AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Karaga: ಬೆಂಗಳೂರು ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆ ಯತ್ನ, ಓರ್ವ ಆರೋಪಿ ಬಂಧನ

ಐತಿಹಾಸಿಕ ಬೆಂಗಳೂರು ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆ ಯತ್ನ ಆರೋಪ ಕೇಳಿಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Bengaluru Karaga: ಬೆಂಗಳೂರು ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆ ಯತ್ನ, ಓರ್ವ ಆರೋಪಿ ಬಂಧನ
ಕರಗ ಹೊತ್ತಿದ್ದ ಜ್ಞಾನೇಂದ್ರ
ರಮೇಶ್ ಬಿ. ಜವಳಗೇರಾ
|

Updated on: Apr 13, 2023 | 8:25 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ(Bengaluru Karaga) ಮಹೋತ್ಸವ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಆದ್ರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರ (Gnanendra) ಅವರ ಕೊಲೆ ಯತ್ನ ನಡೆದಿದೆ ಎನ್ನುವ ಆಘಾತಕಾರಿ ಮಾಹಿತಿಯೊಂದು ಕೇಳಿಬಂದಿದೆ.  ಏಪ್ರಿಲ್ 6ರಂದು ನಡೆದ ಕರಗ ಉತ್ಸವದ ವೇಳೆ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ಮಿಶ್ರಣ ಹಾಗೂ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕರಗ ಉತ್ಸವದಲ್ಲಿ ಹಿಂದೂ ಹಾಗೂ ಮುಸ್ಲಿಂ ಭಾಯಿ ಭಾಯಿ: ಮಸ್ತಾನ್ ಸಾಬ್ ದರ್ಗಾದಲ್ಲಿ ದ್ರೌಪದಿಗೆ ಧೂಪಾರತಿ

ಈ ಪ್ರಕಣವನ್ನು ಗಂಭೀರವಾಗಿ ತೆಗೆದುಕೊಂಡ ಹಲಸೂರು ಗೇಟ್ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಳಿಕ ಜಯನಗರದ ಆದಿನಾರಾಯಣ ಎನ್ನುವಾತನನು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಮಂಗಳವಾರ ಜ್ಞಾನೇಂದ್ರ ಅವರಿಂದ ದೂರು ಸ್ವೀಕರಿಸಿದ ಹಲಸೂರು ಗೇಟ್ ಪೊಲೀಸರು ಆದಿನಾರಾಯಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಯಾವುದೋ ವಸ್ತು ಎಸೆಯುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಜ್ಞಾನೇಂದ್ರ ಅವರ ಕುತ್ತಿಗೆ ಭಾಗದಲ್ಲಿ ಸುಟ್ಟಗಾಯಗಳಾಗಿವೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ನಡುವೆ ಮನಸ್ತಾಪವಿದೆ. ಈ ಸೇಡಿನಿಂದ ಆತ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ್ದಾರೆ.

ಕರಗ ಉತ್ಸವದ ವೇಳೆ ತಮ್ಮ ಮೇಲೆ ರಾಸಾಯನಿಕ ವಸ್ತು ಎರಚಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಹಲಸೂರು ಗೇಟ್‌ ಠಾಣೆಗೆ ಕರಗ ಹೊತ್ತಿದ್ದ ಜ್ಞಾನೇಂದ್ರ ಮಂಗಳವಾರ ದೂರು ನೀಡಿದ್ದರು. ಜಯನಗರದ ಆದಿನಾರಾಯಣ ಮತ್ತು ಆತನ ಸಹಚರರು ಕರಗ ಉತ್ಸವದ ವೇಳೆ ರಾಸಾಯನಿಕ ಮಿಶ್ರಣ ಹಾಗೂ ಖಾರದ ಪುಡಿ ಮಿಶ್ರಣ ಮಾಡಿದ ಹೂವು ಎರಚಿದ್ದಾರೆ. ಇದರಿಂದದೇಹದ ಮೇಲೆ ಗಾಯಗಳಾಗಿವೆ ಎಂದು ಜ್ಞಾನೇಂದ್ರ ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಾಗಿತ್ತು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್