ಆನೇಕಲ್ ತಾಲ್ಲೂಕಿನಲ್ಲಿ ಮುಂದುವರಿದ ಸರಗಳ್ಳತನ; ಕ್ಷಣಾರ್ಧಲ್ಲಿ ಕದ್ದು ಪರಾರಿಯಾದ ಖದೀಮರು

ಆನೇಕಲ್ ತಾಲೂಕಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಈ ಕುರಿತು ಪೊಲೀಸರು ಎಷ್ಟೇ ಕ್ರಮಕೈಗೊಂಡರು ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಚನಾಯಕನಹಳ್ಳಿ ಬಳಿ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಖದೀಮರು ಎಗರಿಸಿದ್ದಾರೆ.

Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2024 | 4:20 PM

ಬೆಂಗಳೂರು, ಫೆ.09: ಬೆಂಗಳೂರು ಹೊರವಲಯದ ಆನೇಕಲ್(Anekal) ತಾಲ್ಲೂಕಿನಲ್ಲಿ ಸರಗಳ್ಳತನ ಮುಂದುವರೆದಿದ್ದು, ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಚನಾಯಕನಹಳ್ಳಿ ಬಳಿ ನಿನ್ನೆ(ಫೆ.09) ರಾತ್ರಿ ಸರಗಳ್ಳರು ಮಾಂಗಲ್ಯ ಸರ ಎಗರಿಸಿದ್ದಾರೆ. ಮಾನಸ ಎಂಬುವವರಿಗೆ ಸೇರಿದ ಸುಮಾರು 3 ಲಕ್ಷ ಮೌಲ್ಯದ 50 ಗ್ರಾಂ ಚಿನ್ನದ ಸರ ಇದಾಗಿದ್ದು, ಬೈಕ್​ನಲ್ಲಿ ಬಂದಿದ್ದ ಇಬ್ಬರು ಅಸಾಮಿಗಳು ಈ ಕೃತ್ಯ ಎಸಗಿದ್ದಾರೆ. ನಿನ್ನೆ ರಾತ್ರಿ 9:30 ರ ಸುಮಾರಿಗೆ ಅಂಗಡಿಯಲ್ಲಿ ಪೆನ್ ಖರೀದಿಸುವ ನೆಪದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಧರಿಸಿ ಬಂದಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಂದು ಕೈ ಚಳಕ ತೋರಿಸಿದ್ದಾರೆ. ಖದೀಮರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಲ್ಲದ ಬೈಕ್ ವೀಲ್ಹಿಂಗ್ ಪುಂಡಾಟ; ಸ್ವಲ್ಪ ಯಾಮಾರಿದರೂ ಅಪಘಾತ ಗ್ಯಾರಂಟಿ

ಬೆಂಗಳೂರು: ಆನೇಕಲ್​​ನ ಬೇಗೂರು-ಕೊಪ್ಪ ರಸ್ತೆಯ ಹುಲ್ಲಹಳ್ಳಿ ಗೇಟ್ ಬಳಿ ಬೈಕ್ ವೀಲ್ಹಿಂಗ್​​ ಪುಂಡರ ಪುಂಡಾಟ ಮೀತಿಮೀರಿದೆ. ಯಾವುದೇ ಪೊಲೀಸರ ಭಯವಿಲ್ಲದೆ ಪ್ರತಿಷ್ಠಿತ ಶಾಲೆ ಕಾಲೇಜುಗಳಿರುವ ರಸ್ತೆಯಲ್ಲಿಯೇ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾರೆ. ಕೊಂಚ ಯಾಮಾರಿದ್ರು ಅಕ್ಕ ಪಕ್ಕದ ಬೈಕ್ ಸವಾರರಿಗೆ ಅಪಘಾತವಾಗುವ ಸಾಧ್ಯತೆ ಹೆಚ್ಚಿದೆ. ಇವರುಗಳ ಶೋಕಿಗೆ ಇತರ ವಾಹನ ಸವಾರರು ಪ್ರತಿನಿತ್ಯ ಭಯದಲ್ಲೇ ಸಂಚರಿಸುವಂತಾಗಿದೆ.

ಇದನ್ನೂ ಓದಿ:ಆನೇಕಲ್​ನಲ್ಲಿ ಇರಾನಿ ಗ್ಯಾಂಗ್ ಹಾವಳಿ; ಹಗಲು-ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗೆಲ್ಲ ಸರಗಳ್ಳತನ

ಕಾರು ಡ್ರೈವಿಂಗ್ ಕಲಿಸಲು ಹೋಗಿ ಅಪಘಾತ

ಕಾರು ಡ್ರೈವಿಂಗ್​ ಕಲಿಸಲು ಹೋಗಿ ಅಪಘಾತವಾದ ಘಟನೆ ಬೆಂಗಳೂರಿನ ಕೆಎಲ್​ಇ ಕಾನೂನು ಕಾಲೇಜು ಬಳಿ ನಡೆದಿತ್ತು. ಬೇಕರಿ ಬಳಿ ನಿಂತಿದ್ದ ಬೈಕ್​ಗಳಿಗೆ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಗುದ್ದಿತ್ತು. ಗುದ್ದಿದ ರಭಸಕ್ಕೆ ಎಂಟು ಬೈಕುಗಳು ಡ್ಯಾಮೇಜ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ