ಬೆಂಗಳೂರಿನ ವಿವೇಕನಗದಲ್ಲಿ ಯುವ ರೌಡಿಶೀಟರ್ ಆತ್ಮಹತ್ಯೆ, ಹಲ್ಲೆ ಪ್ರಕರಣ: ಕುರುಗೋಡು ಪಿಎಸ್ಐ- ಕಾನ್ಸಟೇಬಲ್ ಅಮಾನತು

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಿವೇಕನಗದಲ್ಲಿ ಯುವ ರೌಡಿಶೀಟರ್ ಆತ್ಮಹತ್ಯೆ, ಹಲ್ಲೆ ಪ್ರಕರಣ: ಕುರುಗೋಡು ಪಿಎಸ್ಐ- ಕಾನ್ಸಟೇಬಲ್ ಅಮಾನತು
ಸಾಂಕೇತಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 26, 2022 | 5:55 PM

ಬೆಂಗಳೂರು: ಬೆಂಗಳೂರಿನ ವಿವೇಕನಗದಲ್ಲಿ ಯುವ ರೌಡಿಶೀಟರ್ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೌಡಿಶೀಟರ್ ನವೀನ್ ಅಲಿಯಾಸ್ ವಿಲಿಯಂ(32) ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದ್ಯ ವ್ಯಸನಿಯಾಗಿದ್ದ ನವೀನ್, ಅಶೋಕ ನಗರ ಪೊಲೀಸ್​​ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನವೀನ್, ನೇಣಿಗೆ ಶರಣಾಗಿದ್ದಾನೆ. ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನಿಗೆ ಪೊಲೀಸರಿಂದ ಹಲ್ಲೆ ಪ್ರಕರಣ: ಕುರುಗೋಡು ಪಿಎಸ್ಐ- ಹೆಡ್ ಕಾನ್ಸಟೇಬಲ್ ಅಮಾನತು ಬಳ್ಳಾರಿ: ಎಮ್ಮೆ‌ ಕಳ್ಳತನದ ಆರೋಪದಲ್ಲಿ ಯುವಕನಿಗೆ ಪೊಲೀಸರಿಂದ ಹಲ್ಲೆ ಪ್ರಕರಣದಲ್ಲಿ ಕುರುಗೋಡು ಠಾಣೆಯ ಪಿಎಸ್ಐ ಹಾಗೂ ಹೆಡ್ ಕಾನ್ಸಟೇಬಲ್ ಅಮಾನತುಗೊಂಡಿದ್ದಾರೆ. ಪಿಎಸ್ಐ ಮೌನೇಶ ರಾಠೋಡ್ ಹಾಗೂ ಮುಖ್ಯ ಪೇದೆ ಸುರೇಶ ಅಮಾನತುಗೊಂಡವರು. ಎಫ್ಐಆರ್ ದಾಖಲಿಸದೇ ಆರೋಪಿಯ ಬಂಧನ ಹಾಗೂ ಬಂಧನ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಕಾಯ್ದಿರಿಸಿ, ಅಮಾನತು ಮಾಡಲಾಗಿದೆ. ಇವರಿಬ್ಬರನ್ನೂ ಅಮಾನತು ಮಾಡಿ ಬಳ್ಳಾರಿ ಪೊಲೀಸ್​ ವರಿಷ್ಠಾಧಿಕಾರಿ ಎಸ್ ಸೈದುಲು ಅಡಾವತ್ ಆದೇಶ ಹೊರಡಿಸಿದ್ದಾರೆ.

ದನ ಕಳ್ಳತನ ಅರೋಪದ ಮೇರೆಗೆ ವದ್ದಟ್ಟಿ ಗ್ರಾಮದ ಭರತ ಹಾಗೂ ಮಂಜು ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿ ಪೊಲೀಸರು ದಲಿತ ಯುವಕ ಭರತಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪೊಲೀಸರ ಥಳಿತಕ್ಕೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಭರತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕ‌ಂಪ್ಲಿ ಕ್ಷೇತ್ರದ ಕುರಗೋಡ ಠಾಣೆಯ ಪೊಲೀಸರ ದೌರ್ಜನ್ಯ ಖಂಡಿಸಿ ವದ್ದಟ್ಟಿ ಗ್ರಾಮಸ್ಥರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದ ರು.

ಇದನ್ನೂ ಓದಿ: BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಇದನ್ನೂ ಓದಿ: ಅಂಡರ್ ಪಾಸ್​ನಲ್ಲಿ ನೀರು ಇರಲಿಲ್ಲ ಅಂದಿದ್ದರೆ ನನ್ನ ಮಗಳು ವಾಪಸ್ ಬರುತ್ತಿದ್ದಳು; ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಮೃತಪಟ್ಟ ಬಾಲಕಿ ತಾಯಿ ಕಣ್ಣೀರು

Published On - 5:30 pm, Sat, 26 March 22

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ