ಬೆಂಗಳೂರಲ್ಲಿ ಮತ್ತೆ ರೋಡ್ ರೇಜ್ ಸದ್ದು: ಬೈಕ್ ಟಚ್ ಆಗಿದ್ದಕ್ಕೆ ಮಾರಣಾಂತಿಕ ಹಲ್ಲೆ
ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬೈಕ್ ಮತ್ತೊಂದು ಬೈಕ್ಗೆ ತಾಗಿದ ಕಾರಣಕ್ಕೆ ಪುಟ್ಟೇನಹಳ್ಳಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ದುಷ್ಕರ್ಮಿಗಳು ಅವರ ಬೈಕ್ ಕೀ ಕಿತ್ತುಕೊಂಡು, ಮನಸೋ ಇಚ್ಛೆ ತಳಿಸಿದ್ದಾರೆ. ಘಟನೆ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಅಕ್ಟೋಬರ್ 30: ಬೈಕ್ ಟಚ್ ಆಗಿದೆ ಎಂಬ ಕಾರಣಕ್ಕೆ ಕಚೇರಿಗೆ ತೆರಳುತ್ತಿದ್ದ ಸ್ವಾಫ್ಟ್ವೇರ್ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಸ್ವಾಫ್ಟ್ವೇರ್ ಉದ್ಯೋಗಿ ಪ್ರತೀಕ್ ಎಂಬಾತ ನಿನ್ನೆ ಕಚೇರಿಗೆ ತೆರಳುತ್ತಿದ್ದ ವೇಳೆ ಇವರ ಬೈಕ್ ಮತ್ತೊಂದು ಬೈಕ್ಗೆ ಟಚ್ ಆಗಿದೆ. ಇದೇ ಕಾರಣಕ್ಕೆ ಪ್ರತೀಕ್ ಬೈಕ್ ಕೀ ಕಿತ್ತುಕೊಳ್ಳಲಾಗಿದ್ದು, ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈ ಬಗ್ಗೆ ದೂರು ನೀಡಲು ಬಂದಾಗ ಕಂಪ್ಲೇಂಟ್ ಪಡೆಯಲು ಪುಟ್ಟೇನಹಳ್ಳಿ ಪೊಲೀಸರು 2 ಗಂಟೆಗಳ ಕಾಲ ಕಾಯಿಸಿರುವ ಆರೋಪವೂ ಕೇಳಿಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

