ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಯುವಕ-ಯುವತಿ ವಿರುದ್ಧ ಪ್ರಯಾಣಿಕ ಆಕ್ರೋಶ

ನಮ್ಮ ಮೆಟ್ರೋದಿಂದ ಬೆಂಗಳೂರಿನ ಜನತೆ ಸಾಕಷ್ಟು ಅನುಕೂಲವಾಗಿದೆ. ನಮ್ಮ ಮೆಟ್ರೋ ಪ್ರತಿದಿನ ಸಾಕಷ್ಟು ಜನರು ಪ್ರಯಾಣಿಸುತ್ತಾರೆ. ಹೀಗೆ ಪ್ರಯಾಣಿಸುವಾಗ ಪ್ರಯಾಣಿಕರಿಗೆ ಮುಜುಗರ ತರುವಂತಹ ಘಟನೆಗಳನ್ನು ಆಗಾಗ ನಡೆಯುತ್ತವೆ. ಇದೀಗ ಯುವಕ-ಯುವತಿ ಪ್ರಯಾಣಿಕರ ಎದುರಲ್ಲೇ ಅಸಭ್ಯವಾಗಿ ವರ್ತಿಸಿದ್ದಾರೆ.

Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:May 06, 2024 | 10:58 AM

ಬೆಂಗಳೂರು, ಮೇ 06: ನಮ್ಮ ಮೆಟ್ರೋ (Namma Metro) ರಾಜಧಾನಿ ಬೆಂಗಳೂರಿನ (Bengaluru) ಅತಿ ವೇಗದ ಸಂಪರ್ಕ ಸಾರಿಗೆಯಾಗಿದೆ. ಈ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮ (BMRCL) ಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು KPSB 52 ಎಂಬ ಎಕ್ಸ್​ (ಟ್ವಿಟರ್​) ಖಾತೆ ಮೂಲಕ ಪೋಸ್ಟ್​​​ ಮಾಡಲಾಗಿದ್ದು “ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ” ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ “ಬೆಂಗಳೂರು ಮೆಟ್ರೋ ನಿಧಾನವಾಗಿ ದೆಹಲಿ ಮೆಟ್ರೋ ರೀತಿ ಆಗುತ್ತಿದೆ. ಯುವತಿ ಯುವಕನಿಗೆ ಮುತ್ತು ನೀಡುತ್ತಿದ್ದಾಳೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್​ಸಿಎಲ್​​​ಗೆ ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ಮಾರಾಟ ಮಾಡಲು ಮೆಟ್ರೋ ವಾಶ್ ರೂಂನಲ್ಲಿ ಕ್ಯೂಆರ್ ಕೋಡ್ ಅಂಟಿಸಿ ವ್ಯಕ್ತಿ: ಬಂಧನ

ಯುವತಿಗೆ ಲೈಂಗಿಕ ಕಿರುಕುಳ

ಕಳೆದ ವರ್ಷ ನವೆಂಬರ್​ 20 ರಂದು ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮೆಜೆಸ್ಟಿಕ್ ಮೆಟ್ರೋದಲ್ಲಿ ಓರ್ವ ಯುವಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಯುವತಿ ಪ್ರತಿ ದಿನ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ, ಸೋಮವಾರ ಬೆಳಿಗ್ಗೆ 8.30ರ ಸುಮಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ಮೆಟ್ರೋ ಹತ್ತಿದ ನಂತರ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದನು. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಅರಿವಾದಾಗ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಸಹ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ ಎಂದು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ Reddit ನಲ್ಲಿ ವಿಚಾರ ಬಹಿರಂಗ ಪಡಿಸಿದ್ದರು. ಹಾಗೂ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು.

ಅಧಿಕಾರಿಗಳು ಹೇಳಿದ್ದೇನು?

ಈ ಲೈಂಗಿಕ ದೌರ್ಜನ್ಯ ಕೇಸ್ ಬಗ್ಗೆ BMRCL ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು. ಸೆ.9ರಂದು ನಗರದ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿ, ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ಪ್ರಯಾಣಿಕರೊಬ್ಬರ ಪರ್ಸ್‌ ಸಹ ಕಳವು ಮಾಡಲಾಗಿತ್ತು. ಆದರೆ ನ.20ರಂದು ನಡೆದ ಘಟನೆ ಕುರಿತು ಇದುವರೆಗೂ ಯಾರೂ ದೂರು ನೀಡಿಲ್ಲ.  ದೂರು ನೀಡಿದರೆ ತಕ್ಷಣವೇ ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ತಿಳಿಸಿದ್ದರು.

ಆದರೆ ಈ ಹಿಂದೆ ಕೂಡ ಈ ರೀತಿ ಲೈಂಗಿಕ ಕಿರುಕುಳ ನಡೆದಿರುವುದು ಸಾಭೀತಾಗಿದ್ದವು. ಮೆಟ್ರೋದಲ್ಲಿ ತಿಂಡಿ ತಿಂದರೂ, ನೀರು ಕುಡಿದರೂ ಫೈನ್ ಹಾಕುವ ಬಿಎಂಆರ್​ಸಿಎಲ್ ಇಂತಹ ಘಟನೆಗಳು ನಡೆದರೂ ಏಕೆ ಎಚ್ಚರಿಕೆ ವಹಿಸುತ್ತಿಲ್ಲ, ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ಕಿಡಿಕಾರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Mon, 6 May 24