Bengaluru: ಪಿಂಚಣಿ ಜಾರಿಗೆ ಆಗ್ರಹಿಸಿ ಫ್ರೀಡಂಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ನಿವೃತ್ತ ಶಿಕ್ಷಕರು ಅಸ್ವಸ್ಥ
ಪಿಂಚಣಿ ಜಾರಿಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ, ಮೂವರು ನಿವೃತ್ತ ಶಿಕ್ಷಕರು ಅಸ್ವಸ್ಥಗೊಂಡಿದ್ದಾರೆ.
ಬೆಂಗಳೂರು: ಪಿಂಚಣಿ (Pension) ಜಾರಿಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್ನಲ್ಲಿ (Freedom Park) ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ, ಮೂವರು ನಿವೃತ್ತ ಶಿಕ್ಷಕರು (Retired Teachers) ಅಸ್ವಸ್ಥಗೊಂಡಿದ್ದಾರೆ. ಪಿಂಚಣಿ ವಂಚಿತ ಶಿಕ್ಷಕರ ಸಂಘದ ಖಜಾಂಚಿ ಲಕ್ಷ್ಮಿಪುತ್ರ ಕಿರನಳ್ಳಿ (37), ನಿವೃತ್ತ ಶಿಕ್ಷಕರಾದ ಈಶ್ವರಪ್ಪ ಪಾವಗಡ, ನಾಗರಾಜ್ ಅಸ್ವಸ್ಥಗೊಂಡಿದ್ದಾರೆ. ಮೂವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಂಚಣಿ ಜಾರಿಗೆ ಆಗ್ರಹಿಸಿ ನಿವೃತ್ತ ಶಿಕ್ಷಕರ, ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಕಳೆದ 138 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.
ನಿಶ್ಚಿತ ಪಿಂಚಣಿ (ಹಳೇ ಪಿಂಚಣಿ ಯೋಜನೆ) ಮತ್ತು ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅನುದಾನಿತ ಶಾಲಾ, ಕಾಲೇಜು ನೌಕರರಿಗೆ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಕಳೆದ 138 ದಿನಗಳಿಂದ ಪ್ರತಿಭಟನೆ ಮಾಡುತ್ತಿದೆ. ಇವರ ಬೇಡಿಕೆ ಬಜೆಟ್ನಲ್ಲಿ ಈಡೇರದ ಹಿನ್ನೆಲೆ ನಿನ್ನೆ (ಫೆ.20) ರಂದು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದರು.
ಅಕ್ಟೋಬರ್ 7 ರಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, 2006, ಏಪ್ರಿಲ್ 1ಕ್ಕೂ ಮುನ್ನ ನೇಮಕವಾದವರನ್ನು ಪಿಂಚಣಿ ವ್ಯವಸ್ಥೆಗೆ ಪರಿಗಣಿಸಿ, ನಿವೃತ್ತಿಯಾದ ದಿನಾಂಕದಂದು ವೇತನಕ್ಕೆ ಅನುಗುಣವಾಗಿ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:04 am, Tue, 21 February 23




