ರಸ್ತೆ ಅಪಘಾತ ಹೆಚ್ಚಳ: ಜೀವ ರಕ್ಷಣೆಗಾಗಿ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜೀವ ರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಆಕ್ಸಿಡೆಂಟ್ ಝೋನ್​ನಲ್ಲಿ ಬರುವ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ ಸೇರಿಸಲು ಮುಂದಾಗಿದೆ.

ರಸ್ತೆ ಅಪಘಾತ ಹೆಚ್ಚಳ: ಜೀವ ರಕ್ಷಣೆಗಾಗಿ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ
ಆಕ್ಸಿಡೆಂಟ್ ವಲಯದ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ ಸೇರಿಸಲು ಕ್ರಮ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on: May 16, 2023 | 7:11 PM

ಬೆಂಗಳೂರು: ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ (Accident) ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜೀವ ರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಆಕ್ಸಿಡೆಂಟ್ ಝೋನ್​ನಲ್ಲಿ ಬರುವ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ (Accident Victim Scheme) ಸೇರಿಸಲು ಮುಂದಾಗಿದೆ. ಇಲಾಖೆಯಡಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಜಾರಿಗೊಳಿಸಲಾಗಿರುವ ಯೋಜನೆ ಇದಾಗಿದೆ.

ರಸ್ತೆ ಅಪಘಾತದ ಸಂತ್ರಸ್ತರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಲಾಗಿದ್ದು, ಅಪಘಾತದ ಗೋಲ್ಡನ್ ಅವರ್‌ನಲ್ಲಿ ಮತ್ತು 48 ಗಂಟೆಗಳವಳಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಅಪಘಾತ ವಲಯದಲ್ಲಿರುವ ಖಾಸಗಿ ಆಸ್ಪತ್ರೆಗಳನ್ನು ಈ ಯೋಜನೆಯಡಿ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: shivamogga: ಭೀಕರ ರಸ್ತೆ ಅಪಘಾತ, 2 ಬಸ್​ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ

ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನೀಡಿದರೆ 1 ಲಕ್ಷದವರೆಗೇ ಕ್ಲೈಮ್ ಮಾಡಬಹುದು. ಇದುವರೆಗೂ 16 ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯಬಹುದಿತ್ತು. ಆದರೆ ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಪಘಾತ ವಲಯಗಳನ್ನು ಪಟ್ಟಿ ಮಾಡಿ ಅದರ ಸುತ್ತವಿರುವ ಖಾಸಗಿ ಆಸ್ಪತ್ರೆಗಳನ್ನು ಈ ಯೋಜನೆಯಡಿ ಸೇರಿಸಲಾಗಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆಗಳಿಗೂ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್