AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಅಳವಡಿಸಿದ್ದ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್‌ ವಿಧಿವಶ

BN Garudachar Passes Away: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಅನ್ನು ಸ್ಥಾಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಅಳವಡಿಸಿದ್ದ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್‌ ವಿಧಿವಶ
ಬಿ.ಎನ್.ಗರುಡಾಚಾರ್‌
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 28, 2025 | 11:14 AM

Share

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ (BN Garudachar) ಶುಕ್ರವಾರ ವಿಧಿವಶರಾಗಿದ್ದಾರೆ (Passes Away). ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಗರುಡಾಚಾರ್ ಅವರು ಟ್ರಾಫಿಕ್ ಡಿಸಿಪಿ ಆಗಿದ್ದರು.

ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈ, ಕೋಲ್ಕತ್ತಾಗೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಇದನ್ನೂ ಓದಿ
Image
52 ವರ್ಷಗಳಿಂದ ಸ್ವಾವಲಂಬಿ ಜೀವನ ಸಾಗಿಸುತ್ತಿರುವ ಪೇಪರ್‌ ರಾಜಣ್ಣ
Image
ಬೆಂಗಳೂರಿನಿಂದ ಮುಂಬೈ, ಕೋಲ್ಕತ್ತಾಗೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
Image
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್​ 3ರವರೆಗೂ ಮಳೆ
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಬರದ ಬೆಂಗಾಡು ಗ್ರಾಮದಲ್ಲಿ ಬಿ.ಎನ್. ಗರುಡಾಚಾರ್​​ ಅವರು 1929ರಲ್ಲಿ ಜನಿಸಿದರು. ಇವರದ್ದು, ಕೃಷಿ ಕುಟುಂಬ. ಕಷ್ಟದಲ್ಲೇ ಬೆಳೆದ ಬಿ.ಎನ್. ಗರುಡಾಚಾರ್, ದನ, ಎಮ್ಮೆ ಕಾಯುತ್ತಾ, ಸಗಣಿ ಬಾಚುವ ಕೆಲಸ ಮಾಡುತ್ತಿದ್ದರು.

ಹೀಗಿರುವಾಗ ಅವರ ತಂದೆ ಅಕಾಲಿಕ ಮರಣ ಹೊಂದುತ್ತಾರೆ. ಬಳಿಕ ಕಡು ಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಅಮ್ಮ ಆಸರೆಯಾಗುತ್ತಾರೆ. ಕೆಲ ಬಂಧುಗಳ, ಹಿತೈಷಿಗಳ ನೆರವಿನಿಂದ ಬೆಳೆದು, ಹಳ್ಳಿಯಲ್ಲಿ ಕೂಲಿ, ಮಠದಲ್ಲಿ ಗರುಡಾಚಾರ್ ವಿದ್ಯಾಭ್ಯಾಸ ಆರಂಭಿಸಿದರು.

ಇದನ್ನೂ ಓದಿ: ಮೂಡಬಿದ್ರೆಯ ಪೇಪರ್‌ ರಾಜಣ್ಣ; 52 ವರ್ಷಗಳಿಂದ ದಿನ ಪ್ರತಿಕೆ, ಹಾಲು ಮಾರಿ ಸ್ವಾವಲಂಬಿ ಜೀವನ ಸಾಗಿಸುತ್ತಿರುವ ಬಡ ಜೀವ

ಹಾಸನ, ಗೊರೂರು ಮತ್ತು ಮೈಸೂರಿನಲ್ಲಿ ಅವರಿವರ ಮನೆಯಲ್ಲಿ ಆಶ್ರಯ ಪಡೆದು, ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. 1953ರಲ್ಲಿ ಐಪಿಎಸ್ ಪಾಸ್ ಮಾಡಿ, ಮೊದಲಿಗರೆನಿಸಿಕೊಂಡರು. ಬಳಿಕ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಇದರ ದಕ್ಷ ಮತ್ತು ಪ್ರಾಮಾಣಿಕ ಕಾರ್ಯನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 am, Fri, 28 March 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ