AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯಾಗುತ್ತಿದ್ದಂತೆ ಭರ್ಜರಿ ಮಳೆ ಆಗುತ್ತಿದ್ದು, ಇಂದು ಕೂಡ ಸಾಯಂಕಾಲ ಆಗುತ್ತಿದ್ದಂತೆ ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಈ ಹಿನ್ನಲೆ ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕಳೆದ 2 ಗಂಟೆ ಹಿಂದೆ ಕುಸಿತವಾಗಿದೆ.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ
Vinayak Hanamant Gurav
| Edited By: |

Updated on:Jun 07, 2024 | 8:11 PM

Share

ಬೆಂಗಳೂರು, ಜೂ.07: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯಾಗುತ್ತಿದ್ದಂತೆ ಭರ್ಜರಿ ಮಳೆ ಆಗುತ್ತಿದ್ದು, ಇಂದು ಕೂಡ ಸಾಯಂಕಾಲ ಆಗುತ್ತಿದ್ದಂತೆ ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಭಾರಿ ಮಳೆಗೆ ಸುಬ್ಬಯ್ಯ ಸರ್ಕಲ್(Subbaiah circle)​​ ಬಳಿ ರಸ್ತೆ ಕುಸಿದಿದೆ. ಈ ಹಿನ್ನಲೆ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್​ ಹಾಕಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ರಸ್ತೆ ಕುಸಿದರೂ ಬಿಬಿಎಂಪಿ (BBMP) ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ.

ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತ

ಇವತ್ತು ಸುರಿದ ಮಳೆಗೆ ಮಳೆಯಿಂದ ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕಳೆದ 2 ಗಂಟೆ ಹಿಂದೆ ಕುಸಿತವಾಗಿದ್ದು, ರಸ್ತೆ ಕೆಳಗಡೆ ಅಂಡರ್‌ಗ್ರೌಂಡ್ ಡ್ರೈನೇಜ್ ಇರುವ ಕಾರಣ ಮಳೆಯಾದರೆ ಇನ್ನೂ ರಸ್ತೆ ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಕೆಲಸ ಮುಗಿಸಿ ಮನೆಗೆ ತೆರಳುವವರಿಗೆ ಟ್ರಾಫಿಕ್ ಬಿಸಿ ತಟ್ಟಿದ್ದು, ರಸ್ತೆಯಲ್ಲಿಯೇ ಪರದಾಡುವಂತಾಗಿದೆ.

ಇದನ್ನೂ ಓದಿ:ಒಂದೇ ಮಳೆಗೆ ಕೆರೆಯಂತಾದ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ, ಶಾಸಕ ಶಾಂತನಗೌಡರೇ ಈ ಕಡೆ ಬರಬೇಡಿ!

ಯಲ್ಲೋ ಅಲರ್ಟ್

ಇಂದಿನಿಂದ 10 ನೇ ತಾರೀಖಿನವರೆಗೂ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದ್ದು, ರಾಜ್ಯದಲ್ಲಿ ಒಂದು ವಾರ ಭರ್ಜರಿ ಮಳೆಯಾಗಲಿದೆ ಹಾಗೂ ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಜೊತೆಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಚ್ಚರವಾಗಿರಲು ಹವಾಮಾನ ಇಲಾಖೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Fri, 7 June 24

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ