ಬೆಂಗಳೂರು: ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ (Accident) ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜೀವ ರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಆಕ್ಸಿಡೆಂಟ್ ಝೋನ್ನಲ್ಲಿ ಬರುವ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ (Accident Victim Scheme) ಸೇರಿಸಲು ಮುಂದಾಗಿದೆ. ಇಲಾಖೆಯಡಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಜಾರಿಗೊಳಿಸಲಾಗಿರುವ ಯೋಜನೆ ಇದಾಗಿದೆ.
ರಸ್ತೆ ಅಪಘಾತದ ಸಂತ್ರಸ್ತರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಲಾಗಿದ್ದು, ಅಪಘಾತದ ಗೋಲ್ಡನ್ ಅವರ್‌ನಲ್ಲಿ ಮತ್ತು 48 ಗಂಟೆಗಳವಳಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಅಪಘಾತ ವಲಯದಲ್ಲಿರುವ ಖಾಸಗಿ ಆಸ್ಪತ್ರೆಗಳನ್ನು ಈ ಯೋಜನೆಯಡಿ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: shivamogga: ಭೀಕರ ರಸ್ತೆ ಅಪಘಾತ, 2 ಬಸ್ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ
ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನೀಡಿದರೆ 1 ಲಕ್ಷದವರೆಗೇ ಕ್ಲೈಮ್ ಮಾಡಬಹುದು. ಇದುವರೆಗೂ 16 ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯಬಹುದಿತ್ತು. ಆದರೆ ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಪಘಾತ ವಲಯಗಳನ್ನು ಪಟ್ಟಿ ಮಾಡಿ ಅದರ ಸುತ್ತವಿರುವ ಖಾಸಗಿ ಆಸ್ಪತ್ರೆಗಳನ್ನು ಈ ಯೋಜನೆಯಡಿ ಸೇರಿಸಲಾಗಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆಗಳಿಗೂ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ