ಕರ್ನಾಟಕ ವಿಧಾನಸಭೆ ಕಲಾಪ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ
ಗದ್ದಲ ಕೋಲಾಹಲದ ಮಧ್ಯೆಯೇ ಹಲವು ಬಿಲ್‌ಗಳ ಮಂಡನೆಯಾಯ್ತು. ವಿಧಾನಪರಿಷತ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.
ಬೆಂಗಳೂರು, ಜುಲೈ.25: ನಿನ್ನೆ ರಾತ್ರಿ ವಿಧಾನಸಭೆಯಲ್ಲೇ ಮಲಗಿ, ಅಹೋರಾತ್ರಿ ಧರಣಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಾಯಕರು, ಇವತ್ತು ಕಲಾಪ ಆರಂಭವಾಗ್ತಿದ್ದಂತೆ ಮತ್ತೆ ಮೂಡಾ (Muda) ಹಗರಣ ವಿಚಾರ ಪ್ರಸ್ತಾಪಿಸಿದ್ರು. ಸದನದಲ್ಲಿ ನಿರಂತರವಾಗಿ ಗಲಾಟೆ ಗದ್ದಲ ಮುಂದುವರೆದಿತ್ತು. ಈ ಗಲಾಟೆ ನಡುವೆಯೇ ಕೆಲವು ವಿಧೇಯಕ ಅಂಗೀಕಾರ ಮಾಡಲಾಗಿದೆ. ನೀಟ್ ಪರೀಕ್ಷೆ (Neet Exam) ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.
ವಿಧಾನಪರಿಷತ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.
ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ವಿಧಾನಪರಿಷತ್ನಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದರು. ಬಿಜೆಪಿ, JDS ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ.
ಇದನ್ನೂ ಓದಿ: ಕಲಾಪದಲ್ಲಿ ಭಾಗವಹಿಸಲು ಆಗಮಿಸಿದ ಸಿದ್ದರಾಮಯ್ಯ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡದೆ ಸಿಡುಕಿದರು!
ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006(2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.
ವಿಪಕ್ಷಗಳ ಧರಣಿಯ ಮಧ್ಯೆ 4 ನಿರ್ಣಯಗಳ ಅಂಗೀಕಾರ
ಹೊಸ ಜನಗಣತಿಯ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆ ನಡೆಸಬಾರದು ಮತ್ತು ಜನಸಂಖ್ಯೆ ಆಧರಿಸಿ ಸ್ಥಾನಗಳ ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಮತ್ತು ವಿಧಾನಸಭೆ ಸ್ಥಾನಗಳನ್ನು 1971ರ ಜನಗಣತಿ ಆಧರಿಸಿ ನಿರ್ಧರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ. ಚರ್ಚೆಗೆ ವಿಶೇಷ ಸದನ ಕರೆಯುವಂತೆ ವಿಪಕ್ಷ ನಾಯಕ ಅಶೋಕ್ ಒತ್ತಾಯಿಸಿದ್ದು ವಿಪಕ್ಷಗಳ ಬೇಡಿಕೆಗೆ ಮಣಿಯದೇ ನಿರ್ಣಯ ಅಂಗೀಕಾರ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:07 pm, Thu, 25 July 24