AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪುಂಡರ ಹಾವಳಿ! ರಸ್ತೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ

ಹಲಸೂರು ಮಾರುಕಟ್ಟೆಯಲ್ಲಿ ಇಬ್ಬರು ನಿತ್ಯ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ದುಷ್ಕೃತ್ಯದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಪುಂಡರ ಹಾವಳಿ! ರಸ್ತೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ
ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ
TV9 Web
| Edited By: |

Updated on: Mar 01, 2022 | 9:30 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪುಂಡರ ಹಾವಳಿ ಹೆಚ್ಚಾಗಿದೆ. ರಸ್ತೆಗೆ ಬರುವ ಮಹಿಳೆಯರ ಜೊತೆ ಪುಡಿ ರೌಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ. ಅಸಭ್ಯ ವರ್ತನೆ (Rude Behavior) ಬಗ್ಗೆ ಪ್ರಶ್ನಿಸಿದರೆ ಅಂತವರ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಹಲಸೂರು ಮಾರುಕಟ್ಟೆಯಲ್ಲಿ ಇಬ್ಬರು ನಿತ್ಯ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ದುಷ್ಕೃತ್ಯದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರಿಗೆ ಟ್ವೀಟ್ ಮಾಡಿದ್ದಾರೆ.

ಮದ್ಯ ಸಾಗಾಟ ಮಾಡುತ್ತಿದ್ದವರು ಬಂಧನ: ವಿಜಯಪುರ: ಮಹಾರಾಷ್ಟ್ರಕ್ಕೆ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದದಲ್ಲಿ ಅಬಕಾರಿ ಪೊಲೀಸರ ದಾಳಿ ವೇಳೆ ನಿಶಾಂತ್ ಕಾಂಬಳೆ ಹಾಗೂ ಯಲ್ಲಾಲಿಂಗ ಹೊನ್ನೂರ ಬಂಧನಕ್ಕೊಳಗಾಗಿದ್ದಾರೆ. ಬಂಧಿತರಿಂದ 10 ಬಾಕ್ಸ್ ಗೋವಾ ಮಧ್ಯ ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಟರಿಗಳನ್ನ ಕದಿಯುತ್ತಿದ್ದ ಆರೋಪಿಗಳ ಅರೆಸ್ಟ್: ಬೆಲೆ ಬಾಳುವ ಬ್ಯಾಟರಿಗಳನ್ನ ಕದಿಯುತ್ತಿದ್ದ ಆರೋಪಿಗಳ ಅರೆಸ್ಟ್ ಆಗಿದ್ದಾರೆ. ಚಾಮರಾಜಪೇಟೆ ಪೊಲೀಸರ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಆರೋಪಿಗಳು ಚಾಮರಾಜಪೇಟೆ, ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ ಯುಪಿಎಸ್ ಬ್ಯಾಟರಿ ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ 1 ಲಕ್ಷ ಮೌಲ್ಯದ 9 ಬ್ಯಾಟರಿಗಳು ಹಾಗೂ ಒಂದು ಆಟೋ ಜಪ್ತಿ ಮಾಡಿದ್ದಾರೆ.

ಮಾರಕಾಸ್ತ್ರ ಹಿಡಿದು ಓಡಾಡಿದ್ದ ವಿದೇಶಿ ಪ್ರಜೆ ಸೆರೆ: ಮದ್ಯದ ಅಮಲಿನಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದ ವಿದೇಶಿ ಪ್ರಜೆಯನ್ನು ಸೆರೆಹಿಡಿಯಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ವಿದೇಶಿ ಪ್ರಜೆ ಮಾರಕಾಸ್ತ್ರ ಹಿಡಿದು ಓಡಾಡಿದ್ದ. ಓಕಾವೋ ಲಿಯೋಸ್ ಬಂಧಿತ ವಿದೇಶಿ ಪ್ರಜೆ. ಈತ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಹೆದರಿಸಿದ್ದ. ವಶಕ್ಕೆ ಪಡೆಯಲು ಹೋದ ಎಎಸ್ಐ ಗೆ ಕೈಯಿಂದ ಹಲ್ಲೆ ನಡೆಸಿದ್ದ. ಶರಣಾಗುವಂತೆ ಹೇಳಿದ್ದರೂ ಮಾರಕಾಸ್ತ್ರ ಬೀಸುತ್ತಾ ಸಾರ್ವಜನಿಕರ ಮೇಲೆ ಹಲ್ಲೆಗೆ ಮುಂದಾಗಿದ್ದ.

ಇದನ್ನೂ ಓದಿ

Russia Ukraine War Highlights: ಉಕ್ರೇನ್​ನ​ ಕೀವ್, ಖಾರ್ಕಿವ್ ನಗರಗಳ ಮೇಲೆ ರಷ್ಯಾ ಪಡೆಗಳಿಂದ ರಾತ್ರಿಯಿಡೀ ಗುಂಡಿನ ದಾಳಿ

Shivratri 2022: ಈ ದಿನ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ; ಶಿವರಾತ್ರಿ ವಿಶೇಷತೆ ಏನು?

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ