ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ (2021-22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22 ರಿಂದ ಮೇ 18 ರವರೆಗೂ ಪರೀಕ್ಷೆಗಳು ನಡೆಯಲಿವೆ (Second PU exams Revised and final time table). ಈ ಹಿಂದೆ ಪ್ರಕಟಿಸಲಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಚಿಕ್ಕ ಬದಲಾವಣೆ ಮಾಡಲಾಗಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಇದು ಅಂತಿಮ ವೇಳಾಪಟ್ಟಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ಹಿಂದೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಪದವಿಪೂರ್ವ ಶಿಕ್ಷಣ ಮಂಡಳಿ ಘೋಷಣೆ ಮಾಡಿತ್ತು. ಆದ್ರೆ ದ್ವಿತೀಯ PU ಪರೀಕ್ಷೆ ಸಂದರ್ಭದಲ್ಲಿ JEE ಮುಖ್ಯ ಪರೀಕ್ಷೆ ಹಿನ್ನೆಲೆ ಪರಿಷ್ಕೃತ ವೇಳಾಪಟ್ಟಿ ಸಿದ್ಧ ಮಾಡಲಾಗಿದೆ. ಸದ್ಯ ಏಪ್ರಿಲ್ 22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಿನಾಂಕ ಘೋಷಿಸಿದೆ.
ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 17ರಂದು ಹೋಮ್ ಸೈನ್ಸ್,
ಮೇ 18ರಂದು ಹಿಂದಿ ಪರೀಕ್ಷೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಪರಿಷ್ಕೃತ -ಅಂತಿಮ ವೇಳಾಪಟ್ಟಿ:
Also Read:
ವಿದ್ಯಾರ್ಥಿಗಳೇ ಗಮನಿಸಿ! ಕಲಬುರಗಿ ಜಿಲ್ಲೆಯ 16 ಖಾಸಗಿ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಮಾನ್ಯತೆ ರದ್ದು ಮಾಡಲಾಗಿದೆ
Published On - 6:49 pm, Thu, 7 April 22