AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ: ಬಾವಿಗಿಳಿದು ಪ್ರತಿಭಟನೆ ಮಾಡಿದ ಯತ್ನಾಳ್, ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಉತ್ತರದ ಬಳಿಕ ಯತ್ನಾಳ್ ಗೆ ಮಾತನಾಡಲು ಅವಕಾಶ ಕೊಡದೇ ಸ್ಪೀಕರ್ ಕಾಗದ ಪತ್ರ ಮಂಡನೆಗೆ ಅವಕಾಶ ನೀಡಿದ್ರು. ಆಗ ವಿಪಕ್ಷ ಕಾಂಗ್ರೆಸ್ ಶಾಸಕರು ಯತ್ನಾಳ್ ಪರ ನಿಂತ್ರು ಯತ್ನಾಳ್ ಗೆ ಮಾತನಾಡಲು ಅವಕಾಶ ಕೊಡುವಂತೆ ಆಗ್ರಹಿಸಿದ್ರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ: ಬಾವಿಗಿಳಿದು ಪ್ರತಿಭಟನೆ ಮಾಡಿದ ಯತ್ನಾಳ್, ಲಕ್ಷ್ಮೀ ಹೆಬ್ಬಾಳ್ಕರ್
ಸಂಗ್ರಹ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 20, 2022 | 3:45 PM

Share

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ನಿವಾಸದ ಬಳಿ ಧರಣಿ ನಡೆಸಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಚೆನ್ನಮ್ಮನ ಮೂರ್ತಿಗೆ ಪೂಜೆ ಸಲ್ಲಿಸಿ ಸಿಎಂ ನಿವಾಸದವರೆಗೆ ಱಲಿ ನಡೆಸಲಾಗಿದೆ. ಹೀಗಾಗಿ ಶಿಗ್ಗಾಂವಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇನ್ನು ಮತ್ತೊಂದೆಡೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದೆ.

ವಿಧಾನಸಭೆ ಶೂನ್ಯವೇಳೆ ಪಂಚಮಸಾಲಿ 2ಎ ಮೀಸಲಾತಿ ಸೇರಿದಂತೆ ಪ್ರವರ್ಗ 1, ಎಸ್.ಟಿ. ಮೀಸಲಾತಿ ವಿಚಾರವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪಿಸಿದ್ರು. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಿದ್ದು, ಇದು ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡುವ ವಿಷಯವಲ್ಲ. ಯಾವುದೇ ಮೀಸಲಾತಿ ಹೆಚ್ಚಳಕ್ಕೆ ಕಾನೂನು ಇದೆ. ಕರ್ನಾಟಕದಲ್ಲಿ ಈಗಾಗಲೇ 50% ಮೀಸಲಾತಿ ಆಗಿದೆ. ಮೀಸಲಾತಿ ಎನ್ನುವುದು ತುಳಿತಕ್ಕೊಳಪಟ್ಟವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಕೊಡುವಂತಹದ್ದು. ಈಗಾಗಲೇ ಎರಡು ಸಮಿತಿಗಳ ಶಿಫಾರಸು ನಮ್ಮ ಮುಂದಿದೆ. ಮುಂದೆ ಹೇಗೆ ಹೋಗಬೇಕು ಎಂದು ಎಲ್ಲರ ಅಭಿಪ್ರಾಯ ಪಡೆದು ಹೋಗಬೇಕು. ಒಂದು ಸಮುದಾಯಕ್ಕೆ ಮೀಸಲಾತಿ ಕೊಡುವಾಗ ಇನ್ನೊಬ್ಬರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅದನ್ನು ನಾವು ನಿಭಾಯಿಸುತ್ತೇವೆ. ಪಾರದರ್ಶಕವಾಗಿ ಎಲ್ಲರೂ ಕುಳಿತು ಎಚ್ಚರಿಕೆಯಿಂದ ಮಾಡಬೇಕಿದೆ. ಬೇರೆ ಬೇರೆ ಸಮುದಾಯದ ಬೇಡಿಕೆಯನ್ನು ವೈಜ್ಞಾನಿಕವಾಗಿ ಮಾಡಿದರೆ ಲೀಗಲ್ ಆಗಿ ಉಳಿಯುತ್ತದೆ. ಹಿಂದುಳಿದ ವರ್ಗಗಳ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಸಿಎಂ ಉತ್ತರದ ಬಳಿಕ ಯತ್ನಾಳ್ ಗೆ ಮಾತನಾಡಲು ಅವಕಾಶ ಕೊಡದೇ ಸ್ಪೀಕರ್ ಕಾಗದ ಪತ್ರ ಮಂಡನೆಗೆ ಅವಕಾಶ ನೀಡಿದ್ರು. ಆಗ ವಿಪಕ್ಷ ಕಾಂಗ್ರೆಸ್ ಶಾಸಕರು ಯತ್ನಾಳ್ ಪರ ನಿಂತ್ರು ಯತ್ನಾಳ್ ಗೆ ಮಾತನಾಡಲು ಅವಕಾಶ ಕೊಡುವಂತೆ ಆಗ್ರಹಿಸಿದ್ರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಅವಕಾಶ ಕೋರಿ ಸದನದ ಬಾವಿಗಿಳಿದ್ರು. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಯತ್ನಾಳ್ ಗೆ ಸಾಥ್ ನೀಡಿದ್ರು. ನೀವು ಒಬ್ಬರೇ ಬರದೇ ಲಕ್ಷ್ಮೀಯನ್ನೂ ಕರೆದುಕೊಂಡು ಬಂದ್ರಿ ಎಂದು ಸ್ಪೀಕರ್ ಹಾಸ್ಯ ಮಾಡಿದ್ರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ವಿಧಾನಸಭೆಯಲ್ಲಿ ಈ ವಿಷಯ ಚರ್ಚೆ ಆಗಬೇಕೆಂದು ಆಗ್ರಹಿಸಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:41 pm, Tue, 20 September 22

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್