ಬೆಂಗಳೂರು: ಐಪಿಎಸ್ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಕೇಸ್ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿದ್ದು, ರೂಪಾ ಮೌದ್ಗಿಲ್ಗೆ ಸಮನ್ಸ್ ಜಾರಿಗೊಳಿಸಿದೆ. ಏ. 26ಕ್ಕೆ ಹಾಜರಾಗುವಂತೆ 8ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿ.ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ವಿಚಾರವಾಗಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು. ಇದು ಕರ್ನಾಟಕ ರಾಜಕೀಯದಲ್ಲಿಯೂ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಪರಿಹಾರ ಕೋರಿ ಲೀಗಲ್ ನೋಟಿಸ್ ಜಾರಿ ಮಾಡಿದ್ದರು. ಒಂದೋ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ 1 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿತ್ತು.
ಸಾಮಾಜಿಕ ಜಾಲತಾಣಗಳಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೈಯಕ್ತಿ ಫೋಟೋಗಳನ್ನು ಹರಿಬಿಟ್ಟು ಸಾಲು ಸಾಲು ಆರೋಪಗಳನ್ನು ಮಾಡಿರುವ ಐಪಿಎಸ್ ಡಿ. ರೂಪಾಗೆ ಲೀಗಲ್ ನೋಟಿಸ್ ನೀಡಲಾಗಿತ್ತು. ರೋಹಿಣಿ ಸಿಂಧೂರಿ ಅವರು ತಮ್ಮ ಪರ ವಕೀಲ ಸಿವಿ ನಾಗೇಶ್ ಮೂಲಕ ಲೀಗಲ್ ನೋಟಿಸ್ ನೀಡಿದ್ದರು. ಈ ನೋಟಿಸ್ ತಲುಪಿದ 24 ಗಂಟೆಯ ಒಳಗಾಗಿ ರೂಪಾ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ: ರೋಹಿಣಿ ಸಿಂಧೂರಿಯವರ ವೈಯಕ್ತಿ ಫೋಟೋ ಏಕೆ ಹಾಕಿದ್ದೀರಿ ಎಂದು ಪ್ರಶ್ನಿಸಿದವರಿಗೆ ರೂಪಾ ಕೊಟ್ಟ ಉತ್ತರ ಹೀಗಿದೆ
ನೋಟಿಸ್ನಲ್ಲಿ 21 ಅಂಶಗಳನ್ನು ಉಲ್ಲೇಖಿಸಿ ರೂಪಾ ಅವರ ಮನೆ ಹಾಗೂ ಕೆಲಸದ ಸ್ಥಳದ ವಿಳಾಸಕ್ಕೆ ಕಳುಹಿಸಲಾಗಿತ್ತು. ಅದರೊಂದಿಗೆ ತಮ್ಮ ಫೇಸ್‌ಬುಕ್ ಪೇಜ್ನಲ್ಲಿ ಹಂಚಿಕೊಂಡಿರುವ ಮಾನಹಾನಿಕರ ಮೆಸೇಜ್‌ಗಳು ಹಾಗೂ ಚಿತ್ರವನ್ನು ತಕ್ಷಣವೇ ಡಿಲೀಟ್ ಮಾಡಬೇಕು. ಹಾಗೇ ಕ್ಷಮೆಯಾಚಿಸಬೇಕೆಂದು ನೋಟಿಸ್ನಲ್ಲಿ ಉಲ್ಲೇಖಿಸಿದ್ದರು.
ಡಿ. ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿ ಫೋಟೋಗಳನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಫೋಟೋಗಳನ್ನು ಹಾಕಿದ್ದಕ್ಕೆ ಕೆಲವರು ರೂಪಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ವೈಯಕ್ತಿಕ ಫೋಟೋಗಳನ್ನು ಈ ರೀತಿ ಬಹಿರಂಗವಾಗಿ ಹಾಕುವುದು ಎಷ್ಟು ಸರಿ? ಈ ರೀತಿ ಮತ್ತೊಬ್ಬರ ಫೋಟೋಗಳನ್ನು ಅವರ ಅನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ನಿಮ್ಮ ಸರ್ಕಾರದ ನಾಗರಿಕ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ವಾ? ಅಥವಾ ಇಂಥ ನಿಯಮಗಳು ನಿಮಗೆ ಮಾತ್ರ ಅನ್ವಯಿಸುವುದಿಲ್ವಾ? ಅಂತೆಲ್ಲಾ ರೂಪಾ ವಿರುದ್ಧ ಗರಂ ಆಗಿದ್ದರು.
ಇದನ್ನೂ ಓದಿ: ತಮ್ಮ ಖಾಸಗಿ ಫೋಟೋಗಳಿಗೆ ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿ, IPS ರೂಪಾ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನ
ಮೊದಲ ಮೊದಲಿಗೆ ರೋಹಿಣಿ ಸಿಂಧೂರಿ ಹಾಗೂ ಡಿ. ರೂಪಾ ನಡುವೆ ಕಾಳಗ ಶುರುವಾಗಿದ್ದೆ ಈ ಫೋಟೋಗಳಿಂದ. ರೂಪಾ ಅವರೇ ಸಿಂಧೂರಿ ಅವರ ಒಂದಿಷ್ಟು ಖಾಸಗಿ ಫೋಟೋಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ಗಳ ಒನ್ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಎಂದು ಪ್ರಶ್ನಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:05 pm, Fri, 24 March 23