AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಮನೆಯಲ್ಲಿ ಕಳ್ಳತನ ಮಾಡಿದ ಝಮಾಟೊ ಡೆಲಿವರಿ ಬಾಯ್!

ಗ್ರ್ಯಾಮಿ ವಿಜೇತ ರಿಕಿ ಕೇಜ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನ ನಡೆದಿದೆ. ಝಮಾಟೊ ಡೆಲಿವರಿ ಬಾಯ್ ಸಂಪ್ ಕವರ್ ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ರಿಕಿ ಕೇಜ್ ಹಂಚಿಕೊಂಡಿದ್ದು, ಕಳ್ಳರನ್ನು ಪತ್ತೆಹಚ್ಚಲು ಸಹಾಯ ಕೋರಿದ್ದಾರೆ. ಝಮಾಟೊ ಸಂಸ್ಥೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಬೆಂಗಳೂರಿನಲ್ಲಿ ಕಳ್ಳತನ ಹೆಚ್ಚಿದ್ದು, ಜಾಗರೂಕರಾಗಿರುವಂತೆ ರಿಕಿ ಕೇಜ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಮನೆಯಲ್ಲಿ ಕಳ್ಳತನ ಮಾಡಿದ ಝಮಾಟೊ ಡೆಲಿವರಿ ಬಾಯ್!
ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 13, 2025 | 3:03 PM

Share

ಬೆಂಗಳೂರು, ಡಿ.13: ಗ್ರ್ಯಾಮಿ ಪ್ರಶಸ್ತಿ ವಿಜೇತ, ಸಂಗೀತಗಾರ ರಿಕಿ ಕೇಜ್ (Grammy Winner Ricky Kej) ಅವರ ಬೆಂಗಳೂರಿನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ಝಮಾಟೊ ಡೆಲಿವರಿ ಬಾಯ್​​​​​ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ರಿಕಿ ಕೇಜ್ ತಮ್ಮ ಮನೆಯ ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋವನ್ನು ಎಕ್ಸ್​​​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಈ ಪೋಸ್ಟ್​ನ್ನು @zomato @zomatocareಗೆ ಟ್ಯಾಗ್​​ ಮಾಡಿದ್ದಾರೆ. ಮನೆಯ ಹೊರಗಡೆ ಇರುವ ಸಂಪ್ ಕವರ್​​ ಕಳ್ಳತನ ಮಾಡಲಾಗಿದೆ ಎಂದು ಎಕ್ಸ್​​ನಲ್ಲಿ ಪೋಸ್ಟ್​​​ನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಿಟಿ ಪೊಲೀಸರಿಗೂ ದೂರು ನೀಡಿದ್ದಾರೆ. ರಿಕಿ ಕೇಜ್ ಅವರು ಈ ಪೋಸ್ಟ್​​ನಲ್ಲಿ ತಮ್ಮ ನಿವಾಸದ ಸಿಸಿಟಿವಿ ದೃಶ್ಯಾವಳಿ ಜತೆಗೆ ಬೆಂಗಳೂರಿನಲ್ಲಿ ನಡೆಯುವ ಕಳ್ಳತನದ ಬಗ್ಗೆಯೂ ಹೇಳಿದ್ದಾರೆ.

ಅವರು ಎಕ್ಸ್​​ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ನಮ್ಮ ಮನೆಯಲ್ಲಿ ದೊಡ್ಡ ಕಳ್ಳತನವಾಗಿದೆ. ನಿಮ್ಮ @zomato @zomatocare ಹುಡುಗ, ನಮ್ಮ ಸಂಪ್-ಕವರ್ ಅನ್ನು ಕದ್ದಿದ್ದಾರೆ ಎಂದು ಮೆಲ್ನೋಟಕ್ಕೆ ಈ ದೃಶ್ಯದಲ್ಲಿ ಕಾಣುತ್ತಿದೆ. ಸಂಜೆ 6 ಗಂಟೆಗೆ ಈ ಘಟನೆ ನಡೆದಿದೆ. 15 ನಿಮಿಷಕ್ಕೊಮ್ಮೆ ಮನೆಯ ಬಳಿ ಬಂದು ನೋಡುತ್ತಿದ್ದರು. ನಂತರ ಇಬ್ಬರು ಬೈಕ್​​ನಲ್ಲಿ ಬಂದು ಸಂಪ್ ಕವರ್ ಕದ್ದಿದ್ದಾರೆ” ಎಂದು ಹೇಳಿದ್ದಾರೆ. ರಿಕಿ ಕೇಜ್ ತಮ್ಮ ಎಕ್ಸ್​​ ಖಾತೆಯಲ್ಲಿ ಎರಡು ವಿಡಿಯೋಗಳನ್ನು ಹಾಗೂ ಸ್ಕ್ರೀನ್‌ಶಾಟ್​​ನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ನಂಬರ್ ಪ್ಲೇಟ್ ಸಹ ಇದೆ. ಕೆಂಪು ಹೋಂಡಾ ಆಕ್ಟಿವಾ ಎಂದು ಹೇಳಲಾಗಿದೆ.

ಇಲ್ಲಿದೆ ನೋಡಿ ಎಕ್ಸ್​​​ ಖಾತೆ ವಿಡಿಯೋ:

ಇನ್ನು ರಿಕಿ ಕೇಜ್ ಹಂಚಿಕೊಂಡಿರುವ ಪೋಸ್ಟ್​​ನಲ್ಲಿ ಕಳ್ಳರನ್ನು ಮತ್ತೆ ಮಾಡಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ. ಇದರ ಜತೆಗೆ ಜನರಿಗೂ ಎಚ್ಚರದಿಂದ ಇರುವಂತೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿದೆ, ಜಾಗರೂಕರಾಗಿರಿ ಎಂದು ಹೇಳಿದ್ದಾರೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ನೆಟ್ಟಿಗರು ಕೂಡ ಈ ಕೃತ್ಯ ಮಾಡಿದವರನ್ನು ತಕ್ಷಣವೇ ಪತ್ತೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​​ಶೀಟ್ ಸಲ್ಲಿಸಿದ ಸಿಐಡಿ

ಜೊಮ್ಯಾಟೊ ಪ್ರತಿಕ್ರಿಯಿ:

ರಿಕಿ ಕೇಜ್ ಹಂಚಿಕೊಂಡಿರುವ ಪೋಸ್ಟ್​ಗೆ ಝಮಾಟೊ ಕೂಡ ಪ್ರತಿಕ್ರಿಯೆ ನೀಡಿದೆ. ಝಮಾಟೊ ಹೀಗೆ ಹೇಳಿದೆ. “ಹಾಯ್ ರಿಕಿ, ಇದು ನಿಜಕ್ಕೂ ಕಳವಳಕಾರಿಯಾಗಿದೆ, ಮತ್ತು ನಮ್ಮ ವಿತರಣಾ ಪಾಲುದಾರರಿಂದ ಅಂತಹ ನಡವಳಿಕೆಯನ್ನು ನಾವು ಖಂಡಿತವಾಗಿಯೂ ಪ್ರೋತ್ಸಾಹಿಸುವುದಿಲ್ಲ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ನಾವು ಕೂಡ ಈ ಬಗ್ಗೆ ತನಿಖೆಯನ್ನು ಮಾಡುತ್ತೇವೆ. ನಿಮ್ಮ ಮೊಬೈಲ್ ಸಂಖ್ಯೆಯನ್ನು ಡಿಎಂ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಲು ನಾವು ವಿನಂತಿಸುತ್ತೇವೆ ಇದರಿಂದ ನಾವು ನಿಮ್ಮೊಂದಿಗೆ ಮತ್ತಷ್ಟು ಸಂಪರ್ಕ ಸಾಧಿಸಬಹುದು” ಎಂದು ಹೇಳಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?