AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohith Chkratirtha: ಸತ್ಯಕ್ಕಾಗಿ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಂಶೋಧಕ ಸಿದ್ಧನಿರುತ್ತಾನೆ: ರೋಹಿತ್ ಚಕ್ರತೀರ್ಥ

‘ವಿಸರ್ಜನೆ’ ಆದ ಮೇಲೂ ಉಳಿಯುವುದು ನನ್ನ ಜಾಯಮಾನಕ್ಕೆ ಒಗ್ಗುವಂಥಾದ್ದಲ್ಲ. ನನ್ನ ಕೆಲಸಗಳಿಗೆ ಮರಳಿದ್ದೇನೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

Rohith Chkratirtha: ಸತ್ಯಕ್ಕಾಗಿ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಂಶೋಧಕ ಸಿದ್ಧನಿರುತ್ತಾನೆ: ರೋಹಿತ್ ಚಕ್ರತೀರ್ಥ
ರೋಹಿತ್ ಚಕ್ರತೀರ್ಥ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jun 07, 2022 | 10:39 PM

Share

ಬೆಂಗಳೂರು: ‘ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಿದ್ಧನಿರುತ್ತಾನೆ’ ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ (Text Book Review Committee) ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ (Rohith Chakratirtha) ಫೇಸ್​ಬುಕ್ ಪೋಸ್ಟ್​ನಲ್ಲಿ ಹೇಳಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಿರುವುದಾಗಿ ರಾಜ್ಯ ಸರ್ಕಾರ ಘೋಷಿಸಿದ ನಂತರ ತಮ್ಮ ಅಭಿಪ್ರಾಯ ತಿಳಿಸಿರುವ ರೋಹಿತ್ ಚಕ್ರತೀರ್ಥ, ‘ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನ್ನೇ ಎದುರುಹಾಕಿಕೊಳ್ಳಲೂ ಸಿದ್ಧನಿರುತ್ತಾನೆ. ಆದರೆ ರಾಜಕೀಯ ಪಕ್ಷ, ಸರ್ಕಾರಗಳಿಗೆ ಮತಗಳೇ ಅಂತಿಮ. ಪಠ್ಯ ಸಮಿತಿಗೆ ಆರಿಸಿದ್ದೇವೆ ಎಂದು ಘೋಷಿಸಿದಾಗಲೂ ನಾನು ಉಬ್ಬಿರಲಿಲ್ಲ. ತೆಗೆದುಹಾಕಿದ್ದೇವೆ ಎಂದಾಗ ಕುಗ್ಗಲೂ ಇಲ್ಲ ಎಂದು ಹೇಳಿದ್ದಾರೆ.

‘ಓರ್ವ ಸಂಶೋಧಕನ ದಾರಿ, ಒಂದು ರಾಜಕೀಯ ಪಕ್ಷ ಅಥವಾ ಸರ್ಕಾರದ ದಾರಿಯೂ ಆಗಿರಬೇಕಿಲ್ಲ. ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನ್ನೇ ಎದುರುಹಾಕಿಕೊಳ್ಳುವುದಕ್ಕೂ ಸಿದ್ಧನಿರುತ್ತಾನೆ. ಆದರೆ ರಾಜಕೀಯ ಪಕ್ಷ ಅಥವಾ ಸರ್ಕಾರಗಳಿಗೆ ಅಂತಿಮವಾಗಿ ಮುಖ್ಯವಾಗುವುದು ಮತಗಳು. ಸತ್ಯ ಮತ್ತು ಮತ ಎಂಬೆರಡು ದಾರಿಗಳ ನಡುವೆ ಸಂಶೋಧಕ ಮೊದಲನೆಯದನ್ನು ಆಯ್ದುಕೊಂಡರೆ, ರಾಜಕೀಯ ಶಕ್ತಿ ಎರಡನೆಯದನ್ನು ಆರಿಸಿಕೊಳ್ಳುತ್ತದೆ’ ಎಂದು ತಮ್ಮ ಅಭಿಪ್ರಾಯವನ್ನು ವಿವರಿಸಿದ್ದಾರೆ.

‘ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ನನ್ನನ್ನು ಆರಿಸಿದ್ದೇವೆ ಎಂದಾಗ ನಾನು ಉಬ್ಬಿಲ್ಲ. ತೆಗೆದುಹಾಕಿದ್ದೇವೆ ಎಂದಾಗ ಕುಗ್ಗಿಯೂ ಇಲ್ಲ. ‘ಚಕ್ರತೀರ್ಥನಿಗೆ ಗೇಟ್‌ ಪಾಸ್‌’ ಎಂಬ ಮಾತನ್ನು ಮಾಧ್ಯಮದಲ್ಲಿ ಓದಿದಾಗ ನಗು ಬರುತ್ತದೆ. ಗೇಟ್​ಪಾಸ್‌ ಕೊಡಲು ನಾನು ಯಾವ ಕಾಂಪೌಂಡ್​ನೊಳಗೂ ನಿಂತಿರಲಿಲ್ಲ. ತನಗೆ ಬೇಕಾದಂತೆ ಇತಿಹಾಸ ಬರೆಯುವುದು ಎಷ್ಟು ಅರ್ಥಹೀನವೋ, ಅಷ್ಟೇ ಅರ್ಥಹೀನವಾದದ್ದು ಬೇರೆಯವರಿಗೆ ಬೇಕಾದಂತೆ ಇತಿಹಾಸ ಬರೆಯುತ್ತೇನೆ ಎಂಬುದು ಕೂಡ. ಇತಿಹಾಸಕ್ಕೆ ನಿಷ್ಠವಾಗಿ ಇತಿಹಾಸವನ್ನು ಬರೆಯಬೇಕೆಂಬ ನನ್ನದು ಎರಡು ಕಡೆಗೂ ಒಪ್ಪಿಗೆಯಾಗದ ಪಂಥವಿರಬಹುದು’ ಎಂದು ಹೇಳಿದ್ದಾರೆ.

‘ವಿಸರ್ಜನೆ’ ಆದ ಮೇಲೂ ಉಳಿಯುವುದು ನನ್ನ ಜಾಯಮಾನಕ್ಕೆ ಒಗ್ಗುವಂಥಾದ್ದಲ್ಲ. ನನ್ನ ಕೆಲಸಗಳಿಗೆ ಮರಳಿದ್ದೇನೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ