ್ಲಿ ಪರೇಡ್ ತಂಡಗಳ ಪರಿವೀಕ್ಷಣೆ ಮಾಡಿದರು.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ರಾಜ್ಯಪಾಲ ಗೆಹ್ಲೋಟ್, 223 ತಾಲೂಕು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಪೈಕಿ 196 ತೀವ್ರ ಬರಪೀಡಿತ ತಾಲೂಕುಗಳಿವೆ. ರಾಜ್ಯ ಸರ್ಕಾರ NDRFನಿಂದ ಅನುದಾನ ಕೋರಿದೆ. ಬರಗಾಲ ಘೋಷಿತ ತಾಲೂಕುಗಳ ಪ್ರತಿ ರೈತನ ಖಾತೆಗೆ 2 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಮನ್ರೇಗಾ ಯೋಜನೆಯಡಿ ಕೆಲಸ ಒದಗಿಸಲಾಗಿದೆ. 63.13 ಲಕ್ಷ ಜನರಿಗೆ ಕೆಲಸವನ್ನ ಒದಗಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಟ್ರಾಫಿಕ್​ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ. 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ ಎಂದು ಸರ್ಕಾರದ ಕ್ರಮಗಳ ಬಗ್ಗೆ ವಿವರಿಸಿದರು.

Republic Day Celebration in manekshaw parade ground NCC Students march

ಇದನ್ನೂ ಓದಿ: 75ನೇ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿ, ಸರ್ಕಾರದ ಗ್ಯಾರಂಟಿಗಳನ್ನು ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್‌

700ಕ್ಕೂ ಹೆಚ್ಚು ಮಕ್ಕಳಿಂದ ನೃತ್ಯ

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ರಂಗು ಜೋರಾಗಿದೆ. 700ಕ್ಕೂ ಹೆಚ್ಚು ಮಕ್ಕಳು ವಂದೇ ಮಾತರಂ ಗೀತೆಗೆ ನೃತ್ಯ ಮಾಡಿದರು. ವಿವಿಧ ಶಾಲಾ-ಕಾಲೇಜುಗಳ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನ ರಾಜ್ಯಪಾಲರು ಹಾಗೂ ಸಿಎಂ ಕಣ್ತುಂಬಿಕೊಂಡರು.

38 ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸರು, ಗೃಹರಕ್ಷಕ ದಳ, ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, NCC ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪರೇಡ್ ನಡೆಸಿ ಗಮನಸೆಳೆದರು. 3 ತುಕಡಿಗಳಿಂದ 1,150 ಜನರಿಂದ ಪಥಸಂಚಲನ ನಡೆಯಿತು. ಈ ಬಾರೀ ಪಥಸಂಚಲನದಲ್ಲಿ ಶ್ವಾನದಳ ಕೂಡ ಭಾಗಿಯಾಗಿತ್ತು. 1,500 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೇರಳದ ಪೊಲೀಸ್ ತಂಡದಿಂದ ಕಲರಿಪಯಟ್ ಪ್ರದರ್ಶನ, ಭಾರತೀಯ ಸೇನೆಯಿಂದ ಅಣಕು ಪ್ರದರ್ಶನ, ತುರ್ತು ಸ್ಥಿತಿಯ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ , ಪೊಲೀಸ್ ತಂಡದಿಂದ ಆಕರ್ಷಕ ಬೈಕ್ ಸ್ಟಂಟ್ ಪ್ರದರ್ಶನ ನಡೆಯಿತು.

ಪರೇಡ್ ವಿಜೇತ ತಂಡಗಳಿಗೆ ರಾಜ್ಯಪಾಲರು ಪ್ರಶಸ್ತಿ ವಿತರಿಸಿದರು. ಲೆಫ್ಟಿನೆಂಟ್ ಕರ್ನಲ್ ಸಚಿನ್ ಸಿನ್ಹಾ ತಂಡಕ್ಕೆ ಮೊದಲ ಬಹುಮಾನ. ಕಮಾಂಡರ್ ಸತೀಶ್ ಗೂ ಬಹುಮಾನ ವಿತರಣೆ ಮಾಡಲಾಯಿತು. ಎರಡನೇ ಬಹುಮಾನ ಕೇರಳ ಪೊಲೀಸ್ ತಂಡಕ್ಕೆ ನೀಡಲಾಯಿತು. ಡಾಗ್ ಸ್ಕ್ವಾಡ್ ಗೆ ಮೂರನೇ ಬಹುಮಾನ ವಿತರಣೆ ಮಾಡಲಾಯಿತು. ಪೊಲೀಸ್ ಬ್ಯಾಂಡ್​ನ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ