Kannada News Karnataka Bengaluru Rohit Chakrathirtha committee dissolved and new committee will be formed soon says cm basavaraj bommai
ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ; ಸಮಿತಿಯ ನಿರ್ಧಾರವನ್ನು ಸಮರ್ಥಿಸಿಕೊಂಡ ಸಚಿವ ಬಿ.ಸಿ. ನಾಗೇಶ್
ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ಕಾರ್ಯ ಮುಗಿದಿರುವುದರಿಂದ ಕರ್ನಾಟಕ ಸರಕಾರವು ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದೆ.
ರೋಹಿತ್ ಚಕ್ರತೀರ್ಥ
Follow us on
ಬೆಂಗಳೂರು: ರೋಹಿತ್ ಚಕ್ರತೀರ್ಥ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ಪರೀಷ್ಕರಣೆ ನಡೆದಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಪಠ್ಯ ಪರಿಷ್ಕರಣೆ ಸಮಿತಿ ಕಾರ್ಯ ಮುಗಿದಿರುವುದರಿಂದ ಕರ್ನಾಟಕ ಸರಕಾರವು ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದೆ. ಅಷ್ಟೇ ಅಲ್ಲದೇ ಬಸವಣ್ಣನವರು ಕುರಿತಾದ ಗೊಂದಲ ಪರಿಹರಿಸಲು ಮತ್ತೊಂದು ಸಮಿತಿ ರಚಿಸಿ ಆ ಸಮಿತಿಯ ಮೂಲಕ ಪಾಠವನ್ನು ಪರಿಶೀಲಿಸುವ ಉದ್ದೇಶವನ್ನು ಮುಖ್ಯಮಂತ್ರಿಗಳು ಬಹಿರಂಗಪಡಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್ (CMBasavraj Bommai) ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ (BC Nagesh) ನೀಡಿದ್ದರು.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಠನೆ
ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿರುವುದರಿಂದ ಸಮಿತಿ ವಿಸರ್ಜನೆ ಮಾಡಲಾಗಿದೆ.
ಪ್ರಸ್ತುತ ಪಠ್ಯದಲ್ಲಿ ಮತ್ತೆ ಪರಿಷ್ಕರಣೆ ಇದ್ದರೆ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ. ಜೊತೆಗೆ
ಬಸವಣ್ಣನವರ ಕುರಿತ ಪಠ್ಯ ಪರಿಷ್ಕರಣೆಗೆ ನಿರ್ಧಾರ ಕಯಗೊಳ್ಳಲಾಗಿದೆ.
ಕುವೆಂಪು ಅವರ ನಾಡಗೀತೆ ಆಕ್ಷೇಪಾರ್ಹ ವಿಕೃತಗೊಳಿಸಿದ ಪಠ್ಯ ಉಲ್ಲೇಖವಾಗಿಲ್ಲ. ಇದರ ಮೂಲ ಕವನ ಬರೆದ ವ್ಯಕ್ತಿಗಳ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ
ಬರಗೂರು ರಾಮಚಂದ್ರಪ್ಪ ಅವರ ಸಮಿತಿಗಿಂತ ಈಗಿನ ರೋಹಿತ್ ಚಕ್ರತೀರ್ಥ ಅವರ ಸಮಿತಿ ಕುವೆಂಪು ಅವರ ಗದ್ಯ, ಪದ್ಯವನ್ನು ಇನ್ನೂ ಮೂರು ಏರಿಕೆ ಮಾಡಿದೆ. ಈ ಮೊದಲು ಕುವೆಂಪು ಅವರ ಸಾಹಿತ್ಯವನ್ನು ಏಳು ಬಾರಿ ಬಳಕೆ ಮಾಡಲಾಗಿತ್ತು. ಈಗ ಅದು 10ಕ್ಕೆ ಏರಿಕೆಯಾಗಿದೆ.
ನಾಡಪ್ರಭು ಕೆಂಪೇಗೌಡ ಅವರ ಪಠ್ಯದ ಸೇರ್ಪಡೆ
ಇಸ್ಲಾಂ, ಕ್ರೈಸ್ತ ಧರ್ಮದ ಪರಿಚಯದ ಜೊತೆ ಹಿಂದೂ ಧರ್ಮ ವಿಷಯ ಸೇರ್ಪಡೆ ಮಾಡಲಾಗಿದೆ.