ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ರೆ ರೌಡಿಶೀಟ್ ಓಪನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ
ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿವೆ. ರಸ್ತೆಯಲ್ಲಿ ವಿನಾಕಾರಣ ವಾನಹಗಳನ್ನು ಅಡ್ಡಗಟ್ಟಿ ದುರ್ವತನೆ ತೋರುತ್ತಿದ್ದಾರೆ. ಇತ್ತೀಚಿಗೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಕಾರು, ಬೈಕ್ ಅಡ್ಡಗಟ್ಟಿ ಗಲಾಟೆ ಮಾಡುವ ಕಿಡಿಗೇಡಿಗಳ ವಿರುದ್ಧ ರೌಡಿಶೀಟರ್ ಓಪನ್ ಮಾಡಲು ಕಮಿಷನರ್ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು, (ಆಗಸ್ಟ್ 13): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಅಡ್ಡಗಟ್ಟಿ ಗಲಾಟೆ ಮಾಡುವ ಪ್ರಕರಣಗಳು (Road Rages Cases) ಛಅಸೆಸ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (Bengaluru police commissioner B Dayananda) ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕಾರು, ಬೈಕ್ ಅಡ್ಡಗಟ್ಟಿ ಗಲಾಟೆ ಮಾಡಿದವರ ಅವರ ವಿರುದ್ಧ ರೌಡಿಶೀಟ್ ಓಪನ್ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು (ಆಗಸ್ಟ್ 13) ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರಸ್ತೆಯಲ್ಲಿ ಗಲಾಟೆ ಅಥವಾ ವಾಹನ ಸವಾರರ ಸುಲಿಗೆ ಮಾಡಿದ್ರೆ ಅಂತಹ ಕಿಡಿಗೇಡಿಗಳ ವಿರುದ್ಧ ರೌಡಿಶೀಟರ್ ತೆರೆದು ಸೂಕ್ತ ಕ್ರಮಕೈಗೊಳ್ಳಿ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಇದನ್ನೂ ಓದಿ: ಬೆಂಗಳೂರು: ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ ಪ್ರಕರಣ, ಆರೋಪಿಗಳ ಬಂಧನ
ಇತ್ತೀಚೆಗಷ್ಟೇ ವೈಟ್‌ಫೀಲ್ಡ್‌ನ ಸಿದ್ದಾಪುರದಲ್ಲಿ ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಗಲಾಟೆ ಮಾಡಿದ್ದರು. ಬೈಕ್ ನಲ್ಲಿ ಬಂದ ಇಬ್ಬರು ಕಾರನ್ನು ಹಿಂಬಾಲಿಸಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ್ದ ವಿಡಿಯೋ ವೈರಲ್ ಆಗಿತ್ತು. ಬಳಿಕ ವಿಡಿಯೋ ಆಧಾರದ ಮೇಲೆ ಬೆಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.
ಬೆಂಗಳೂರಿನಲ್ಲಿ ಮಾತ್ರವಲ್ಲ ಕರ್ನಾಟಕದಾದ್ಯಂತ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಲೇ ಇವೆ. ಇತ್ತೀಚೆಗೆ ಬಂಡೀಪುರ ಅರಣ್ಯದಿಂದ ಪ್ರಯಾಣಿಸುತ್ತಿದ್ದ ಕಾರನ್ನು ದುಷ್ಕರ್ಮಿಗಳು ತಡೆದಿದ್ದರು. ಈ ಕೃತ್ಯದ ವಿಡಿಯೋ ಕಾರಿನ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆತಯಾಗಿತ್ತು. ನಂತರ ಪೊಲೀಸರು ವಾಹನವನ್ನು ಟ್ರ್ಯಾಕ್ ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು.
ಹೀಗೆ ರೋಡ್ ರೇಜ್ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿವೆ. ರಸ್ತೆಯಲ್ಲಿ ವಿನಾಕಾರಣ ಕಾರು, ಬೈಕ್ ಅಡ್ಡಗಟ್ಟಿ ಕಿಡಿಗೇಡಿಗಳು ದುರ್ವತನೆ ತೋರುತ್ತಿದ್ದಾರೆ. ಇತ್ತೀಚಿಗೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ರೋಡ್ ರೇಜ್ ಕೃತ್ಯಗಳ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಕಮಿಷನರ್ಗೆ ದೂರು ನೀಡುತ್ತಿದ್ದಾರೆ. ಇದರಿಂದ ಅವರು ಈ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ